Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಜಾರಿ ಬಿದ್ದ ಮಹಿಳೆಯ ಪರಿಸ್ಥಿತಿ ಏನಾಗಿದೆ ನೋಡಿ! ಭಯಾನಕ ದೃಶ್ಯವಿದು

Viral Video: ತೆಲಂಗಾಣದ ಹೈದರಾಬಾದ್ ನಿವಾಸಿಯಾಗಿರುವ ಮಹಿಳೆ ಭಾವನಗರ- ಕಾಕಿನಾಡ ವಿಶೇಷ ರೈಲಿನೊಳಗೆ ಹತ್ತಲು ಪ್ರಯತ್ನಿಸುತ್ತಿದ್ದರು. ಆ ವೇಳೆ ಕಾಲು ಜಾರಿ ಆಕೆ ಕೆಳಗೆ ಬಿದ್ದಿದ್ದಾರೆ.

Shocking Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಜಾರಿ ಬಿದ್ದ ಮಹಿಳೆಯ ಪರಿಸ್ಥಿತಿ ಏನಾಗಿದೆ ನೋಡಿ! ಭಯಾನಕ ದೃಶ್ಯವಿದು
ಚಲಿಸುತ್ತಿರುವ ರೈಲು ಹತ್ತಲು ಹೋಗಿ ಜಾರಿ ಬಿದ್ದ ಮಹಿಳೆಯ ಪರಿಸ್ಥಿತಿ ಏನಾಗಿದೆ ನೋಡಿ!
Follow us
TV9 Web
| Updated By: shruti hegde

Updated on:Sep 21, 2021 | 9:24 AM

ಮುಂಬೈನ ವಸಾಯಿ ರೈಲ್ವೇ ನಿಲ್ದಾಣದಲ್ಲಿ 71 ವರ್ಷದ ಮಹಿಳೆ ಜಾರಿ ಬಿದ್ದು ಪ್ಲಾಟ್ ಫಾರ್ಮ್ ಮತ್ತು ಚಲಿಸುತ್ತಿರುವ ರೈಲಿನ ನಡುವಿನ ಅಂತರದಲ್ಲಿ ಸಿಲುಕಿಕೊಂಡಿರುವ ಭಯಾನಕ ಘಟನೆಯೊಂದು ನಡೆದಿದೆ. ಈ ಆಘಾತಕಾರಿ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ತಕ್ಷಣ ಎಚ್ಚತ್ತುಕೊಂಡ ಆಕೆಯ ಪತಿ ಮತ್ತು ಸ್ಥಳದಲ್ಲಿದ್ದ ಪ್ರಯಾಣಿಕರು ಮಹಿಳೆಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ತೆಲಂಗಾಣದ ಹೈದರಾಬಾದ್ ನಿವಾಸಿಯಾಗಿರುವ ಮಹಿಳೆ ಭಾವನಗರ- ಕಾಕಿನಾಡ ವಿಶೇಷ ರೈಲಿನೊಳಗೆ ಹತ್ತಲು ಪ್ರಯತ್ನಿಸುತ್ತಿದ್ದರು. ಆ ವೇಳೆ ಕಾಲು ಜಾರಿ ಆಕೆ ಕೆಳಗೆ ಬಿದ್ದಿದ್ದಾರೆ. ಈ ಘಟನೆ ಶನಿವಾರ ನಡೆದಿದೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಸಿಸಿ ಟಿವಿ ಫೂಟೆಜ್​ನಲ್ಲಿ ಗಮನಿಸುವಂತೆ ಆಕೆಯ ಗಂಡ ಮತ್ತು ಸ್ಥಳದಲ್ಲಿದ್ದ ಪ್ರಯಾಣಿಕರು ಮಹಿಳೆಯ ಕಡೆಗೆ ಧಾವಿಸುತ್ತಿರುವುದು ಕಂಡು ಬರುತ್ತದೆ. ಸುರಕ್ಷಿತವಾಗಿ ಮಹಿಳೆಯನ್ನು ಎಳೆದು ಜೀವ ಉಳಿಸಿದ್ದಾರೆ. ಕೆಲ ಸೆಕೆಂಡುಗಳಲ್ಲಿ ರೈಲು ನಿಂತಿದೆ. ಪೊಲೀಸ್ ಸಿಬ್ಬಂದಿ ಮತ್ತು ನಿಲ್ದಾಣದಲ್ಲಿದ್ದ ಜನರು ಆಕೆಯ ಪರಿಸ್ಥಿತಿಯನ್ನು ವಿಚಾರಿಸುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು.

ಈ ವಿಡಿಯೋ ವೈರಲ್ ಆಗಿದ್ದು, ಮಹಿಳೆಯ ಜೀವ ಉಳಿಸಿದವರಿಗೆ ನೆಟ್ಟಿಗರು ಧನ್ಯವಾದ ಹೇಳಿದ್ದಾರೆ. ಇನ್ನು ಕೆಲವರು ರೈಲು ಹತ್ತುವಾಗ ಹೆಚ್ಚು ಎಚ್ಚರದಿಂದಿರಬೇಕು ಜತೆಗೆ ಅವರಸರ ಒಳ್ಳೆಯದಲ್ಲ ಎಂದು ಎಚ್ಚರಿಸಿದ್ದಾರೆ. ಈ ದೃಶ್ಯ ತುಂಬಾ ಭಯಾನಕವಾಗಿದೆ. ಈ ದೃಶ್ಯ ನೋಡಿಯಾದರೂ ಜನರು ಅರ್ಥ ಮಾಡಿಕೊಳ್ಳಬೇಕು, ರೈಲಿನಲ್ಲಿ ಇಳಿಯುವಾಗ ಮತ್ತು ಹತ್ತುವಾಗ ನಿಯಮಗಳನ್ನು ಪಾಲಿಸಿ, ಗಡಿಬಿಡಿ ಮಾಡಬೇಡಿ ಎಂದು ಕೆಲವರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮಹಿಳೆಯ ಬೆನ್ನು ಮತ್ತು ಕಾಲಿಗೆ ಗಾಯಗಳಾದ್ದರಿಂದ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಕಳೆದ ಭಾನುವಾರ ಮಹಿಳೆಯನ್ನು ಡಿಶ್ಚಾರ್ಜ್ ಮಾಡಲಾಗಿದೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ. ಚಲಿಸುವ ರೈಲನ್ನು ಹತ್ತಲು ಎಂದೂ ಪ್ರಯತ್ನಿಸಬೇಡಿ ಎಂದ ಭಾರತೀಯ ರೈಲ್ವೇ ಅಧಿಕಾರಿಗಳು ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:

Shocking Video: ಬಸ್ಸನ್ನು ಓವರ್ ​ಟೇಕ್​ ಮಾಡೋಕೆ ಹೋಗಿ ಆಗಿದ್ದೇ ಬೇರೆ! ಒಂದು ಸೆಕೆಂಡ್​ ತಡವಾಗಿದ್ರೂ ವ್ಯಕ್ತಿಯ ಮೈಮೇಲೆ ಹತ್ತುತ್ತಿತ್ತು ಬಸ್

Shocking Video: ಕುದಿಯುತ್ತಿರುವ ನೀರಿನಲ್ಲಿ ಕುಳಿತು ಧ್ಯಾನಸ್ಥನಾದ ಬಾಲಕ; ಶುರುವಾಯ್ತು ಚರ್ಚೆ

(Viral Video Women slip fall down from falling under the train passenger saves her in Maharashtra shocking video)

Published On - 9:23 am, Tue, 21 September 21

ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ