AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಡುಗಿಯ ಕೊರಳಿಗೆ ಬೆಲ್ಟ್ ಕಟ್ಟಿಕೊಂಡು ನಾಯಿಯಂತೆ ಬೀದಿಗಿಳಿದ ಮಹಿಳೆ

ಕುತ್ತಿಗೆಗೆ ಬೆಲ್ಟ್ ಹಾಕಿಕೊಂಡಿರುವ ಯುವತಿ, ಕಪ್ಪು ಬಟ್ಟೆ ಧರಿಸಿ ಪ್ರಾಣಿಯಂತೆ ನಾಲ್ಕು ಕಾಲಿನಲ್ಲಿ ರಸ್ತೆಯಲ್ಲಿ ನಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.ಕೇವಲ 26 ಸೆಕೆಂಡ್‌ಗಳ ಈ ವಿಡಿಯೋಗೆ ಇದುವರೆಗೆ 16 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. 'ಮುಂಬೈಗೆ ಏನಾಯಿತು? ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಣೆಗಾಗಿ ಜನರು ಈ ಮಟ್ಟಕ್ಕೆ ಹೇಗೆ ಇಳಿಯುತ್ತಾರೆ?' ಎಂದು ಪೋಸ್ಟ್​​​ಗೆ ಕ್ಯಾಪ್ಷನ್​​ ಬರೆಯಲಾಗಿದೆ.

Viral Video: ಹುಡುಗಿಯ ಕೊರಳಿಗೆ ಬೆಲ್ಟ್ ಕಟ್ಟಿಕೊಂಡು ನಾಯಿಯಂತೆ ಬೀದಿಗಿಳಿದ ಮಹಿಳೆ
Viral Video
ಅಕ್ಷತಾ ವರ್ಕಾಡಿ
|

Updated on: Feb 18, 2024 | 6:01 PM

Share

ಯುವತಿಯೊಬ್ಬಳ ಕುತ್ತಿಗೆಗೆ ಮತ್ತೊಬ್ಬಳು ಯುವತಿ ಬೆಲ್ಟ್ ಹಾಕಿ ನಾಯಿಯಂತೆ ಬೀದಿಯಲ್ಲಿ ಸುತ್ತಾಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಚಿತ್ರ ದೃಶ್ಯವನ್ನು ಕಂಡು ಸುಮ್ಮನಿದ್ದ ಸ್ಥಳೀಯರಿಗೆ ಹಾಗೂ ವಿಡಿಯೋ ತೆಗೆದವರ ಬಗ್ಗೆ ನೆಟ್ಟಿಗರು ಕಮೆಂಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆಘಾತಕಾರಿ ವಿಡಿಯೋ ಮುಂಬೈನದ್ದು ಎಂದು ತಿಳಿದುಬಂದಿದೆ. ಕುತ್ತಿಗೆಗೆ ಬೆಲ್ಟ್ ಹಾಕಿಕೊಂಡಿರುವ ಯುವತಿ, ಕಪ್ಪು ಬಟ್ಟೆ ಧರಿಸಿ ಪ್ರಾಣಿಯಂತೆ ನಾಲ್ಕು ಕಾಲಿನಲ್ಲಿ ರಸ್ತೆಯಲ್ಲಿ ನಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವೀಡಿಯೊವನ್ನು @mathrunner7 ಎಂಬ ಟ್ವಿಟರ್​​ ಖಾತೆಯಲ್ಲಿ ಫೆಬ್ರವರಿ 14ರಂದು ಹಂಚಿಕೊಳ್ಳಲಾಗಿದೆ. ‘ಮುಂಬೈಗೆ ಏನಾಯಿತು? ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಣೆಗಾಗಿ ಜನರು ಈ ಮಟ್ಟಕ್ಕೆ ಹೇಗೆ ಇಳಿಯುತ್ತಾರೆ?’ ಎಂದು ಪೋಸ್ಟ್​​​ಗೆ ಕ್ಯಾಪ್ಷನ್​​ ಬರೆದಿದ್ದಾರೆ. ಜೊತೆಗೆ ಪೋಸ್ಟ್ ಅನ್ನು ಮುಂಬೈ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕೃತ್ಯಕ್ಕೆ ಅವಕಾಶವಿದೆಯೇ ಎಂದು ಕೇಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೈ ಹಿಡಿದು ಸುತ್ತುವುದು ಪ್ರೇಮವಲ್ಲ, ಜೀವನದ ಪ್ರತಿ ಹಂತದಲ್ಲೂ ಈ ರಿಯಲ್ ಜೋಡಿಯಂತಿರಬೇಕು

ಕೇವಲ 26 ಸೆಕೆಂಡ್‌ಗಳ ಈ ವಿಡಿಯೋಗೆ ಇದುವರೆಗೆ 16 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಈ ವೀಡಿಯೊಗೆ ಬಳಕೆದಾರರು ವಿವಿಧ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಬಳಕೆದಾರರೊಬ್ಬರು ಬರೆದು ನಮ್ಮ ಭಾರತ ಈಗ ಇದೇ ರೀತಿಯ ಕಾಯಿಲೆಗೆ ತುತ್ತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು