AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗ್ರಾಜುಯೇಷನ್ ಡೇ ಸಂಭ್ರಮದಲ್ಲಿ ಸೈಡ್ ಫ್ಲಿಪ್ ಸ್ಟಂಟ್ ಮಾಡಿದ ವಿದ್ಯಾರ್ಥಿನಿಯ ವಿಡಿಯೋ ವೈರಲ್​​

ಇಂಗ್ಲೆಂಡ್‌ನ ರೋಹ್ಯಾಂಪ್ಟನ್ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಸಂಭ್ರಮದಲ್ಲಿ ಕುಂಗ್ ಫೂ ಶೈಲಿಯ ಸೈಡ್ ಫ್ಲಿಪ್ ಅನ್ನು ಪ್ರದರ್ಶಿಸಿದ ವೀಡಿಯೊವು ಆನ್‌ಲೈನ್‌ನಲ್ಲಿ ಲಕ್ಷಾಂತರ ವೀಕ್ಷಣೆ ಗಳಿಸಿದೆ.

Viral Video: ಗ್ರಾಜುಯೇಷನ್ ಡೇ ಸಂಭ್ರಮದಲ್ಲಿ ಸೈಡ್ ಫ್ಲಿಪ್ ಸ್ಟಂಟ್ ಮಾಡಿದ ವಿದ್ಯಾರ್ಥಿನಿಯ ವಿಡಿಯೋ ವೈರಲ್​​
ಗ್ರಾಜುವೇಷನ್​​ ಡೇ ಸಂಭ್ರಮದಲ್ಲಿ ಸೈಡ್ ಫ್ಲಿಪ್ ಸ್ಟಂಟ್ Image Credit source: Twitter
ಅಕ್ಷತಾ ವರ್ಕಾಡಿ
|

Updated on:Mar 10, 2023 | 2:59 PM

Share

ಇಂಗ್ಲೆಂಡ್‌ನ ರೋಹ್ಯಾಂಪ್ಟನ್ ವಿಶ್ವವಿದ್ಯಾನಿಲಯದ ಪದವಿ ಸಮಾರಂಭ(Graduation Ceremony) ದಲ್ಲಿ 24 ವರ್ಷದ ಚೀನಾ ಮೂಲದ ವಿದ್ಯಾರ್ಥಿನಿಯೊಬ್ಬಳು ತಾನು ಪದವಿ ಪಡೆದ ಖುಷಿಗೆ ವೇದಿಕೆಯಲ್ಲಿಯೇ ಸೈಡ್ ಫ್ಲಿಪ್ ಸ್ಟಂಟ್(Side Flip Stunt) ಮಾಡಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇಲ್ಲಿದೆ ನೋಡಿ ವಿದ್ಯಾರ್ಥಿಯ ಕುಂಗ್ ಫೂ ಶೈಲಿಯ ಸೈಡ್ ಫ್ಲಿಪ್ ಸ್ಟಂಟ್ ವಿಡಿಯೋ.

ಪದವಿ ಪಡೆಯುವುದು ಪ್ರತಿಯೊಂದು ವಿದ್ಯಾರ್ಥಿಗಳ ಜೀವನದಲ್ಲಿ ಖುಷಿಯ ಹಾಗೂ ವಿಶೇಷ ದಿನ. ಪ್ರತಿಯೊಬ್ಬರೂ ತಮ್ಮ ಪದವಿ ಸಮಾರಂಭವನ್ನು ತಮ್ಮದೇ ಆದ ರೀತಿಯಲ್ಲಿ ಆಚರಿಸುತ್ತಾರೆ. ಇಂತಹ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಾ ಇರುತ್ತದೆ. ಆದರೆ ಇಲ್ಲೊಬ್ಬಳು ಚೀನಾದ ವಿದ್ಯಾರ್ಥಿನಿ ತನ್ನ ಪದವಿ ಪಡೆಯುವ ಕ್ಷಣವನ್ನು ವಿಶೇಷವಾಗಿಸಿದ್ದು, ಈ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: 62ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಫ್ಲೈಟ್ ಹತ್ತಿದ ಅಜ್ಜಿಯ ವಿಡಿಯೋ ವೈರಲ್

ಬೀಜಿಂಗ್‌ನ 24 ವರ್ಷದ ಚೆನ್ ಯಿನಿಂಗ್ ಹೆಸರಿನ ವಿದ್ಯಾರ್ಥಿನಿ, ಜನವರಿಯಲ್ಲಿ ಇಂಗ್ಲೆಂಡ್‌ನ ರೋಹ್ಯಾಂಪ್ಟನ್ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಸಂಭ್ರಮದಲ್ಲಿ ಕುಂಗ್ ಫೂ ಶೈಲಿಯ ಸೈಡ್ ಫ್ಲಿಪ್ ಅನ್ನು ಪ್ರದರ್ಶಿಸಿದ ವೀಡಿಯೊವು ಆನ್‌ಲೈನ್‌ನಲ್ಲಿ ಲಕ್ಷಾಂತರ ವೀಕ್ಷಣೆ ಗಳಿಸಿದೆ. ಡ್ಯಾನ್ಸ್ ಪ್ರಾಕ್ಟೀಸ್ ಮತ್ತು ಪರ್ಫಾರ್ಮೆನ್ಸ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯುತ್ತಿದ್ದ ಚೆನ್ ಉತ್ಸಾಹದಿಂದ ಫ್ಲಿಪ್ ಪ್ರದರ್ಶಿಸಿದಳು ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ (SCMP) ವರದಿ ಮಾಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:33 pm, Fri, 10 March 23

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್