ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ಹೋದರೂ ಭಾರತೀಯ ಸಂಸ್ಕೃತಿ ಹಾಗೂ ಆಚಾರ ವಿಚಾರಗಳನ್ನು ಮರೆತಿಲ್ಲ ಎಂಬುದಕ್ಕೆ ಉತ್ತಮ ಉದಾಹರಣೆಯಾಗಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಬ್ರಿಟನ್‌ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ‘ಜೈ ಶ್ರೀ ರಾಮ್’ ಎಂದು ಕೂಗಿ ಶಿಕ್ಷಕಿಯ ಪಾದ ಸ್ಪರ್ಶಿಸಿದ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ.
ಈ ವೈರಲ್ ವಿಡಿಯೋದಲ್ಲಿ ವಿದ್ಯಾರ್ಥಿ ಸಮಾರಂಭದಲ್ಲಿ ಜೋರಾದ ಚಪ್ಪಾಳೆಗಳ ನಡುವೆ ವೇದಿಕೆ ಏರಿದ ಕೂಡಲೇ ವಿದ್ಯಾರ್ಥಿ ‘ಜೈ ಶ್ರೀ ರಾಮ್’ ಎಂದು ಜೋರಾಗಿ ಕೂಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನಂತರ ನೇರವಾಗಿ ಹೋಗಿ ಗುರುಗಳ ಪಾದ ಮುಟ್ಟಿ ಆಶೀರ್ವಾದ ಪಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.ಈ ವೀಡಿಯೊವನ್ನು @MeghUpdates ಎಂಬ ಟ್ವಿಟರ್‌ನಲ್ಲಿ ಬಳಕೆದಾರರು ಹಂಚಿಕೊಂಡಿದ್ದು, ಒಂದೇ ದಿನದಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ.
Be proud of your roots, values and culture – Student touches feet of the teacher and chants ‘Jai Siya Ram’ at Convocation Ceremony in Leicester, UK pic.twitter.com/LYTKybw4hl
— Megh Updates 🚨™ (@MeghUpdates) January 25, 2024
ಇದನ್ನೂ ಓದಿ : ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್ ಸವಾರಿ ಮಾಡಿದ ಮಹಿಳೆ
ಕೇವಲ 29 ಸೆಕೆಂಡ್ ಗಳ ಈ ವೀಡಿಯೋವನ್ನು ಇಲ್ಲಿಯವರೆಗೆ 3 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಲಾಗಿದ್ದು, 20 ಸಾವಿರಕ್ಕೂ ಹೆಚ್ಚು ಮಂದಿ ಈ ವಿಡಿಯೋವನ್ನು ಲೈಕ್ ಮಾಡಿ ವಿವಿಧ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಸಾಕಷ್ಟು ನೆಟ್ಟಿಗರು ‘ಜೈ ಶ್ರೀ ರಾಮ್’ ಎಂದು ಕಾಮೆಂಟ್ ಮಾಡಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ