AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಂಬೆಗಾಲಿಡುವ ಮಗು ಇದ್ದಕ್ಕಿದ್ದಂತೆ ನೃತ್ಯ ಮಾಡಿದ್ರೆ ಹೇಗೆ? ಇಲ್ಲಿದೆ ನೋಡಿ ಪುಟ್ಟ ಕಂದಮ್ಮನ ವಿಡಿಯೊ

ಅಂಬೆಗಾಲಿಡುವ ಮಗು ತನ್ನ ಪುಟ್ಟ ಹೆಜ್ಜೆಗಳನ್ನಿಡುತ್ತಾ ನಡೆಯಲು ಕಲಿಯುವಾಗ ಇದ್ದಕ್ಕಿದಂತೆ ನೃತ್ಯ ಮಾಡುತ್ತದೆ. ಈ ವೈರಲ್ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ವೈರಲ್ ಆಗಿರುವ ಮುದ್ದಾದ ಈ ವಿಡಿಯೋದಲ್ಲಿ ಪುಟ್ಟ ಮಗುವೊಂದು ನಡೆಯಲು ಕಲಿಯುತ್ತಿರುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ನೃತ್ಯ ಮಾಡಲು ಪ್ರಾರಂಭಿಸುತ್ತದೆ.

Viral Video: ಅಂಬೆಗಾಲಿಡುವ ಮಗು ಇದ್ದಕ್ಕಿದ್ದಂತೆ ನೃತ್ಯ ಮಾಡಿದ್ರೆ ಹೇಗೆ? ಇಲ್ಲಿದೆ ನೋಡಿ ಪುಟ್ಟ ಕಂದಮ್ಮನ ವಿಡಿಯೊ
Viral video
ಅಕ್ಷಯ್​ ಪಲ್ಲಮಜಲು​​
|

Updated on:Feb 22, 2023 | 2:10 PM

Share

ಅಂಬೆಗಾಲಿಡುವ ಮಗು ತನ್ನ ಪುಟ್ಟ ಹೆಜ್ಜೆಗಳನ್ನಿಡುತ್ತಾ ನಡೆಯಲು ಕಲಿಯುವಾಗ ಇದ್ದಕ್ಕಿದಂತೆ ನೃತ್ಯ ಮಾಡುತ್ತದೆ. ಈ ವೈರಲ್ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ವೈರಲ್ ಆಗಿರುವ ಮುದ್ದಾದ ಈ ವಿಡಿಯೋದಲ್ಲಿ ಪುಟ್ಟ ಮಗುವೊಂದು ನಡೆಯಲು ಕಲಿಯುತ್ತಿರುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ನೃತ್ಯ ಮಾಡಲು ಪ್ರಾರಂಭಿಸುತ್ತದೆ. ಈ ವಿಡಿಯೋ ಇನ್ಟಾಗ್ರಾಮ್‌ನಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮಕ್ಕಳು ನಡೆಯಲು ಕಲಿಯುತ್ತಿರುವುದನ್ನು ತೋರಿಸುವ ವಿಡಿಯೋಗಳು ಸಾಮಾನ್ಯವಾಗಿ ಜನರು ಅಯ್ಯೋ ಅನ್ನುವಂತೆ ಮಾಡುತ್ತದೆ. ಆದರೆ ಇಲ್ಲೊಂದು ಮುದ್ದಾದ ವಿಡಿಯೋ ನೆಟ್ಟಿಗರನ್ನು ನಗುವಂತೆ ಮಾಡುತ್ತಿದೆ. ಅದ್ಭುತವಾದ ಈ ವಿಡಿಯೋವು ಮಗು ನಡೆಯಲು ಕಲಿಯುತ್ತಿರುವಾಗ ನೃತ್ಯ ಮಾಡುವುದನ್ನು ತೋರಿಸುತ್ತದೆ.

ಮಗುವಿನ ತಾಯಿ ಅಮಂಡಾ ರಸೆಲ್ ಕಳೆದ ವರ್ಷವೇ ಈ ವಿಡಿಯೋವನ್ನು ಇನ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದರು. ಆದರೆ ಪತ್ರಕರ್ತೆ ಮರಿಯಾ ಶ್ರೀವರ್ ಅವರು ತನ್ನ ಇನ್ಟಾಗ್ರಾಮ್ ಪೇಜ್‌ನಲ್ಲಿ ಈ ವಿಡಿಯೋವನ್ನು ಮರು ಹಂಚಿಕೊಂಡ ನಂತರ ಅದು ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಮೊದಲಿಗೆ ಮಗು ಪುಟ್ಟ ಪುಟ್ಟ ಹೆಜ್ಜೆಗಳನ್ನು ಇಡುತ್ತಾ ಮುಂದೆ ಬರುತ್ತದೆ. ಒಮ್ಮೆಲೆ ಮುಂದಕ್ಕೆ ಹೆಜ್ಜೆ ಇಡುವುದನ್ನು ನಿಲ್ಲಿಸಿ, ನೃತ್ಯ ಮಾಡಲು ಪ್ರಾರಂಭಿಸುತ್ತದೆ. ಆ ವಿಡಿಯೋದಲ್ಲಿ ಮಗು ನೃತ್ಯ ಮಾಡುವಾಗ ಹಿನ್ನೆಲೆಯಲ್ಲಿ ಮನೆಯವರ ಉನ್ಮಾದದ ನಗುವೇ ವಿಡಿಯೋವನ್ನು ವೀಕ್ಷಿಸಲು ಇನಷ್ಟು ಮನರಂಜನೆ ನೀಡುತ್ತದೆ.

ಇದನ್ನೂ ಓದಿ: Viral Video : ಮದುವೆಗೆ ಬಂದವರು ಆಧಾರ ಕಾರ್ಡ್​ ತೋರಿಸಿದರೆ ಮಾತ್ರ ಔತಣ

ವೈರಲ್ ಆಗಿರುವ ಈ ವಿಡಿಯೋ ಇಲ್ಲಿಯವರೆಗೆ 4.4ಮಿಲಿಯಲ್ ವೀಕ್ಷಣೆಗಳನ್ನು ಪಡೆದಿದೆ. ಹಾಗೂ ವಿಡಿಯೋಗೆ ಲೈಕ್ಸ್ ಮತ್ತು ಕಮೆಂಟ್‌ಗಳ ಭರಪೂರವೇ ಹರಿದು ಬಂದಿದೆ. ಇನ್ಟಾಗ್ರಾಮ್ ಬಳಕೆದಾರರು ಈ ವಿಡಿಯೋಗೆ ಹೇಗೆಲ್ಲಾ ಪ್ರತಿಕ್ರಿಯಿಸಿದ್ದಾರೆ ಎಂಬುದು ಇಲ್ಲಿದೆ:

ಈ ವಿಡಿಯೋವನ್ನು ನೋಡಿ ಒಬ್ಬ ಬಳಕೆದಾರರು ಈ ಪೋಷಕತ್ವವೇ ಹಾಗೆ ನಮಗೆ ಸಂತೋಷವನ್ನು ತರುತ್ತದೆ. ಪ್ರತಿ ನಿದ್ದೆಯಿಲ್ಲದ ರಾತ್ರಿ ಮತ್ತು ಮನ ಕಳೆದುಹೋಗುವಂತೆ ಮಾಡುವ ಕ್ಷಣವನ್ನು ಮೌಲ್ಯಯುತವಾಗಿಸುತ್ತದೆ’ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾದರು ‘ನಿಮ್ಮ ಮುಂದಿನ ನಡೆಯನ್ನು ಯಾರಿಗೂ ತಿಳಿಸಬೇಡಿ’ ಎಂದು ತಮಾಷೆಯ ಕಮೆಂಟ್ ಬರೆದಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಧನ್ಯವಾದಗಳು ಈ ವಿಡಿಯೋ ಶೇರ್ ಮಾಡಿದ್ದಕ್ಕಾಗಿ. ಹಿನ್ನೆಲೆಯಲ್ಲಿ ಜೋರಾಗಿ ನಗುತ್ತಿರುವವರು ಯಾರೆಂಬುದುವುದ ನನಗೆ ಗೊತ್ತಾಗಬೇಕು ಎಂದು ತಮಾಷೆಯ ಕಮೆಂಟ್ ಮಾಡಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:10 pm, Wed, 22 February 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್