Viral Video: ಮದುವೆ ವೇಳೆ ಪ್ರಜ್ಞೆ ತಪ್ಪಿ ಬಿದ್ದ ವಧು; ಕಂಗಾಲಾಗಿ ಮಂಟಪದಿಂದ ಓಡಿಹೋದ ವರ!

Trending Video: ಮದುವೆಯಲ್ಲಿ ತನ್ನ ವಧುವಿನ ಹಣೆಗೆ ಸಿಂಧೂರ ಹಚ್ಚಲು ಹೋದ ವರನಿಗೆ ಶಾಕ್ ಆಗಿದೆ. ಆಕೆಯ ಹಣೆಗೆ ಕುಂಕುಮ ಇಡುತ್ತಿದ್ದಂತೆ ವಧು ಮೂರ್ಛೆ ತಪ್ಪಿ ಕೆಳಗೆ ಬಿದ್ದಿದ್ದಾಳೆ.

Viral Video: ಮದುವೆ ವೇಳೆ ಪ್ರಜ್ಞೆ ತಪ್ಪಿ ಬಿದ್ದ ವಧು; ಕಂಗಾಲಾಗಿ ಮಂಟಪದಿಂದ ಓಡಿಹೋದ ವರ!
ಮದುವೆಯ ವೈರಲ್ ವಿಡಿಯೋ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 19, 2021 | 6:04 PM

ಮದುವೆಯೆಂದ ಮೇಲೆ ತಮಾಷೆ, ಮೋಜು, ಮಸ್ತಿ, ಎಮೋಷನಲ್ ಎಲ್ಲವೂ ಸಾಮಾನ್ಯ. ಆದರೆ, ಕೆಲವೊಮ್ಮೆ ಮುಜುಗರಕ್ಕೀಡಾದ ಘಟನೆಗಳೂ ನಡೆಯುತ್ತವೆ. ಮದುವೆಯ ವಿಡಿಯೋವನ್ನು ನೋಡುವುದೇ ಒಂದು ರೀತಿಯ ಖುಷಿ. ಒಂದೊಂದು ಮದುವೆಯ ಜೊತೆಗೂ ಅನೇಕ ಅಚ್ಚರಿಯ ಕತೆಗಳಿರುತ್ತವೆ, ತಮಾಷೆಗೆ ಘಟನೆಗಳಿರುತ್ತವೆ. ಅದೇ ರೀತಿ ಮದುವೆಯ ಫನ್ನಿ ವಿಡಿಯೋವೊಂದು (Funny Video) ಈಗ ಭಾರೀ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ (Viral Video) ವರನೇ ಮಂಟಪದಿಂದ ಕಾಲು ಕಿತ್ತಿದ್ದಾನೆ. ಅಷ್ಟಕ್ಕೂ ಅಲ್ಲಿ ಆಗಿದ್ದೇನು?

ಉತ್ತರ ಕರ್ನಾಟಕದಲ್ಲಿ ನಡೆಯುವ ಮದುವೆಯಲ್ಲಿ ಮಾಂಗಲ್ಯದಷ್ಟೇ ಪ್ರಾಮುಖ್ಯತೆ ಸಿಂಧೂರಕ್ಕೂ ಇರುತ್ತದೆ. ಮದುವೆಯಲ್ಲಿ ತನ್ನ ವಧುವಿನ ಹಣೆಗೆ ಸಿಂಧೂರ ಹಚ್ಚಲು ಹೋದ ವರನಿಗೆ ಶಾಕ್ ಆಗಿದೆ. ಆಕೆಯ ಹಣೆಗೆ ಕುಂಕುಮ ಇಡುತ್ತಿದ್ದಂತೆ ವಧು ಮೂರ್ಛೆ ತಪ್ಪಿ ಕೆಳಗೆ ಬಿದ್ದಿದ್ದಾಳೆ. ತಕ್ಷಣ ಸುತ್ತಮುತ್ತಲಿನವರು ಓಡಿಬಂದು ಆಕೆಯನ್ನು ಎತ್ತಿ ಕೂರಿಸಿದ್ದಾರೆ. ಇದನ್ನು ನೋಡಿದ ವರ ತನ್ನ ಹಾರವನ್ನು ಕಿತ್ತೆಸೆದು ಮಂಟಪದಿಂದ ಓಡಿಹೋಗಿದ್ದಾನೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಮದುವೆಯ ಹಾಲ್​ನಿಂದ ಹೊರಗೆ ಹೋದ ವರನನ್ನು ಅಲ್ಲಿದ್ದವರು ತಡೆದು ನಿಲ್ಲಿಸಲು ಪ್ರಯತ್ನಿಸಿದರೂ ಆತ ಕೇಳದೆ ಅಲ್ಲಿಂದ ಹೊರನಡೆದಿದ್ದಾನೆ. ಆ ವಧು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬೀಳಲು ಕಾರಣವೇನೆಂಬುದು ಗೊತ್ತಾಗಿಲ್ಲ. ಆಕೆಗೆ ಆರೋಗ್ಯ ಸರಿಯಾಗಿರಲಿಲ್ಲವೇ, ಆಕೆ ನಂತರ ಸುಧಾರಿಸಿಕೊಂಡಳೇ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಈ ವಿಡಿಯೋವನ್ನು 14 ಸಾವಿರಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ. ಆಕೆಗೆ ಈ ಮದುವೆ ಇಷ್ಟವಿಲ್ಲದ ಕಾರಣ ಈ ರೀತಿ ನಾಟಕ ಮಾಡಿರಬಹುದು ಎಂಬ ಚರ್ಚೆಗಳೂ ಸೋಷಿಯಲ್ ಮೀಡಿಯಾದಲ್ಲಿ ನಡೆದಿವೆ.

ಇದನ್ನೂ ಓದಿ: Shocking News: ಮನುಷ್ಯರ ಮೂತ್ರದಿಂದ ತಯಾರಾದ ಬಿಯರ್​ಗೆ ಭಾರೀ ಬೇಡಿಕೆ; ಏನಿದು ವಿಚಿತ್ರ ಸುದ್ದಿ?

Cadbury Chocolate: ಡೇರಿ ಮಿಲ್ಕ್ ಚಾಕೋಲೇಟ್​ನಲ್ಲಿ ದನದ ಮಾಂಸವಿದೆಯಾ?; ಕ್ಯಾಡ್​ಬರಿಯಿಂದ ಅಚ್ಚರಿಯ ಸ್ಪಷ್ಟನೆ

(Scared Groom Runs Away After Bride Falls Unconscious During Sindoor Ceremony Funny Video Viral)

Published On - 6:01 pm, Mon, 19 July 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?