Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಕೆ ಮ್ಯಾರಥಾನ್‌ನಲ್ಲಿ ಸೀರೆಯುಟ್ಟು ಓಡಿದ ಒಡಿಯಾ ಮಹಿಳೆ; ವಿಡಿಯೋ ವೈರಲ್​​​​

ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಸಾಂಪ್ರದಾಯಿಕ ಉಡುಗೆಯನ್ನು ಪ್ರತಿನಿಧಿಸುವ ಸಲುವಾಗಿ ಒಡಿಯಾ ಮಹಿಳೆ 42.5 ಕಿ.ಮೀ ಮ್ಯಾರಥಾನ್​​ನಲ್ಲಿ ಓಡಿ ಎಲ್ಲರ ಗಮನ ಸೆಳೆದಿದ್ದಾರೆ.

ಯುಕೆ ಮ್ಯಾರಥಾನ್‌ನಲ್ಲಿ ಸೀರೆಯುಟ್ಟು ಓಡಿದ ಒಡಿಯಾ ಮಹಿಳೆ; ವಿಡಿಯೋ ವೈರಲ್​​​​
Image Credit source: Twitter
Follow us
ಅಕ್ಷತಾ ವರ್ಕಾಡಿ
|

Updated on:Apr 19, 2023 | 12:24 PM

ವಿದೇಶದಲ್ಲಿ ಮಹಿಳೆಯೊಬ್ಬರು ಒರಿಸ್ಸಾ ಕೈ ಮಗ್ಗದ ಸಂಬಲ್ಪುರಿ  ಸೀರೆಯಲ್ಲಿ ಮ್ಯಾರಥಾನ್‌ನಲ್ಲಿ ಓಡಿರುವುದು ಇದೀಗಾ ಭಾರೀ ವೈರಲ್​​ ಆಗಿದೆ. ಹೌದು ಒಡಿಯಾ ಮಹಿಳೆ 42.5 ಕಿ.ಮೀ ಮ್ಯಾರಥಾನ್​​ನಲ್ಲಿ ಓಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಧುಸ್ಮಿತಾ ಜೆನಾ ದಾಸ್(41) 4 ಗಂಟೆ 50 ನಿಮಿಷಗಳಲ್ಲಿ ಮ್ಯಾರಥಾನ್ ಪೂರ್ಣಗೊಳಿಸಿದ್ದಾರೆ. ಸುಂದರವಾದ ಕೆಂಪು ಸೀರೆ ಮತ್ತು ಕಿತ್ತಳೆ ಬಣ್ಣದ ಸ್ನೀಕರ್ಸ್ ಧರಿಸಿ ಮ್ಯಾರಥಾನ್‌ನಲ್ಲಿ ಎಲ್ಲರ ಗಮನ ಸೆಳೆದ್ದಿದ್ದಾರೆ.

@FISI_UK ಟ್ವಿಟರ್​​ ಖಾತೆಯಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸೀರೆಯಲ್ಲಿ ಆರಾಮವಾಗಿ ಓಡುತ್ತಿರುವಾಗ ಆಕೆಯ ಸ್ನೇಹಿತರು ಆಕೆಗಾಗಿ ಹುರಿದುಂಬಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ಇದನ್ನೂ ಓದಿ: ನವಿಲಿನ ಮೊಟ್ಟೆ ಕದಿಯಲು ಬಂದವರಿಗೆ ತಾಯಿ ನವಿಲು ಮಾಡಿದ್ದೇನು ನೋಡಿ; ವಿಡಿಯೋ ವೈರಲ್

ಯುಕೆಯ ಮ್ಯಾಂಚೆಸ್ಟರ್‌ನಲ್ಲಿ ವಾಸಿಸುತ್ತಿರುವ ಭಾರತೀಯ ಮೂಲದವರಾದ ಮಧುಸ್ಮಿತಾ ಭಾರತೀಯ ಸಂಸ್ಕೃತಿಯ ಬಗ್ಗೆ ಅಪಾರ ಹೆಮ್ಮೆಯನ್ನು ಹೊಂದಿದ್ದಾರೆ. ಮೂಲತಃ ಒರಿಸ್ಸಾದ ಮೂಲದವರಾದ ಇವರು ವಿದೇಶದಲ್ಲಿ ನೆಲೆಸಿದ್ದಾರೆ. ಇತ್ತೀಚೆಗಷ್ಟೇ 2023ರ ಮ್ಯಾಂಚೆಸ್ಟರ್‌ ಮ್ಯಾರಥಾನ್‌ ಭಾಗಿಯಾಗಿದ್ದು, ತನ್ನ ಭಾರತ ಸಂಸ್ಕೃತಿಯನ್ನು ಪ್ರತಿನಿಧಿಸುವ ಹಿನ್ನೆಯಲ್ಲಿ ಕೈ ಮಗ್ಗದದಿಂದ ವಿನ್ಯಾಸಗೊಳಿಸಲಾದ ಒರಿಸ್ಸಾದ ಸಂಬಲ್ಪುರಿ ಸೀರೆಯುಟ್ಟು ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಭಾರೀ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ನಮ್ಮ ಭಾರತದ ಗರಿಮೆಯನ್ನು ವಿದೇಶದಲ್ಲಿಯೂ ಬಿತ್ತರಿಸಿರುವುದು ಹೆಮ್ಮೆಯ ವಿಷಯ ಒಂದು ಬಳಕೆದಾರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:23 pm, Wed, 19 April 23

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು