AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕನ್ನಡಿಯಲ್ಲಿ ತನ್ನ ಪ್ರತಿಬಿಂಬ ಕಂಡು ಬೆಕ್ಕಿನ ರಿಯಾಕ್ಷನ್​​​​ ಹೇಗಿತ್ತು ನೋಡಿ

ಆಟವಾಡುತ್ತಿದ್ದ ಬೆಕ್ಕೊಂದು ಕನ್ನಡಿಯಲ್ಲಿ ತನ್ನ ಪ್ರತಿಬಿಂಬ ಕಂಡಾಕ್ಷಣ ಶಾಕ್​​​ಗೆ ಒಳಗಾದ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​​ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಎರಡೇ ದಿನಗಳಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಕನ್ನಡಿಯಲ್ಲಿ ತನ್ನ ಪ್ರತಿಬಿಂಬ ಕಂಡು ಬೆಕ್ಕಿನ ರಿಯಾಕ್ಷನ್​​​​ ಹೇಗಿತ್ತು ನೋಡಿ
Viral Video
ಅಕ್ಷತಾ ವರ್ಕಾಡಿ
|

Updated on:Jan 31, 2024 | 2:39 PM

Share

ಆಟವಾಡುತ್ತಿದ್ದ ಬೆಕ್ಕೊಂದು ಕನ್ನಡಿಯಲ್ಲಿ ತನ್ನ ಪ್ರತಿಬಿಂಬ ಕಂಡಾಕ್ಷಣ  ಶಾಕ್​​​ಗೆ ಒಳಗಾದ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​​ ಆಗಿದೆ. ಬೆಕ್ಕಿನ ರಿಯಾಕ್ಷನ್​​​​ ನೋಡಿ ನಕ್ಕು ನಕ್ಕು ಹೊಟ್ಟೆ ಹುಣ್ಣಗುವುದಂತೂ ಖಂಡಿತಾ. ವೈರಲ್ ಆಗಿರುವ ಈ ವಿಡಿಯೋದಲ್ಲಿ ಮುಗ್ಧ ಬೆಕ್ಕು ಕನ್ನಡಿಯಲ್ಲಿ ತನ್ನ ಪ್ರತಿಬಿಂಬವನ್ನು ಕಂಡು ಇದಾವುದೋ ಬೇರೆ ಪ್ರಾಣಿ ಇರಬಹುದೆಂದು ಕೋಪಗೊಂಡು ಶಾಕ್​​​ ಆಗಿ ಕನ್ನಡಿಯ ಮುಂದೆ ಕಲ್ಲಿನಂತೆ ನಿಂತಿರುವುದನ್ನು ಕಾಣಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಎರಡೇ ದಿನಗಳಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ.

@CatFrolics ಎಂಬ ‘X’ (ಹಿಂದಿನ ಟ್ವಿಟರ್​​​​) ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಜನವರಿ 29ರಂದು ಹಂಚಿಕೊಳ್ಳಲಾದ ವಿಡಿಯೋ ಇಲ್ಲಿಯವರೆಗೆ 36000ಕ್ಕಿಂತಲೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಎರಡು ಹುಲಿಗಳ ನಡುವಿನ ಭೀಕರ ಕಾಳಗ ಹೇಗಿದೆ ನೋಡಿ; ವಿಡಿಯೋ ವೈರಲ್

ವಿಡಿಯೋ ಪ್ರಾರಂಭದಲ್ಲಿ ಬೆಕ್ಕು ಆಟಿಕೆಯ ಜೊತೆಗೆ ಆಟವಾಡುತ್ತಿರುವುದನ್ನು ಕಾಣಬಹುದು. ಇದಾದ ಬಳಿಕ ಆಟಿಕೆ ಕನ್ನಡಿ ಬಳಿಗೆ ಹೋಗಿ ಬಿದ್ದಾಗ ಬೆಕ್ಕು ಅದನ್ನು ತರಲು ಹೋದಾಗ, ಕನ್ನಡಿಯಲ್ಲಿ ತನ್ನ ಪ್ರತಿಬಿಂಬ ಕಂಡು ಶಾಕ್​ ಆಗಿ ನಿಂತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲ ಹೊತ್ತಿನ ವರೆಗೆ ಕನ್ನಡಿಯಲ್ಲಿ ಪ್ರತಿಬಿಂಬ ಕಂಡು ಕೋಪಗೊಂಡು ಶಾಕ್​​ ಆಗಿ ನಿಂತಿರುವುದು ನಿಮ್ಮ ಮುಖದಲ್ಲಿ ನಗು ಮೂಡಿಸುವುದು ಖಂಡಿತಾ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:25 pm, Wed, 31 January 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ