Viral Video: 4 ಅಂತಸ್ತಿನ ಕಟ್ಟಡ ಕುಸಿತ,ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ ಮಗು; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

|

Updated on: Oct 03, 2024 | 11:59 AM

ಸುಮಾರು 100 ವರ್ಷ ಹಳೆಯದು ಎನ್ನಲಾದ ಕಟ್ಟಡ ಕುಸಿದು ಬಿದ್ದಿದ್ದು, ಮಹಿಳೆಯೊಬ್ಬರು ತನ್ನ ಮಗುವನ್ನು ಕಂಕುಳಲ್ಲಿ ಎತ್ತಿ ಓಡಿ ಪ್ರಾಣಾಪಾಯದಿಂದ ಪಾರಾಗಿರುವ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆ ಮತ್ತು ಮಗು ಪವಾಡ ಸದೃಶ ರೀತಿಯಲ್ಲಿ ಪಾರಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

Viral Video: 4 ಅಂತಸ್ತಿನ ಕಟ್ಟಡ ಕುಸಿತ,ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ ಮಗು; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Follow us on

ಪಂಜಾಬ್‌: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ಆಘಾತಕಾರಿ ಘಟನೆ ಪಂಜಾಬ್‌ನ ಲೂಧಿಯಾನದಲ್ಲಿ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಟ್ಟಡ ಕುಸಿದು ಬೀಳುತ್ತಿದ್ದಂತೆ ಮಹಿಳೆ ತನ್ನ ಕೈಯಲ್ಲಿ ಪುಟ್ಟ ಮಗುವನ್ನು ಹಿಡಿದುಕೊಂಡು ಓಡುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ಈ ಘಟನೆ ಮಂಗಳವಾರ (ಅಕ್ಟೋಬರ್ 1) ಲುಧಿಯಾನದ ಓಲ್ಡ್​​ ಮಾರ್ಕೆಟ್​​ ಬಳಿ ಸಂಭವಿಸಿದೆ. ಸುಮಾರು 100 ವರ್ಷ ಹಳೆಯದು ಎನ್ನಲಾದ ಕಟ್ಟಡ ಕುಸಿದು ಬಿದ್ದಿದ್ದು, ಮಹಿಳೆ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಕಟ್ಟಡ ಕುಸಿದು ಬೀಳುತ್ತಿದ್ದಂತೆ ಸ್ಥಳೀಯರು ಪ್ರಾಣ ರಕ್ಷಣೆಗಾಗಿ ಓಡಲು ಆರಂಭಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ​​​ಸಂಭೋಗದ ವೇಳೆ ತೀವ್ರ ರಕ್ತಸ್ರಾವ, ಪ್ರಿಯಕರನ ನಿರ್ಲಕ್ಷ್ಯದಿಂದ ಯುವತಿಯ ಪ್ರಾಣವೇ ಹೋಯ್ತು

ಮಹಿಳೆ ಮಗುವನ್ನು ಕಂಕುಳಲ್ಲಿ ಎತ್ತಿ ಓಡುತ್ತಿರುವುದನ್ನು ಕಾಣಬಹುದು. ಮಹಿಳೆ ಪ್ರಾಣಾಪಾಯದಿಂದ ಪಾರಾಗುತ್ತಿದ್ದಂತೆ ಕಟ್ಟಡ ಕುಸಿದಿದ್ದು, ಏಕಾಏಕಿ ಕುಸಿದು ಬಿದ್ದ ಕಟ್ಟಡದ ಅವಶೇಷಗಳಿಂದ ಮಹಿಳೆ ಹೊರಬರುತ್ತಿರುವುದನ್ನು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಮಹಿಳೆ ಮತ್ತು ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಹಿಳೆ ಮತ್ತು ಮಗು ಪವಾಡ ಸದೃಶ ರೀತಿಯಲ್ಲಿ ಪಾರಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ