Viral Post: ಸ್ವಾತಂತ್ರ್ಯದ ಅಮೃತಮಹೋತ್ಸವಕ್ಕೆ ಬಾಹ್ಯಾಕಾಶದಿಂದ ಶುಭಾಶಯ

Gaganyaan : ಇಟಲಿಯ ಗಗನಯಾತ್ರಿ ಸಮಂತಾ ಕ್ರಿಸ್ಟೋಫೊರೆಟ್ಟಿ 2023ರ ಗಗನಯಾನ ಯೋಜನೆಗೆ ಶುಭ ಕೋರಿದ ವಿಡಿಯೋ.

Viral Post: ಸ್ವಾತಂತ್ರ್ಯದ ಅಮೃತಮಹೋತ್ಸವಕ್ಕೆ ಬಾಹ್ಯಾಕಾಶದಿಂದ ಶುಭಾಶಯ
‘ಗಗನಯಾನ್’ ಯಶಸ್ವಿಯಾಗಲೆಂದು ಗಗನಯಾನಿ ಸಮಂತಾ ಕ್ರಿಸ್ಟೋಫೊರೆಟ್ಟಿ ಬಾಹ್ಯಾಕಾಶದಿಂದ ಇಸ್ರೋಗೆ ಸಂದೇಶ ಕಳಿಸುತ್ತಿರುವ ಚಿತ್ರ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Aug 13, 2022 | 5:31 PM

Delhi : ಭಾರತವು ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಭಾರತಕ್ಕೆ ಬಾಹ್ಯಾಕಾಶದಿಂದ ಶುಭಾಶಯವನ್ನು ಕೋರಿದ್ದಾರೆ ಇಟಲಿಯ ಗಗನಯಾತ್ರಿ ಸಮಂತಾ ಕ್ರಿಸ್ಟೋಫೊರೆಟ್ಟಿ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ISRO ಗೆ ಗಗನಯಾನ ಯೋಜನೆಗೆ ಅವರು ಶುಭಕೋರಿದ್ದಾರೆ. 2023ರಲ್ಲಿ ನಡೆಯಲಿರುವ ಭಾರತದ ಪ್ರಥಮ ಮಾನವ ಬಾಹ್ಯಾಕಾಶ ಯಾತ್ರೆಯ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದ್ದಾರೆ. 1 ನಿಮಿಷ, 13 ಸೆಕೆಂಡುಗಳ ಈ ವಿಡಿಯೋದಲ್ಲಿ ಸಮಂತಾ, ನಾಸಾ ಮತ್ತು ಇಸ್ರೋ ನಡುವೆ ನಡೆಯುತ್ತಿರುವ ಭೂವೀಕ್ಷಣೆ ಕಾರ್ಯಾಚರಣೆ ಕುರಿತು ಹೇಳಿದ್ದಾರೆ. ಭವಿಷ್ಯದಲ್ಲಿ ಬಾಹ್ಯಾಕಾಶ ಸಂಶೋಧನೆಗಳಿಗಾಗಿ ನಾಸಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದೊಂದಿಗಿನ ಪಾಲುದಾರಿಕೆಯನ್ನು ವಿಸ್ತರಿಸಲಿದೆ ಎಂದಿದ್ದಾರೆ. ಭವಿಷ್ಯದ ಬಾಹ್ಯಾಕಾಶ ಸಂಶೋಧನೆಯನ್ನು ಒಟ್ಟಾಗಿ ಮಾಡುವುದು ನಮ್ಮೆಲ್ಲರ ಗುರಿಯಾಗಿದೆ ಎಂದೂ ತಿಳಿಸಿದ್ದಾರೆ. ಈ ಸಂದೇಶವನ್ನು ಅಮೆರಿಕದ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

‘ಗಗನಯಾನ’ ಸಿದ್ಧತೆ ಪೂರ್ಣಗೊಂಡಿದ್ದು, ಭಾರತೀಯರು ಮುಂದಿನ ವರ್ಷ ಬಾಹ್ಯಾಕಾಶಕ್ಕೆ ತೆರಳಲಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಕಳೆದ ತಿಂಗಳು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. 2023 ರಲ್ಲಿ ನಡೆಯಲಿರುವ ಮಿಷನ್‌ನ ಪ್ರಯೋಗಗಳನ್ನು ಈ ವರ್ಷದ ಅಂತ್ಯದ ವೇಳೆಗೆ ನಡೆಸಲಾಗುವುದು ಎಂದು ಸಚಿವ ಜಿತೇಂದ್ರ ಸಿಂಗ್ ಹೇಳಿದ್ದರು.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

‘ಮುಂದಿನ ವರ್ಷ ಭಾರತೀಯ ಮೂಲದ ಒಬ್ಬರು ಅಥವಾ ಇಬ್ಬರು ಬಾಹ್ಯಾಕಾಶಕ್ಕೆ ಹೋಗಬಹುದು ಅದಕ್ಕಾಗಿ ನಮ್ಮ ‘ಗಗನಯಾನ ಯೋಜನೆಗೆ’ ಸಿದ್ಧತೆ ನಡೆದಿದೆ. ಅದಕ್ಕೂ ಮೊದಲು ಈ ವರ್ಷಾಂತ್ಯದೊಳಗೆ ಎರಡು ಪ್ರಯೋಗಗಳನ್ನು ನಡೆಸಲಾಗುವುದು. ಎರಡನೇ ಪ್ರಯೋಗದಲ್ಲಿ ಮಹಿಳಾ ರೋಬೋಟ್ (ಗಗನಯಾತ್ರಿ) ವ್ಯೋಮಮಿತ್ರಳನ್ನು ಕಳುಹಿಸಲಾಗುವುದು.’ ಎಂದು ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಮತ್ತಷ್ಟು ಸುದ್ದಿಗಾಗಿ ಕ್ಲಿಕ್ ಮಾಡಿ

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್