AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊರೊನಾ ಬಳಿಕ ಕೆಲಸವಿಲ್ಲದೆ ಹೊಟ್ಟೆಪಾಡಿಗಾಗಿ ಫುಡ್​ ಸ್ಟಾಲ್ ತೆರೆದ ಗಾಯಕಿ

ಈ ವಿಡಿಯೋವನ್ನು ಸುಮಾರು 7 ದಿನಗಳ ಹಿಂದೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ವಿಡಿಯೋಗೆ ಇಲ್ಲಿಯವರೆಗೆ ಸುಮಾರು 28,000 ಜನರು ಲೈಕ್‌ ನೀಡಿದ್ದಾರೆ.

Viral Video: ಕೊರೊನಾ ಬಳಿಕ ಕೆಲಸವಿಲ್ಲದೆ ಹೊಟ್ಟೆಪಾಡಿಗಾಗಿ ಫುಡ್​ ಸ್ಟಾಲ್ ತೆರೆದ ಗಾಯಕಿ
ಗಾಯಕಿಯ ವಿಡಿಯೋ ವೈರಲ್
TV9 Web
| Edited By: |

Updated on:Mar 16, 2022 | 1:05 PM

Share

ಕೊರೊನಾ (Coronavirus) ಸಾಂಕ್ರಾಮಿಕ ರೋಗದ ಪ್ರಾರಂಭದಿಂದಲೂ ಅನೇಕ ಜನರು ತಮ್ಮ ಜೀವನವನ್ನು ನಡೆಸಲಾಗದೆ, ಆರ್ಥಿಕವಾಗಿ ತೀವ್ರ ನಷ್ಟವನ್ನು ಅನುಭವಿಸಿ ಕೈ ಚೆಲ್ಲಿ ಕುಳಿತಿದ್ದಾರೆ. ಎಷ್ಟೋ ಜನರು ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇನ್ನು ಹಲವರು ತಾವು ಮಾಡುತ್ತಿದ್ದ ವೃತ್ತಿಯನ್ನು ಬಿಟ್ಟು ಹೊಟ್ಟೆಪಾಡಿಗೆ ಏನೇನೋ ಕೆಲಸ ಮಾಡಿಕೊಂಡು ಬದುಕುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಕಲಾವಿದರು, ಗಾಯಕರು ಅಥವಾ ನೃತ್ಯಗಾರರು ಕೊರೊನಾದಿಂದಾಗಿ ಹಲವು ತಿಂಗಳ ಕಾಲ ನಿರುದ್ಯೋಗಿಗಳಾಗಿ ಮನೆಯಲ್ಲೇ ಉಳಿಯಬೇಕಾಯಿತು. ಆಯಾ ದಿನದ, ತಿಂಗಳ ಸಂಬಳವನ್ನೇ ನಂಬಿಕೊಂಡು ಬದುಕುತ್ತಿದ್ದ ಸಾಕಷ್ಟು ಜನರ ಜೀವನವೇ ಹಳಿ ತಪ್ಪಿದೆ. ಇದೀಗ ಇನ್​ಸ್ಟಾಗ್ರಾಂನಲ್ಲಿ (Instagram) ವೈರಲ್ ಆಗಿರುವ ವಿಡಿಯೋದಲ್ಲಿ ಗಾಯಕಿಯೊಬ್ಬಳ ಜೀವನವನ್ನು ತೆರೆದಿಡಲಾಗಿದೆ. ಗಾಯಕಿಯೊಬ್ಬಳು ಕೊರೊನಾ ಬಳಿಕ ಕೆಲಸವಿಲ್ಲದೆ ಫುಡ್ ಸ್ಟಾಲ್ (Food Stall) ತೆರೆದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಗುಜರಾತ್‌ನ ಜಾಮ್‌ನಗರದಲ್ಲಿರುವ ಗಾಯಕಿ ಕೊರೊನಾವೈರಸ್ ಹಾವಳಿ ಶುರುವಾದಾಗಿನಿಂದ ಫುಡ್​ ಸ್ಟಾಲ್​ ತೆರೆದಿದ್ದಾರೆ. ಲಾಕ್​ಡೌನ್ ಸಮಯದಲ್ಲಿ ಹಾಡಲು ಎಲ್ಲೂ ಅವಕಾಶವಿಲ್ಲದೆ ಜೀವನ ಸಾಗಿಸುವುದೇ ಕಷ್ಟವಾಗಿತ್ತು. ಹೀಗಾಗಿ, ಬೇರೆ ಆಯ್ಕೆಯನ್ನು ನೋಡಿಕೊಳ್ಳಬೇಕಾದ್ದರಿಂದ ಫುಡ್ ಸ್ಟಾಲ್ ಶುರು ಮಾಡಿದೆ. ಅಂದಿನಿಂದ ಇಲ್ಲಿಯವರೆಗೂ ವ್ಯಾಪಾರ ಚೆನ್ನಾಗಿಯೇ ನಡೆಯುತ್ತಿದೆ. ನಾನು ಈಗ ಮೊದಲಿಗಿಂತಲೂ ಖುಷಿಯಾಗಿದ್ದೇನೆ ಎಂದು ಆ ಯುವತಿ ಹೇಳಿದ್ದಾಳೆ.

ಸಾಂಕ್ರಾಮಿಕ ರೋಗದಿಂದಾಗಿ ಕೆಲಸವಿಲ್ಲದೆ ಕೆಲವು ಮಹಿಳೆಯರಿಗೆ ಕೆಲಸ ಕೊಟ್ಟು ಒಂದು ಫುಡ್ ಸ್ಟಾಲ್ ಶುರು ಮಾಡಿದ ಯುವತಿಯ ಫುಡ್ ಸ್ಟಾಲ್ ಯಶಸ್ವಿಯಾಗಿ ನಡೆಯುತ್ತಿದೆ. ಆಕೆಯನ್ನು ನೆಟ್ಟಿಗರು “ಫ್ರಾಂಕಿ ವುಮನ್” ಎಂದು ಕರೆದಿದ್ದಾರೆ. ಕಷ್ಟದ ಸಂದರ್ಭಗಳಲ್ಲಿಯೂ ಭರವಸೆ ಕಳೆದುಕೊಳ್ಳದಂತೆ ಆಕೆ ಇತರರನ್ನು ಪ್ರೇರೇಪಿಸುತ್ತಿದ್ದಾರೆ ಎಂದು ಈ ವೀಡಿಯೋಗೆ ಕ್ಯಾಪ್ಷನ್ ನೀಡಲಾಗಿದೆ.

ಈ ವಿಡಿಯೋವನ್ನು ಸುಮಾರು 7 ದಿನಗಳ ಹಿಂದೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ವಿಡಿಯೋಗೆ ಇಲ್ಲಿಯವರೆಗೆ ಸುಮಾರು 28,000 ಜನರು ಲೈಕ್‌ ನೀಡಿದ್ದಾರೆ. ಅನೇಕ ಜನರು ಆಕೆಯ ಶ್ರಮವನ್ನು ಹೊಗಳಿ ಕಮೆಂಟ್ ಕೂಡ ಮಾಡಿದ್ದಾರೆ.

“ತಮ್ಮ ನೋವನ್ನು ಶಕ್ತಿಯಾಗಿ ಪರಿವರ್ತಿಸುವ ಎಲ್ಲಾ ಮಹಿಳೆಯರಿಗೆ ಅಭಿನಂದನೆಗಳು” ಎಂದು ನೆಟ್ಟಿಗರೊಬ್ಬರು ಇನ್​ಸ್ಟಾಗ್ರಾಂನಲ್ಲಿ ಈ ವಿಡಿಯೋಗೆ ಕಮೆಂಟ್ ಮಾಡಿದ್ದಾರೆ. ಆಕೆಯ ಧ್ವನಿ ಅದ್ಭುತವಾಗಿದೆ. ಆಕೆಗೆ ಹಾಡಲು ಅವಕಾಶಗಳು ಸಿಗಬೇಕು ಎಂದು ಇನ್ನೊಬ್ಬರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video: ಚಲಿಸುವ ರೈಲಿನಿಂದ ಬಿದ್ದ ಯುವಕ; ಹೀರೋ ರೀತಿ ಬಂದು ಜೀವ ಉಳಿಸಿದ ರೈಲ್ವೆ ಸಿಬ್ಬಂದಿ

Shocking Video: ವಿದ್ಯಾರ್ಥಿಗಳ ಮೊಬೈಲ್​ಗಳನ್ನು ಕಸಿದುಕೊಂಡು ಸುಟ್ಟು ಹಾಕಿದ ಶಿಕ್ಷಕರು; ಶಾಕಿಂಗ್ ವಿಡಿಯೋ ಇಲ್ಲಿದೆ

Published On - 1:04 pm, Wed, 16 March 22

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ