Viral Video: ಗೋಮಾಂಸ ಸಾಗಿಸುತ್ತಿದ್ದ ಆರೋಪ; ವ್ಯಾನ್ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು

ಮಥುರಾದಲ್ಲಿ ವ್ಯಾನ್​ನಲ್ಲಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ ಗ್ರಾಮಸ್ಥರು ರಸ್ತೆ ತಡೆ ನಡೆಸಿದ್ದಾರೆ. ವ್ಯಾನ್ ಚಾಲಕನನ್ನು ಬಿಡುವಂತೆ ಪೊಲೀಸರು ಮನವಿ ಮಾಡಿದರೂ ಕೇಳದೆ ಆತನನ್ನು ಹೊಡೆದು, ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದ್ದಾರೆ.

Viral Video: ಗೋಮಾಂಸ ಸಾಗಿಸುತ್ತಿದ್ದ ಆರೋಪ; ವ್ಯಾನ್ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 22, 2022 | 5:20 PM

ಮಥುರಾ: ಗೋಮಾಂಸವನ್ನು (Beef) ಸಾಗಿಸುತ್ತಿದ್ದಾನೆ ಎಂಬ ಆರೋಪದಲ್ಲಿ ವ್ಯಾನ್ ಚಾಲಕನನ್ನು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿ, ಅಮಾನವೀಯವಾಗಿ ವರ್ತಿಸಿರುವ ಆಘಾತಕಾರಿ ಘಟನೆ (Shocking News) ಮಥುರಾದ ಖುಷಿಪುರ ತಿರಹಾ ಗ್ರಾಮದಲ್ಲಿ ನಡೆದಿದೆ. ಮಥುರಾದ ಖುಷಿಪುರ ತಿರಾಹಾ ಬಳಿಯ ಛಟಿಕಾರ ರಾಧಾಕುಂಡ್ ರಸ್ತೆಯಲ್ಲಿ ಪ್ರಾಣಿಗಳ ಮೃತದೇಹಗಳನ್ನು ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿತ್ತು. ಆಗ ಅದರೊಳಗಿದ್ದ ಪ್ರಾಣಿಗಳ ಹೆಣಗಳು ಹೊರಗೆ ಬಿದ್ದಿದ್ದವು. ಅದನ್ನು ನೋಡಿದ ಸ್ಥಳೀಯರು ಅದು ದನದ ಮಾಂಸ ಎಂದುಕೊಂಡು ವ್ಯಾನ್ ಚಾಲಕನಿಗೆ ಮನಬಂದಂತೆ ಹೊಡೆದಿದ್ದಾರೆ.

ವ್ಯಾನ್​ನಲ್ಲಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ ಗ್ರಾಮಸ್ಥರು ರಸ್ತೆ ತಡೆ ನಡೆಸಿದ್ದಾರೆ. ಆ ಚಾಲಕನನ್ನು ಬಿಡುವಂತೆ ಪೊಲೀಸರು ಮನವಿ ಮಾಡಿದರೂ ಕೇಳದೆ ಆತನನ್ನು ಹೊಡೆದು, ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದ್ದಾರೆ. ಈ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದ್ದರಿಂದ ಆತಂಕಗೊಂಡ ಆ ವ್ಯಾನ್​ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಆದರೆ, ಅವರಲ್ಲಿ ಒಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ.

ಸ್ಥಳೀಯರ ಪ್ರಕಾರ, ವ್ಯಾನ್​ನ ಮುಂದೆ ಚಲಿಸುತ್ತಿದ್ದ ಎಸ್‌ಯುವಿ ಕಾರೊಂದರ ನಿರ್ದೇಶನದಂತೆ ಆ ವ್ಯಾನ್​ ಅನ್ನು ಯಾವುದೋ ಸ್ಥಳಕ್ಕೆ ತೆಗೆದುಕೊಂಡು ಹೋಗಲಾಗುತ್ತಿತ್ತು. ಆದರೆ, ವ್ಯಾನ್ ಪಲ್ಟಿ ಹೊಡೆಯುತ್ತಿದ್ದಂತೆ ಆ ಕಾರು ವೇಗವಾಗಿ ಮುಂದೆ ಹೋಗಿ ನಾಪತ್ತೆಯಾಯಿತು. ಆದರೆ, ಚಾಲಕ ಇದರಲ್ಲಿ ತನ್ನದೇನೂ ತಪ್ಪಿಲ್ಲ ಎಂದು ಹೇಳಿದ್ದು, ಗೋವರ್ಧನ್‌ನ ನೀಮ್‌ಗಾಂವ್‌ನಿಂದ ಸಹರಾನ್‌ಪುರಕ್ಕೆ ಶವಗಳನ್ನು ತೆಗೆದುಕೊಂಡು ಹೋಗುತ್ತಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ರಸ್ತೆಯಲ್ಲಿ ಬಿದ್ದಿದ್ದ ಪ್ರಾಣಿಗಳ ಶವಗಳನ್ನು ತೆಗೆದುಕೊಂಡು ಹೋಗಲಾಗಿದೆ. ಬಂಧಿತ ವ್ಯಕ್ತಿಯನ್ನು ವಿಚಾರಣೆ ನಡೆಸಲಾಗುತ್ತಿದೆ. ಅದು ಯಾವ ಪ್ರಾಣಿಯ ಶವ ಎಂಬುದು ತನಿಖೆ ವೇಳೆ ಸಾಬೀತಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Shocking News: ಹೆಂಡತಿ ಮಟನ್ ಕರಿ ಮಾಡದಿದ್ದಕ್ಕೆ 6 ಬಾರಿ ಪೊಲೀಸರಿಗೆ ಫೋನ್ ಮಾಡಿ ಕಾಟ ಕೊಟ್ಟ ಗಂಡ!

Shocking Video: ಕೆಳಗೆ ಬಿದ್ದ ಬಟ್ಟೆ ತರಲು ಮಗನನ್ನು ಸೀರೆಗೆ ಕಟ್ಟಿ 10ನೇ ಮಹಡಿಯಿಂದ ನೇತಾಡಿಸಿದ ತಾಯಿ!

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್