AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivo Y35+ 5G: ಸದ್ದಿಲ್ಲದೆ ಒಂದೇ ದಿನ ಎರಡು ಆಕರ್ಷಕ ಸ್ಮಾರ್ಟ್​ಫೋನ್ಸ್ ಬಿಡುಗಡೆ ಮಾಡಿದ ವಿವೋ: ಯಾವುದು ನೋಡಿ

ವಿವೋ ಕಂಪನಿ ವಿವೋ Y35+ 5G ಮತ್ತು ವಿವೋ Y35m+ 5G ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಕ್ಯಾಮೆರಾ, ಬಲಿಷ್ಠ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್​ಗಳನ್ನು ಒಳಗೊಂಡಿದೆ. ಚೀನಾದಲ್ಲಿ ವಿವೋ Y35+ 5G ಸ್ಮಾರ್ಟ್​ಫೋನ್ ಒಂದು ಸ್ಟೋರೇಜ್​ನಲ್ಲಿ ಮಾತ್ರ ಅನಾವರಣಗೊಂಡಿದೆ. ಇದರ 6GB RAM ಮತ್ತು 128GB ಆಯ್ಕೆಯ ಬೆಲೆ CNY 1,399. ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 16,400ರೂ. ಇರಬಹುದು.

Vivo Y35+ 5G: ಸದ್ದಿಲ್ಲದೆ ಒಂದೇ ದಿನ ಎರಡು ಆಕರ್ಷಕ ಸ್ಮಾರ್ಟ್​ಫೋನ್ಸ್ ಬಿಡುಗಡೆ ಮಾಡಿದ ವಿವೋ: ಯಾವುದು ನೋಡಿ
Vivo Y35 5G, Y35m 5G
Vinay Bhat
| Edited By: |

Updated on:Oct 07, 2026 | 7:08 PM

Share

ಮುಖ್ಯಾಂಶಗಳು

  • ಎರಡು ಸ್ಮಾರ್ಟ್​ಫೋನ್ಸ್ ಬಿಡುಗಡೆ ಮಾಡಿದ ವಿವೋ
  • ವಿವೋ Y35+ 5G ಮತ್ತು ವಿವೋ Y35m+ 5G ಬಿಡುಗಡೆ
  • ಈ ಫೋನಿನ ಬೆಲೆ, ಫೀಚರ್ಸ್​ ಮಾಹಿತಿ ಇಲ್ಲಿದೆ

ಪ್ರಸಿದ್ಧ ವಿವೋ (Vivo) ಕಂಪನಿ ಜಾಗತಿಕ ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್​ಫೋನುಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಕಳೆದ ವಾರವಷ್ಟೆ ಭಾರತದಲ್ಲಿ ವಿವೋ ವೈ36 (Vivo Y36) ಎಂಬ ಆಕರ್ಷಕ ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದ್ದ ಕಂಪನಿ ಇದೀಗ ಚೀನಾ ಮಾರುಕಟ್ಟೆಯಲ್ಲಿ ವಿವೋ Y35+ 5G ಮತ್ತು ವಿವೋ Y35m+ 5G ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಕ್ಯಾಮೆರಾ, ಬಲಿಷ್ಠ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್​ಗಳನ್ನು ಒಳಗೊಂಡಿದೆ. ಕೆಲವು ದಿನಗಳ ಬಳಿಕ ಇದು ಭಾರತಕ್ಕೂ ಕಾಲಿಡಲಿದೆ. ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್​ ಬಗ್ಗೆ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ಚೀನಾದಲ್ಲಿ ವಿವೋ Y35+ 5G ಸ್ಮಾರ್ಟ್​ಫೋನ್ ಒಂದು ಸ್ಟೋರೇಜ್​ನಲ್ಲಿ ಮಾತ್ರ ಅನಾವರಣಗೊಂಡಿದೆ. ಇದರ 6GB RAM ಮತ್ತು 128GB ಆಯ್ಕೆಯ ಬೆಲೆ CNY 1,399. ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 16,400ರೂ. ಇರಬಹುದು. ಇದು ಸ್ಟಾರ್ ರಿಂಗ್ ಬ್ಲಾಕ್, ಸಾಲ್ಟ್ ಲೇಕ್ ಬ್ಲೂ ಮತ್ತು ನೆಬ್ಯುಲಾ ಪರ್ಪಲ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇನ್ನು ವಿವೋ Y35m + 5G ಸ್ಮಾರ್ಟ್‌ಫೋನಿನ 8GB RAM ಮತ್ತು 128G ಸ್ಟೋರೇಜ್‌ ಆಯ್ಕೆಯು CNY 1,599 ಯುವಾನ್ (ಭಾರತದಲ್ಲಿ ಅಂದಾಜು 18,700ರೂ.)

Tech Tips: ನಿಮ್ಮಲ್ಲಿರುವ ಸಿಮ್ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು ಗೊತ್ತೇ?; ಇಲ್ಲಿದೆ ಮಾಹಿತಿ

ಫೀಚರ್ಸ್ ಏನಿದೆ?:

ವಿವೋ Y35+ 5G ಮತ್ತು ವಿವೋ Y35m+ 5G ಸ್ಮಾರ್ಟ್‌ಫೋನ್‌ಗಳು 2388×1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. 19:9 ರಚನೆಯ ಅನುಪಾತವನ್ನು ಒಳಗೊಂಡಿದ್ದು 60Hz ರಿಫ್ರೆಶ್ ರೇಟ್​ನೊಂದಿಗೆ ರಿಲೀಸ್ ಆಗಿದೆ. ಈ ಎರಡೂ ಫೋನ್‌ಗಳು ಆಕ್ಟಾ-ಕೋರ್ ಡೈಮೆನ್ಸಿಟಿ 6020SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. Mali-G57 GPU ಸರ್ಪೋರ್ಟ್‌ ಪಡೆದುಕೊಂಡಿರುವುದು ಈ ಫೋನಿನ ವಿಶೇಷತೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ವಿವೋ Y35+ 5G ಮತ್ತು ವಿವೋ Y35m+ 5G ಸ್ಮಾರ್ಟ್‌ಫೋನ್‌ಗಳು 50 ಮೆಗಾ ಪಿಕ್ಸೆಲ್ ಸಾಮರ್ಥ್ಯದ ಡ್ಯುಯಲ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, LED ಫ್ಲ್ಯಾಷ್‌ನೊಂದಿಗೆ ಬರಲಿದೆ. ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 8 ಮೆಗಾ ಪಿಕ್ಸೆಲ್ ಕ್ಯಾಮೆರಾ ಅಳವಡಿಸಲಾಗಿದೆ.

ಈ ಸ್ಮಾರ್ಟ್‌ಫೋನ್‌ಗಳು ದೀರ್ಘ ಸಮಯ ಬಾಳಕೆ ಬರುವಂತಹ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G SA/NSA, 4G LTE, ಡ್ಯುಯಲ್ ನ್ಯಾನೊ SIM ಕಾರ್ಡ್, USB ಟೈಪ್-C ಪೋರ್ಟ್, Wi-Fi 802.11 b/g/n/ac, ಬ್ಲೂಟೂತ್ 5.1, OTG, GPS, Beidou, GLONASS, ಗೆಲಿಲಿಯೊ, 3.5mm ಆಡಿಯೋ ಜ್ಯಾಕ್ ನೀಡಲಾಗಿದೆ.

Published On - 2:22 pm, Mon, 29 May 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ