AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೂನಿಯರ್​​​ನ್ನು ಕೊಠಡಿಯಲ್ಲಿ ಕೂಡಿ ಹಾಕಿ ಬೆಲ್ಟ್​ನಲ್ಲಿ ಹೊಡೆದ ಸೀನಿಯರ್​ ವಿದ್ಯಾರ್ಥಿಗಳು

ವೈರಲ್​​ ಆಗಿರುವ ವಿಡಿಯೋದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಯನ್ನು ಹಾಸ್ಟೆಲ್​ ಕೊಠಡಿಯಲ್ಲಿ ಕೂಡಿ ಹಾಕಿ ಬೆಲ್​ಟ್​​​ನಲ್ಲಿ ಥಳಿಸುತ್ತಿರುವುದು ಸೆರೆಯಾಗಿದೆ. ಇದಲ್ಲದೇ ಅವಾಚ್ಯ ಶಬ್ದಗಳಿಂದ ಬೈಯುತ್ತಾ ಹೆದರಿಸುತ್ತಿರುವುದನ್ನು ಕಾಣಬಹುದು. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Viral Video: ಜೂನಿಯರ್​​​ನ್ನು ಕೊಠಡಿಯಲ್ಲಿ ಕೂಡಿ ಹಾಕಿ ಬೆಲ್ಟ್​ನಲ್ಲಿ ಹೊಡೆದ ಸೀನಿಯರ್​ ವಿದ್ಯಾರ್ಥಿಗಳು
ಅಕ್ಷತಾ ವರ್ಕಾಡಿ
|

Updated on:Sep 11, 2024 | 12:09 PM

Share

ಹಿಮಾಚಲ ಪ್ರದೇಶ: ಹಿರಿಯ ವಿದ್ಯಾರ್ಥಿಗಳ ಗುಂಪೊಂದು ತನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದೆ ಎಂದು ಆರೋಪಿಸಿ ಜೂನಿಯರ್ ವಿದ್ಯಾರ್ಥಿಯೊಬ್ಬ ರ್‍ಯಾಂಗಿಂಗ್ ದೂರು ದಾಖಲಿಸಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ವಂಕಾಘಾಟ್ ಪ್ರದೇಶದ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ. ಘಟನೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದಂತೆ ಆರೋಪಿ ವಿದ್ಯಾರ್ಥಿಗಳಾದ ಕರಣ್ ಡೋಗ್ರಾ (19), ಚಿರಾಗ್ ರಾಣಾ (19) ಮತ್ತು ದಿವ್ಯಾಂಶ್ (19) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದಲ್ಲದೇ ಈ ಮೂರು ವಿದ್ಯಾರ್ಥಿಗಳನ್ನು ವಿಶ್ವವಿದ್ಯಾಲಯದಿಂದ ಹೊರಹಾಕಲಾಗಿದೆ.

@SachinGuptaUP ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಇಂದು ಬೆಳಗ್ಗೆ(ಸೆ. 11) ಹಂಚಿಕೊಂಡಿರುವ ವಿಡಿಯೋ ಈಗಾಗಲೇ ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ತೀವ್ರ ಚರ್ಚೆಗೆ ಕಾರಣವಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹದಿಹರೆಯದ ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ

ವೈರಲ್​​ ಆಗಿರುವ ವಿಡಿಯೋದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಯನ್ನು ಹಾಸ್ಟೆಲ್​ ಕೊಠಡಿಯಲ್ಲಿ ಕೂಡಿ ಹಾಕಿ ಬೆಲ್​ಟ್​​​ನಲ್ಲಿ ಥಳಿಸುತ್ತಿರುವುದು ಸೆರೆಯಾಗಿದೆ. ಇದಲ್ಲದೇ ಅವಾಚ್ಯ ಶಬ್ದಗಳಿಂದ ಬೈಯುತ್ತಾ ಹೆದರಿಸುತ್ತಿರುವುದನ್ನು ಕಾಣಬಹುದು. ಪೊಲೀಸರಿಗೆ ನೀಡಿದ ದೂರಿನ ಆಧಾರದ ಮೇಲೆ ಶನಿವಾರ (ಸೆ. 7) ತಡರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:06 pm, Wed, 11 September 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್