Viral Video: ಲುಲು ಮಾಲ್ ನಲ್ಲಿ ಖರೀದಿಸಿದ ಫಲೂದದಲ್ಲಿ ಹುಳು ಪತ್ತೆ; ವಿಡಿಯೋ ವೈರಲ್

ಉತ್ತರ ಪ್ರದೇಶದ ಲಕ್ನೋದ ಲುಲು ಮಾಲ್‌ನಲ್ಲಿರುವ 'ಫಲುಡಾ ನೇಷನ್' ಕುಲ್ಫಿಯಲ್ಲಿ ಹುಳ ಪತ್ತೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಬೇಜಾವಬ್ದಾರಿ ಕಂಡು ನೆಟ್ಟಿಗರು ಗರಂ ಆಗಿದ್ದಾರೆ.

Viral Video: ಲುಲು ಮಾಲ್ ನಲ್ಲಿ ಖರೀದಿಸಿದ ಫಲೂದದಲ್ಲಿ ಹುಳು ಪತ್ತೆ; ವಿಡಿಯೋ ವೈರಲ್
Follow us
ಅಕ್ಷತಾ ವರ್ಕಾಡಿ
|

Updated on: Mar 30, 2024 | 11:15 AM

ಬೇಸಿಗೆಯಲ್ಲಿ ತಂಪಾದ ಐಸ್ ಕ್ರೀಮ್​ ತಿನ್ನಲು ಎಲ್ಲರೂ ಇಷ್ಟಪಡುತ್ತಾರೆ. ಆದರೆ ಇದೀಗಾ ವೈರಲ್​​ ಆಗುತ್ತಿರುವ ವಿಡಿಯೋ ನೋಡಿದರೆ ನೀವು ಐಸ್ ಕ್ರೀಮ್​ನಿಂದ ದೂರ ಉಳಿಯುವುದಂತೂ ಖಂಡಿತಾ. ಉತ್ತರ ಪ್ರದೇಶದ ಲಕ್ನೋದ ಲುಲು ಮಾಲ್‌ನಲ್ಲಿರುವ ನೇಷನ್​​​​ ಶಾಪ್​​​​ನ ಫಲೂದದಲ್ಲಿ ಹುಳ ಪತ್ತೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಲಕ್ನೋದ ಲುಲು ಮಾಲ್‌ಗೆ ಪ್ರತಿದಿನ ಸಾವಿರಾರು ಜನರು ಶಾಪಿಂಗ್ ಹಾಗೂ ಫ್ಯಾಮಿಲಿಯೊಂದಿಗೆ ಸಮಯ ಕಳೆಯಲು ಭೇಟಿ ನೀಡುತ್ತಾರೆ. ಇಂತಹ ಮಾಲ್‌ನಲ್ಲಿ ಬೇಜಾವಬ್ದಾರಿ ಕಂಡು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ‘ಇದು ಸಣ್ಣ ವಿಷಯವಲ್ಲ ಈ ಕುರಿತು ಇಲಾಖೆ ಕ್ರಮ ಕೈಗೊಳ್ಳಬೇಕು’ ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ.

​​​ಇದನ್ನೂ ಓದಿ: ಯುವತಿಯ ಕಿಡ್ನಿ ವೈಫಲ್ಯಕ್ಕೆ ಕಾರಣವಾದ ಹೇರ್ ಸ್ಟ್ರೈಟ್ನಿಂಗ್ ಟ್ರೀಟ್​​ಮೆಂಟ್​​​​​​

ಲುಲು ಮಾಲ್‌ನಲ್ಲಿ ಕಳಪೆ ಆಹಾರ ಪೂರೈಕೆ ಆರೋಪ ಮತ್ತು ಘಟನೆಗಳು ಇದೇ ಮೊದಲಲ್ಲ. ಮಾಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರದ ಬಗ್ಗೆ ಈಗಾಗಲೇ ಸಾಕಷ್ಟು ದೂರುಗಳಿವೆ. ಹಲವು ವಿಡಿಯೋಗಳು ಕೂಡ ವೈರಲ್ ಆಗುತ್ತಿವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ