ನವದೆಹಲಿ: ಉತ್ತರ ಪ್ರದೇಶದ ಮದುವೆಯಲ್ಲಿ ದಂಪತಿಗಳು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವೈರಲ್ ವೀಡಿಯೊ ವೈರಲ್ ಆಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮದುವೆಯಾದ ಬಳಿಕ ತನ್ನ ಹೆಂಡತಿಯನ್ನು ಪಕ್ಕದಲ್ಲಿ ನಿಲ್ಲಿಸಿಕೊಂಡು, ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಿಸಿದ್ದಾನೆ. ಅದರ ವಿಡಿಯೋವನ್ನು ಚಿತ್ರೀಕರಿಸಿರುವ ಮದುವೆಯಲ್ಲಿ ಭಾಗಿಯಾಗಿದ್ದ ಮಂದಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.
ದೆಹಲಿ ಸಮೀಪದ ಘಜಿಯಾಬಾದ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ದಂಪತಿಗಳು ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಧು ತನ್ನ ಗಂಡನೊಂದಿಗೆ ಪೋಸ್ ನೀಡುತ್ತಿದ್ದಂತೆ ವರನು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ದೆಹಲಿ ಸಮೀಪದ ಘಜಿಯಾಬಾದ್‌ನಲ್ಲಿ ಈ ಘಟನೆ ನಡೆದಿದೆ.
शादी के जोश में खोया होश,दूल्हा दुल्हन पर कानूनी कार्रवाई की तैयारी,ग़ाज़ियाबाद के घंटाघर का मामला pic.twitter.com/aTeoI2xcZD
— Mukesh singh sengar मुकेश सिंह सेंगर (@mukeshmukeshs) December 14, 2021
ಉತ್ತರ ಭಾರತದ ಕೆಲವು ಭಾಗಗಳಲ್ಲಿ ಸಂಭ್ರಮಾಚರಣೆಯ ಗುಂಡು ಹಾರಿಸುವುದು ಸರ್ವೇಸಾಮಾನ್ಯವಾಗಿದೆ. ಆದರೂ ಆಗಾಗ್ಗೆ ಸಾವು-ನೋವುಗಳು ಮತ್ತು ಪೊಲೀಸ್ ಕ್ರಮಗಳು ಸಂಭವಿಸಿವೆ. ಆಗಸ್ಟ್‌ನಲ್ಲಿ ದೆಹಲಿಯಲ್ಲಿ ಹುಟ್ಟುಹಬ್ಬದ ಆಚರಣೆಯಲ್ಲಿ ಗುಂಡು ಹಾರಿಸಿದ ಇಬ್ಬರನ್ನು ಬಂಧಿಸಲಾಗಿತ್ತು. ದೆಹಲಿಯ ಪೂರ್ವ ಪಶ್ಚಿಮ ವಿಹಾರ್‌ನಲ್ಲಿರುವ ಮನೆಯೊಂದರ ಮೇಲ್ಛಾವಣಿಯಲ್ಲಿ ಆಯೋಜಿಸಲಾಗಿದ್ದ ಸಂಭ್ರಮಾಚರಣೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ ನಂತರ ವ್ಯಕ್ತಿಯನ್ನು ಗುರುತಿಸಲಾಗಿದೆ.
ಒಂದು ತಿಂಗಳ ಹಿಂದೆ, ಜುಲೈನಲ್ಲಿ ಘಜಿಯಾಬಾದ್‌ನಲ್ಲಿ ಬ್ಯಾಚುಲರ್ ಪಾರ್ಟಿಯಲ್ಲಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಗುಂಡು ಹಾರಿಸಿ 26 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು.
ಇದನ್ನೂ ಓದಿ: Viral Video: ಬಾಯಾರಿದ ನಾಯಿಮರಿಗೆ ಬೋರ್ವೆಲ್ ಪಂಪ್ ಹೊಡೆದು ನೀರು ಕುಡಿಸಿದ ಬಾಲಕ; ವಿಡಿಯೋ ವೈರಲ್
Shocking News: ಹೋಂ ವರ್ಕ್ ಮಾಡದ ಮಗನ ಕೈ-ಕಾಲು ಕಟ್ಟಿ ಫ್ಯಾನ್ಗೆ ನೇತು ಹಾಕಿದ ಅಪ್ಪ!