Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನನ್ನು ಚಪ್ಪಲಿಯಲ್ಲಿ ಹೊಡೆದು ಓಡಿಸಿದ ವಿದ್ಯಾರ್ಥಿಗಳು

ಪ್ರತೀ ದಿನ ಮದ್ಯದ ಅಮಲಿನಲ್ಲಿ ಶಾಲೆಗೆ ಬರುತ್ತಿದ್ದು, ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳನ್ನು ಬೈಯುತ್ತಿದ್ದ. ಶಿಕ್ಷಕನ ಈ ವರ್ತನೆಯಿಂದ ಬೇಸತ್ತಿದ್ದ ವಿದ್ಯಾರ್ಥಿಗಳು ಕಳೆದ ವಾರ ಕುಡುಕ ಶಿಕ್ಷಕ ಶಾಲಾ ಆವರಣದೊಳಗೆ ಪ್ರವೇಶಿಸುತ್ತಿದ್ದಂತೆ ಆತನ ಮೇಲೆ ಚಪ್ಪಲಿಗಳನ್ನು ಎಸೆದಿದ್ದಾರೆ.

Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನನ್ನು ಚಪ್ಪಲಿಯಲ್ಲಿ ಹೊಡೆದು ಓಡಿಸಿದ ವಿದ್ಯಾರ್ಥಿಗಳು
ಕುಡಿಕ ಶಿಕ್ಷಕನಿಗೆ ಚಪ್ಪಲಿಯಲ್ಲಿ ಹೊಡೆದು ಓಡಿಸಿದ ವಿದ್ಯಾರ್ಥಿಗಳು

Updated on: Mar 28, 2024 | 11:48 AM

ಛತ್ತೀಸ್‌ಗಢ: ಕಂಠ ಪೂರ್ತಿ ಕುಡಿದು ಶಾಲೆಗೆ ಬಂದ ಶಿಕ್ಷಕನನ್ನು ವಿದ್ಯಾರ್ಥಿಗಳು ಚಪ್ಪಲಿಯಿಂದ ಹೊಡೆದು ಓಡಿಸಿರುವ ಘಟನೆ ಛತ್ತೀಸ್‌ಗಢದ ಬಸ್ತಾರ್‌ನ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಪಾಠ ಗಳಿಸುವ ಶಿಕ್ಷಕನಿಗೆ ಇಲ್ಲಿ ವಿದ್ಯಾರ್ಥಿಗಳು ಪಾಠ ಗಳಿಸಿದ್ದು ವಿಡಿಯೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಪ್ರತೀ ದಿನ ಮದ್ಯದ ಅಮಲಿನಲ್ಲಿ ಶಾಲೆಗೆ ಬರುತ್ತಿದ್ದು, ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳನ್ನು ಬೈಯುತ್ತಿದ್ದ. ಶಿಕ್ಷಕನ ಈ ವರ್ತನೆಯಿಂದ ಬೇಸತ್ತಿದ್ದ ವಿದ್ಯಾರ್ಥಿಗಳು ಕಳೆದ ವಾರ ಕುಡುಕ ಶಿಕ್ಷಕ ಶಾಲಾ ಆವರಣದೊಳಗೆ ಪ್ರವೇಶಿಸುತ್ತಿದ್ದಂತೆ ಆತನ ಮೇಲೆ ಚಪ್ಪಲಿಗಳನ್ನು ಎಸೆದಿದ್ದಾರೆ. ವಿದ್ಯಾರ್ಥಿಗಳು ಚಪ್ಪಲಿ ಎಸೆಯುತ್ತಿದ್ದಂತೆ ಶಿಕ್ಷಕ ಅಲ್ಲಿಂದ ಓಡಿ ಹೋಗಿದ್ದಾನೆ.

ಶಿಕ್ಷಕನ ಮೇಲೆ ವಿದ್ಯಾರ್ಥಿಗಳು ಚಪ್ಪಲಿ ಎಸೆದ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ:  ಕಾಂಡೋಮ್ ಮಾರಿ ಭರ್ಜರಿ ಲಾಭ ಗಳಿಸಿದ ಬ್ರದರ್ಸ್​​​​​

@snehamordani ಎಂಬ ಹೆಸರಿನ ಟ್ವಿಟರ್​​ ಖಾತೆಯಲ್ಲಿ ಮಾರ್ಚ್​​​ 26ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ 28 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಶಾಲೆಗೆ ಕುಡಿದ ಬಂದ ಶಿಕ್ಷಕನಿಗೆ ವಿದ್ಯಾರ್ಥಿಗಳು ಸರಿಯಾದ ಪಾಠ ಕಲಿಸಿರುವುದನ್ನು ಕಂಡು ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:46 am, Thu, 28 March 24

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us