Video Viral: ಸೆಲ್ಫಿ ಕ್ಲಿಕ್ಕಿಸಲು ಹೋಗಿ ಕಾಲು ಜಾರಿ 100 ಅಡಿ ಕಮರಿಗೆ ಬಿದ್ದ ಯುವತಿ; ಸ್ಥಳೀಯರಿಂದ ರಕ್ಷಣೆ

|

Updated on: Aug 04, 2024 | 4:56 PM

ವೈರಲ್​ ಆಗಿರುವ ವಿಡಿಯೋದಲ್ಲಿ ಸ್ಥಳೀಯರು ಹಗ್ಗದ ಸಹಾಯದಿಂದ ಮಹಿಳೆಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತುತ್ತಿರುವುದನ್ನು ಕಾಣಬಹುದು. ಯುವತಿಯ ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Video Viral: ಸೆಲ್ಫಿ ಕ್ಲಿಕ್ಕಿಸಲು ಹೋಗಿ ಕಾಲು ಜಾರಿ 100 ಅಡಿ ಕಮರಿಗೆ ಬಿದ್ದ ಯುವತಿ; ಸ್ಥಳೀಯರಿಂದ ರಕ್ಷಣೆ
Follow us on

ಮಹಾರಾಷ್ಟ್ರ: ಯುವತಿಯೊಬ್ಬಳು ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ 100 ಅಡಿ ಪ್ರವಾತಕ್ಕೆ ಬಿದ್ದಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಉಂಗಾರ್ ರಸ್ತೆಯ ಬೋರ್ನ್ ಘಾಟ್‌ನಲ್ಲಿ ನಡೆದಿದೆ. ವರದಿಗಳ ಪ್ರಕಾರ ಯುವತಿ ತನ್ನ ಸ್ನೇಹಿತರೊಂದಿಗೆ ಶನಿವಾರ ಬೋರ್ನ್ ಘಾಟ್‌ಗೆ ತೆರಳಿದ್ದಾರೆ. ಈ ವೇಳೆ ಭಾರೀ ಮಳೆಯಾಗುತ್ತಿದ್ದರೂ ಲೆಕ್ಕಿಸದೇ ಮುಂದೆ ಹೋಗಿದ್ದು, ಕಾಲು ಜಾರಿ 100 ಅಡಿ ಆಳಕ್ಕೆ ಬಿದ್ದಿದ್ದಾಳೆ. ಸ್ಥಳೀಯರು ಆಕೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಈ ರಕ್ಷಣಾ ಕಾರ್ಯಾಚರಣೆಯನ್ನು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಸ್ಥಳೀಯರು ಹಗ್ಗದ ಸಹಾಯದಿಂದ ಮಹಿಳೆಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತುತ್ತಿರುವುದನ್ನು ಕಾಣಬಹುದು. ಯುವತಿ ನೋವಿನಿಂದ ಅಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ತಕ್ಷಣ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಗೆ ಹಲವು ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾಳೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವರದಿಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹೆಣ್ಣು ಮಕ್ಕಳ ಲೈಂಗಿಕ ಆಕರ್ಷಣೆಯನ್ನು ಹತ್ತಿಕ್ಕಲು ಈ ದೇಶದಲ್ಲಿ ಏನು ಮಾಡುತ್ತಾರೆ ಗೊತ್ತಾ?

@atuljmd123 ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಆಗಸ್ಟ್​​​​​ 04 ರಂದು ಬೆಳಗ್ಗೆ ಹಂಚಿಕೊಂಡಿರುವ ವಿಡಿಯೋ ಸದ್ಯ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ