BMW ಕಾರಿನಲ್ಲಿ ಬಂದು ಅಂಗಡಿ ಮುಂದೆ ಇರಿಸಿದ್ದ ಹೂವಿನ ಗಿಡ ಕದ್ಡ ಮಹಿಳೆ

ಮಧ್ಯರಾತ್ರಿ 12 ಗಂಟೆ ಸುಮಾರಿಗೆ BMW ಕಾರಿನಲ್ಲಿ ಬಂದ ಮಹಿಳೆಯೊಬ್ಬಳು ಅಂಗಡಿಯ ಮುಂದೆ ಇಟ್ಟಿದ್ದ ಹೂವಿನ ಗಿಡವನ್ನು ಕದ್ದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಅಂಗಡಿಯ ಮುಂದೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಘಟನೆ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಐಷಾರಾಮಿ ಕಾರಿನಲ್ಲಿ ಬಂದ ಮಹಿಳೆಯೊಬ್ಬಳು ಮಧ್ಯರಾತ್ರಿ ಅಂಗಡಿಯ ಮುಂದೆ ಇರಿಸಿದ ಹೂವಿನ ಗಿಡವನ್ನು ಕದ್ದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಮಹಿಳೆ ಹೂವಿನ ಕದ್ದು ಪರಾರಿಯಾಗಿರುವುದು ಅಂಗಡಿಯ ಮುಂದೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ಮಹಿಳೆ ಮರೂನ್ ಬಣ್ಣದ ಬಿಎಂಡಬ್ಲ್ಯು ಕಾರಿನಲ್ಲಿ ಬಂದು ಅಂಗಡಿಯ ಮುಂದೆ ಅಲಂಕಾರಕ್ಕಾಗಿ ಇಟ್ಟಿದ್ದ ಹೂವಿನ ಗಿಡವನ್ನು ಕದ್ದೊಯ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಶುಕ್ರವಾರ (ಅಕ್ಟೋಬರ್ 25) ಸೆಕ್ಟರ್-18ರಲ್ಲಿ ಮಧ್ಯ ರಾತ್ರಿ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಇದನ್ನೂ ಓದಿ: ಜೇಂಟ್‌ ವೀಲ್ಹ್‌ನಲ್ಲಿ ಕುಳಿತು ಲಿಪ್‌ ಲಾಕ್‌ ಮಾಡಿದ ಜೋಡಿ; ವೈರಲ್‌ ಆಯ್ತು ವಿಡಿಯೋ

ಮಹಿಳೆಯ ವರ್ತನೆಯಿಂದ ಇಂಟರ್ನೆಟ್ ಬಳಕೆದಾರರೂ ಆಘಾತಕ್ಕೊಳಗಾಗಿದ್ದು, ಆಕೆಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆಕೆಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ. ಬಳಕೆದಾರರಲ್ಲಿ ಒಬ್ಬರು, “ಯೇ BMW ಭೀಸೆ ಹೈ ಪೆಸಾ ಜೋಡ್ ಕೆ ಲಿ ಹೋಗಿ” (ಈ BMW ಅನ್ನು ಹೀಗೆ ಕದ್ದ ಹಣದಿಂದ ಖರೀದಿಸಿರಬೇಕು.) ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us