Viral Video: ಮೋದಿ ಕಟೌಟ್‌ ತಬ್ಬಿಕೊಂಡು, ಸೊಂಟ ಬಳುಕಿಸುತ್ತಾ ರೀಲ್ಸ್​​ ಮಾಡಿದ ಮಹಿಳೆ

ಎದೆ ಬಡಿತ ಜೋರಾಗಿದೆ ಎಂದು ಹಿಂದಿ ಹಾಡಿಗೆ ಮೋದಿ ಕಟೌಟ್‌ ತಬ್ಬಿಕೊಂಡು ಸೊಂಟ ಬಳುಕಿಸುತ್ತಾ ರೀಲ್ಸ್​​ ಮಾಡಿದ ಮಹಿಳೆಯೊಬ್ಬಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಉನ್ನತ ಸ್ಥಾನದಲ್ಲಿರುವ ವ್ಯಕ್ತಿಗೆ ಗೌರವ ನೀಡುವ ಬದಲು ಈ ರೀತಿ ಅಸಭ್ಯವಾಗಿ ವರ್ತಿಸಿದ ಮಹಿಳೆಯ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Viral Video: ಮೋದಿ ಕಟೌಟ್‌ ತಬ್ಬಿಕೊಂಡು, ಸೊಂಟ ಬಳುಕಿಸುತ್ತಾ ರೀಲ್ಸ್​​ ಮಾಡಿದ ಮಹಿಳೆ
ಮೋದಿ ಕಟೌಟ್‌ ತಬ್ಬಿಕೊಂಡು ರೀಲ್ಸ್​​ Image Credit source: Twitter
Follow us
ಅಕ್ಷತಾ ವರ್ಕಾಡಿ
|

Updated on: Feb 14, 2024 | 11:37 AM

ಹೆಚ್ಚುತ್ತಿರುವ ಪ್ರಧಾನಿ ಮೋದಿ ಅವರ ಜನಪ್ರಿಯತೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಗಮನಸೆಳೆಯಲು ರೈಲ್ವೆ ನಿಲ್ದಾಣ, ಪಡಿತರ ಅಂಗಡಿಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕೇಂದ್ರ ಸರ್ಕಾರವು ಪ್ರಧಾನಿ ಅವರ ಕಟೌಟ್ ಇರುವ ‘ಸೆಲ್ಫಿ ಪಾಯಿಂಟ್‌’ಗಳನ್ನು ಸ್ಥಾಪಿಸಿದೆ. ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಚಾರಕ್ಕಾಗಿ ಜನರು ಪ್ರಧಾನಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಕಟೌಟ್‌ಗಳನ್ನು ಹಾಕಿದರೆ ಮಹಿಳೆಯೊಬ್ಬಳು ಮೋದಿ ಕಟೌಟ್‌ ಮುಂದೆ ಸೆಲ್ಫಿ ತೆಗೆಸಿಕೊಳ್ಳುವ ಬದಲು “ಆಜಾ ಸಜನ್ ಆಜಾ” ಎಂದು ಸೊಂಟ ಬಳುಕಿಸುತ್ತಾ ರೀಲ್ಸ್​​ ಮಾಡಿದ್ದಾಳೆ. ದೇಶದ ಪ್ರಧಾನಿಯನ್ನು ಅಪ್ಪಿಕೊಂಡು ಅಸಭ್ಯವಾಗಿ ನೃತ್ಯ ಮಾಡಿರುವುದು ಇದೀಗಾ ಭಾರೀ ಟೀಕೆಗೆ ಕಾರಣವಾಗಿದೆ.

ಇತ್ತೀಚಿನ ದಿನಗಳಲ್ಲಿ, ಜನರು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ಧರಾಗಲು ಯಾವ ಮಟ್ಟಕ್ಕೂ ಬೇಕಾದರೂ ಇಳಿಯುತ್ತಾರೆ ಎಂಬುದಕ್ಕೆ ಇದು ಉತ್ತಮ ನಿದರ್ಶನ. ಮಾಧುರಿ ದೀಕ್ಷಿತ್, ಸಂಜಯ್ ದತ್ ಮತ್ತು ಜಾಕಿ ಶ್ರಾಫ್ ನಟಿಸಿದ 1993 ರ ಸೂಪರ್ ಹಿಟ್ ಚಲನಚಿತ್ರ “ಖಲ್ನಾಯಕ್” ಹಾಡಿನ “ಆಜಾ ಸಜನ್ ಆಜಾ” ನಲ್ಲಿ ಮಹಿಳೆ ನೃತ್ಯ ಮಾಡುವುದನ್ನು ವೀಡಿಯೊದಲ್ಲಿ ಕಾಣಬಹುದು.. ಹಾಡು ಪ್ಲೇ ಆಗುತ್ತಿದ್ದಂತೆ ಮಹಿಳೆ ಪ್ರಧಾನಿ ಮೋದಿಯವರ ಕಟೌಟ್‌ನತ್ತ ಓಡಿ ಅದನ್ನು ತಬ್ಬಿಕೊಳ್ಳುವುದರೊಂದಿಗೆ ವೀಡಿಯೊ ಪ್ರಾರಂಭವಾಗುತ್ತದೆ. ನಂತರ ತನ್ನ ಅರೆಬರೆ ಮೈಯನ್ನು ಪ್ರದರ್ಶಿಸುತ್ತಾ ನೃತ್ಯ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋ ಹಂಚಿಕೊಂಡ ಸುಮಾರು 15 ಸೆಕೆಂಡ್‌ಗಳಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ವೀಡಿಯೊದ ಸಮಯ ಮತ್ತು ಸ್ಥಳವನ್ನು ಇನ್ನೂ ಖಚಿತಪಡಿಸಲಾಗಿಲ್ಲ.

ಇದನ್ನೂ ಓದಿ: ಓಯೋ ರೂಮ್ ಬುಕ್ ಮಾಡಿದ ವ್ಯಕ್ತಿ; ರೂಮ್​​ ಕಂಡು ಕಂಗಾಲು

“ವೀಡಿಯೊ ಅಸಭ್ಯವಾಗಿದೆ ಮತ್ತು ಜನರು ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಣೆಗಳು ಮತ್ತು ಇಷ್ಟಗಳನ್ನು ಗಳಿಸಲು ಇಂತಹ ಕೃತ್ಯಗಳನ್ನು ಮಾಡುವುದನ್ನು ತಡೆಯಬೇಕು. ದೇಶದಲ್ಲಿ ಅಂತಹ ಉನ್ನತ ಸ್ಥಾನದಲ್ಲಿರುವ ವ್ಯಕ್ತಿಗೆ ಗೌರವ ಮತ್ತು ಅವರ ಸ್ಥಾನವನ್ನು ದೇಶದ ಪ್ರತಿಯೊಬ್ಬ ನಾಗರಿಕರು ಗೌರವಿಸಬೇಕು” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ