AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂಕ್ತರೀತಿಯ ಒಳಉಡುಪು ಧರಿಸಿ’ ಕ್ಯಾಬಿನ್​ ಸಿಬ್ಬಂದಿಗೆ ಪಾಕ್​ ರಾಷ್ಟ್ರೀಯ ವಿಮಾನಯಾನ ಸಂಸ್ಥೆಯಿಂದ ಆದೇಶ

Wear proper undergarments : ಕ್ಯಾಬಿನ್​ ಸಿಬ್ಬಂದಿಯು ಕಡ್ಡಾಯವಾಗಿ ಸೂಕ್ತರೀತಿಯ ಒಳಉಡುಪು ಧರಿಸಲೇಬೇಕು ಇಲ್ಲವಾದಲ್ಲಿ ಏರ್​ ಕ್ಯಾರಿಯರ್ ಬಗ್ಗೆ ನಕಾರಾತ್ಮಕ ಧೋರಣೆ ಹೊಮ್ಮುತ್ತದೆ ಎಂದು ಪಿಎಐ ಅಧಿಸೂಚನೆ ಹೊರಡಿಸಿದೆ.

‘ಸೂಕ್ತರೀತಿಯ ಒಳಉಡುಪು ಧರಿಸಿ’ ಕ್ಯಾಬಿನ್​ ಸಿಬ್ಬಂದಿಗೆ ಪಾಕ್​ ರಾಷ್ಟ್ರೀಯ ವಿಮಾನಯಾನ ಸಂಸ್ಥೆಯಿಂದ ಆದೇಶ
ಪ್ರಾತಿನಿಧಿಕ ಚಿತ್ರ
TV9 Web
| Edited By: ಶ್ರೀದೇವಿ ಕಳಸದ|

Updated on:Sep 30, 2022 | 11:06 AM

Share

Trending : ವಿಮಾನ ಸಂಸ್ಥೆಯಲ್ಲಿ ಮತ್ತು ವಿಮಾನಯಾನದಲ್ಲಿ ತಮ್ಮ ದಿರಿಸು, ಮೇಕ್ಅಪ್​, ಶಿಸ್ತಿನೊಂದಿಗೆ ಉತ್ತಮವಾದ ನಡೆವಳಿಕೆಗಳಿಂದ ಗಮನ ಸೆಳೆದು ಪ್ರಯಾಣಸ್ನೇಹಿ ಎನ್ನಿಸಿಕೊಳ್ಳುವ ಕ್ಯಾಬಿನ್​ ಸಿಬ್ಬಂದಿಗೆ ಹೀಗೊಂದು ವಿಚಿತ್ರ  ಆದೇಶವನ್ನು ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನ ಸಂಸ್ಥೆಯು (PIA) ಹೊರಡಿಸಿದೆ. ಕ್ಯಾಬಿನ್​ ಸಿಬ್ಬಂದಿಯು ಸೂಕ್ತವಾದ ಒಳಉಡುಪುಗಳನ್ನು ಅಗತ್ಯವಾಗಿ ಧರಿಸಲೇಬೇಕು ಎಂದು ಸಂಸ್ಥೆಯು ಪ್ರಕಟಣೆ ಹೊರಡಿಸಿದೆ. ಕ್ಯಾಬಿನ್​ ಸಿಬ್ಬಂದಿಗೆ ಡ್ರೆಸ್ಸಿಂಗ್​ ಸೆನ್ಸ್​ ಬಹಳ ಮುಖ್ಯ. ಇಲ್ಲವಾದಲ್ಲಿ ಸಂಸ್ಥೆಯ ಬಗ್ಗೆ ಪ್ರಯಾಣಿಕರು ನಕಾರಾತ್ಮಕ ಧೋರಣೆ ಹೊಂದುತ್ತಾರೆ ಎಂದಿದೆ ಪಿಐಎ. ಈ ಆದೇಶವು ವಿಚಿತ್ರ ಮತ್ತು ವಿಲಕ್ಷಣ ಎನ್ನಿಸುತ್ತಿದೆ ನಿಜ.

ಆದರೆ, ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯು ಸಿಬ್ಬಂದಿಗೆ ಸೂಕ್ತವಾದಂಥ ಒಳ ಉಡುಪುಗಳನ್ನು ಧರಿಸುವುದು ಅತ್ಯಗತ್ಯ ಎಂದು ಆದೇಶ ಹೊರಡಿಸಿದೆ. ಹಾಗಾಗಿ ಪಾಕಿಸ್ತಾನ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತಾರಾಷ್ಟ್ರೀಯ ಏರ್ ಕ್ಯಾರಿಯರ್​ ಈ ಹೊಸ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತನ್ನ ವಿಮಾನ ಸಿಬ್ಬಂದಿಯನ್ನು ಕೇಳಿಕೊಂಡಿದೆ. ಈ ಸುದ್ದಿಯನ್ನು ಜಿಯೋ ಸುದ್ದಿ ಸಂಸ್ಥೆಯು ವರದಿ ಮಾಡಿದೆ.

‘ಕೆಲ ಕ್ಯಾಬಿನ್ ಸಿಬ್ಬಂದಿ ಇಂಟರ್‌ಸಿಟಿ ಪ್ರಯಾಣ ಮಾಡುವಾಗ, ಹೋಟೆಲ್‌ಗಳಲ್ಲಿ ಉಳಿದುಕೊಳ್ಳುವಾಗ ಮತ್ತು ವಿವಿಧ ಭೇಟಿಗಳ ಸಂದರ್ಭದಲ್ಲಿ ತಮ್ಮಿಚ್ಛೆಯಂತೆ ಉಡುಗೆ ಧರಿಸುತ್ತಾರೆ. ಇಂತಹ ಡ್ರೆಸ್ಸಿಂಗ್ ಸೆನ್ಸ್​ ನೋಡುಗರಲ್ಲಿ ಮುಜುಗರ ಉಂಟುಮಾಡುತ್ತದೆ. ಇಷ್ಟೇ ಅಲ್ಲ, ಸಂಸ್ಥೆಯ ಬಗ್ಗೆ ಪ್ರಯಾಣಿಕರಲ್ಲಿ ತಪ್ಪು ಗ್ರಹಿಕೆಗೆ ಈಡುಮಾಡುತ್ತದೆ’  ಎಂದು ಪಿಐಎ ಜನರಲ್ ಮ್ಯಾನೇಜರ್ ಅಮೀರ್ ಬಶೀರ್ ಹೇಳಿದ್ಧಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

‘ಪುರುಷರೇ ಆಗಲಿ ಮಹಿಳೆಯರೇ ಆಗಲಿ ಸೂಕ್ತ ಒಳಉಡುಪು ಮತ್ತು ಸರಳವಾದ ಉಡುಪುಗಳನ್ನು ಧರಿಸಬೇಕು. ಈ ಧರಿಸುವಿಕೆ ನಮ್ಮ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ನೈತಿಕತೆಗೆ ಅನುಗುಣವಾಗಿರಬೇಕು. ಈ ಕುರಿತು ಅಧಿಕಾರಿಗಳು ಗಮನಿಸಬೇಕು’ ಎಂದು ಬಶೀರ್​ ತಿಳಿಸಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:04 am, Fri, 30 September 22

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ