Viral Video: ಶಾಲೆಗೆ ತಡವಾಗಿ ಬಂದಿದ್ದಕ್ಕೆ ವಿದ್ಯಾರ್ಥಿನಿಯರ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕರು!

| Updated By: ಅಕ್ಷಯ್​ ಪಲ್ಲಮಜಲು​​

Updated on: Jul 27, 2022 | 1:53 PM

ಶಾಲಾ ವಿದ್ಯಾರ್ಥಿನಿಯರು ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಈ ವೀಡಿಯೊವನ್ನು ಅಡುಗೆ ಮಾಡುವವರೊಬ್ಬರು ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ.

Viral Video: ಶಾಲೆಗೆ ತಡವಾಗಿ ಬಂದಿದ್ದಕ್ಕೆ ವಿದ್ಯಾರ್ಥಿನಿಯರ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕರು!
Viral Video
Follow us on

ಗದಗ: ನಾಗಾವಿ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿನಿಯರು ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಈ ವೀಡಿಯೊವನ್ನು ಅಡುಗೆ ಮಾಡುವವರೊಬ್ಬರು ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ಜುಲೈ 12 ರಂದು ಶಾಲೆಯಲ್ಲಿ ಅಡುಗೆ ಮಾಡುವ ಮಹಿಳೆ ವಿಜಯಲಕ್ಷ್ಮಿ ಚಲವಾದಿ ಎಂಬುವವರು ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ.

ಈ ಘಟನೆ ನಡೆದ ನಂತರ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಶಾಲಾ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ಚಿತ್ರಗಳು ಹಾಗೂ ವಿಡಿಯೋಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿದೆ. ಸಮಯಕ್ಕೆ ಸರಿಯಾಗಿ ಬರದ ಕಾರಣಕ್ಕೆ ಶಾಲಾ ಆಡಳಿತ ಮಂಡಳಿ ಶೌಚಾಲಯ ಸ್ವಚ್ಛಗೊಳಿಸುವಂತೆ ಸೂಚಿಸಿದೆ ಎಂದು ವಿದ್ಯಾರ್ಥಿಗಳ ಪಾಲಕರು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ
Viral News: ಸಾಲದ ಸುಳಿಯಲ್ಲಿ ಸಿಲುಕಿ ಮನೆ ಮಾರಲು ಹೋದವನಿಗೆ ಹೊಡೀತು 1 ಕೋಟಿ ರೂ. ಲಾಟರಿ..!
Viral Photo: ಮೀಸೆ ಬೆಳೆಸಿಕೊಂಡ ಕೇರಳದ ಮಹಿಳೆ! ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಲೈಂಗಿಕ ಸಂಬಂಧದ ಆರೋಪ: ಸೆಕ್ಸ್ ಮಾಡಲು ಸಮಯವೇ ಇಲ್ಲ ಎಂದ ಟೆಸ್ಲಾ ಸಿಇಒ ಎಲಾನ್ ಮಸ್ಕ್
Viral Video: ವಿಮಾನದ ಸಸ್ಯಾಹಾರ ಊಟದಲ್ಲಿ ಕತ್ತರಿಸಿದ ಹಾವಿನ ತಲೆ ಪತ್ತೆ! ವೈರಲ್ ವಿಡಿಯೋ ಇಲ್ಲಿದೆ

ನಾನು ಶಾಲೆಯಲ್ಲಿದ್ದಾಗ, ಶೌಚಾಲಯವನ್ನು ಸ್ವಚ್ಛಗೊಳಿಸಲು ಬಕೆಟ್ ಮತ್ತು ಪೊರಕೆಗಾಗಿ ವಿದ್ಯಾರ್ಥಿಗಳು ನನ್ನ ಬಳಿಗೆ ಬಂದರು, ನಮಗೆ ಟೀಚರ್ ಹೇಳಿದ್ದರೆ ಶೌಚಾಲಯವನ್ನು ಸ್ವಚ್ಛಗೊಳಿಸಲು, ಯಾಕೆ ಎಂದು ನಾನು ಪ್ರಶ್ನೆ ಮಾಡಿದಾಗ ನಾವು ಸ್ವಲ್ಪ ತಡವಾಗಿ ಶಾಲೆಗೆ ಬಂದಿರುವುದಕ್ಕೆ ಈ ಶಿಕ್ಷೆ ನೀಡಿದ್ದಾರೆ ಎಂದರು. ಇದು ಸರಿಯಲ್ಲ ಎಂದು ವಿದ್ಯಾರ್ಥಿಗಳು ಸ್ವಚ್ಛ ಮಾಡುವ ವಿಡಿಯೋವನ್ನು ಮಾಡಿ ಶಿಕ್ಷಣ ಇಲಾಖೆಗೆ ಕೊಟ್ಟಿದ್ದೇನೆ ಎಂದಿದ್ದಾರೆ. ಅದನ್ನು ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ವೀಡಿಯೊ ವೈರಲ್ ಆಗುತ್ತಿದ್ದಂತೆ, ವೀಡಿಯೊವನ್ನು ಹಂಚಿಕೊಂಡಿದ್ದಕ್ಕಾಗಿ ಹಿರಿಯ ಅಧಿಕಾರಿಗಳು ಅಡುಗೆಯವರ ಮೇಲೆ ಕೋಪ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

 

Published On - 1:51 pm, Wed, 27 July 22