Viral video: ರೈಲಿನಲ್ಲಿ ಸೀಟಿಗಾಗಿ ಕೂದಲು ಎಳೆದಾಡಿ ಜಗಳವಾಡಿದ ಮಹಿಳೆಯರು, ಆಂಟಿ ಚೋಡ್ ದೋ ಎಂದ ಪ್ರಯಾಣಿಕರು

ರೈಲಿನಲ್ಲಿ ಸೀಟಿಗಾಗಿ ಮೂವರು ಮಹಿಳೆಯರ ನಡುವೆ ಆರಂಭವಾದ ವಾಗ್ವಾದ ತಾರಕಕ್ಕೇರಿ ಪರಸ್ಪರ ಕೈಕೈ ಮಿಲಾಯಿಸಿಕೊಂಡ ಘಟನೆ ಮುಂಬೈನ ಸ್ಥಳೀಯ ರೈಲಿನಲ್ಲಿ ನಡೆದಿದೆ. ಇದರ ವಿಡಿಯೋ ಇಂಟರ್ನೆಟ್​ನಲ್ಲಿ ಕಾಣಿಸಿಕೊಂಡಿದೆ.

Viral video: ರೈಲಿನಲ್ಲಿ ಸೀಟಿಗಾಗಿ ಕೂದಲು ಎಳೆದಾಡಿ ಜಗಳವಾಡಿದ ಮಹಿಳೆಯರು, ಆಂಟಿ ಚೋಡ್ ದೋ ಎಂದ ಪ್ರಯಾಣಿಕರು
ರೈಲಿನಲ್ಲಿ ಮಹಿಳೆಯರ ಜಗಳ
Follow us
TV9 Web
| Updated By: Rakesh Nayak Manchi

Updated on: Oct 18, 2022 | 12:27 PM

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರ ಫೈಟಿಂಗ್ ವಿಡಿಯೋ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಒಂದಲ್ಲಾ ಒಂದು ವಿಚಾರದಲ್ಲಿ ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ಕಿತ್ತಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಒಬ್ಬ ಯುವಕನಿಗಾಗಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಜಗಳ ಮಾಡಿಕೊಂಡ ವಿಡಿಯೋ ಭಾರೀ ವೈರಲ್ ಆಗಿತ್ತು. ಇದೀಗ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದ್ದು, ಇದು ಕ್ಷುಲ್ಲಕ ಕಾರಣಕ್ಕೆ ರೈಲಿನಲ್ಲಿ ನಡೆದ ಜಗಳವಾಗಿದೆ. ವೈರಲ್ ವಿಡಿಯೋದಲ್ಲಿ ಇರುವಂತೆ, ಆಸನಗಳು ಭರ್ತಿಯಾಗಿದ್ದ ರೈಲಿನಲ್ಲಿ ಸೀಟಿಗಾಗಿ ಮೂವರು ಮಹಿಳೆಯರ ನಡುವೆ ವಾಗ್ವಾದ ಆರಂಭಗೊಳ್ಳುತ್ತದೆ. ಇದು ತಾರಕಕ್ಕೇರಿ ಪರಸ್ಪರ ಕೂದಲು ಎಳೆದುಕೊಂಡು ಮುಖಕ್ಕೆ ಹೊಡೆದಾಡಿಕೊಂಡಿದ್ದಾರೆ. ಇವರ ಜಗಳದ ಗಂಭೀರತೆಯನ್ನು ಅರಿತ ಪ್ರಯಾಣಿಕರು ಕಿತ್ತಾಡಿಕೊಳ್ಳುತ್ತಿದ್ದವರನ್ನು ಬೇರ್ಪಡಿಸಲು ಮುಂದಾಗುತ್ತಾರೆ. ಆಂಟಿ ಚೋಡ್ ದೋ ಅಂತ ಪ್ರಯಾಣಿಕರು ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕೇಳಿಸಬಹುದು.

ರೋಡ್ಸ್ ಆಫ್ ಮುಂಬೈ ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಸ್ಪಿರಿಟ್ ಆಫ್ ಮುಂಬೈ – ಭಾಗ 4 ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ಎರಡು ದಿನಗಳ ಹಿಂದೆ ಹಂಚಿಕೊಂಡಿರುವ ಈ ವಿಡಿಯೋವನ್ನು ಈವರೆಗೆ 5.35 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದು, 6 ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ.

ಮುಂಬೈ ಸ್ಥಳೀಯ ರೈಲುಗಳಲ್ಲಿ ಹೊಡೆದಾಟ ನಡೆದಿರುವುದು ಇದೇ ಮೊದಲಲ್ಲ. ಕೆಲವು ದಿನಗಳ ಹಿಂದೆ ಇದೇ ರೀತಿಯ ಘಟನೆ ನಡೆದಿತ್ತು. ಇದರಲ್ಲಿ ಮುಂಬೈ ರೈಲಿನ ಮಹಿಳಾ ಕಂಪಾರ್ಟ್‌ಮೆಂಟ್ ಸಹ ಪ್ರಯಾಣಿಕರ ನಡುವಿನ ಕಾದಾಟ ನಡೆದಿತ್ತು. ಥಾಣೆ-ಪನ್ವೇಲ್ ಲೋಕಲ್ ರೈಲಿನಲ್ಲಿ ಮಹಿಳೆಯರು ಪರಸ್ಪರ ಘರ್ಷಣೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ