Viral Video: ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನನ್ನು ನಡು ರಸ್ತೆಯಲ್ಲಿ ಥಳಿಸಿದ ವಿದ್ಯಾರ್ಥಿನಿ

ಶಾಲಾ ಸಮವಸ್ತ್ರ ತೊಟ್ಟಿರುವ ಬಾಲಕಿಯೊಬ್ಬಳು ನಡು ರಸ್ತೆಯಲ್ಲೇ ಯುವಕನನ್ನು ಥಳಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ಯುವಕ ಕೆಲದಿನಗಳಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬುದು ತಿಳಿದುಬಂದಿದೆ. ನಡು ರಸ್ತೆಯಲ್ಲೇ ಯುವಕನನ್ನು ಥಳಿಸುತ್ತಿರುವ ವಿಡಿಯೋ ಇಲ್ಲಿದೆ ನೋಡಿ.

Viral Video: ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನನ್ನು ನಡು ರಸ್ತೆಯಲ್ಲಿ ಥಳಿಸಿದ ವಿದ್ಯಾರ್ಥಿನಿ
Follow us
ಅಕ್ಷತಾ ವರ್ಕಾಡಿ
|

Updated on: Aug 16, 2024 | 11:14 AM

ಶಾಲಾ ಸಮವಸ್ತ್ರ ತೊಟ್ಟಿರುವ ಬಾಲಕಿಯೊಬ್ಬಳು ನಡು ರಸ್ತೆಯಲ್ಲೇ ಯುವಕನನ್ನು ಥಳಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಬಾಲಕಿ ಯವಕನಿಗೆ ಮನಬಂದಂತೆ ಬೆಲ್ಟ್​​​​ನಲ್ಲಿ ಬಾರಿಸುತ್ತಿರುವುದನ್ನು ಕಾಣಬಹುದು. ಯುವಕ ಕೆಲದಿನಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಯುವಕನಿಗೆ ನಡುರಸ್ತೆಯಲ್ಲಿ ಥಳಿಸಿರುವುದಾಗಿ ವರದಿಯಾಗಿದೆ. ಈ ಘಟನೆ ಅಹ್ಮದಾಬಾದ್‍ನಲ್ಲಿ ನಡೆದಿದೆ.

@gharkekalesh ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಆಗಸ್ಟ್​​​ 15ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 2.2 ಮಿಲಿಯನ್​​ ಅಂದರೆ 20 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ಓದಿ: ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ

ಈ ವಿಡಿಯೊದಲ್ಲಿ , ಯುವಕ ನಡು ರಸ್ತೆಯಲ್ಲಿ ಬಿದ್ದಿದ್ದು, ಶಾಲಾ ಸಮವಸ್ತ್ರ ಧರಿಸಿದ ಬಾಲಕಿಯೊಬ್ಬಳು ಬೆಲ್ಟ್ ನಿಂದ ಹೊಡೆಯುತ್ತಿದ್ದರೆ, ಇನ್ನೊಬ್ಬಳು ಅಲ್ಲಿ ನಿಂತಿದ್ದ ಜನರ ಮುಂದೆ ಆತನ ನೀಚತನವನ್ನು ಬಯಲಿಗೆಳೆಯುತ್ತಿದ್ದಾಳೆ. ಇದೀಗ ವಿಡಿಯೋ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಲೈಂಗಿಕ ಕಿರುಕುಳ ನೀಡುವವರನ್ನು ಇದೇ ರೀತಿ ನಡು ರಸ್ತೆಯಲ್ಲೇ ಅವಮಾನಿಸಬೇಕು, ಮಹಿಳೆಯರು ಯಾವತ್ತೂ ಮಾನ ಮಾರ್ಯದೆಗೆ ಅಂಜಿ ಹಿಂಜರಿಯಬಾರದು” ಎಂದು ನೆಟ್ಟಿಗರೊಬ್ಬರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ