Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳರನ್ನು ಹಿಡಿಯುವ ಪೊಲೀಸರೇ ಕಳ್ಳತನ ಮಾಡಿದ್ರೆ ಹೇಗೆ? ಬಲ್ಬ್ ಕದ್ದ ಕಾನ್‌ಸ್ಟೆಬಲ್

ನಮ್ಮನ್ನು ರಕ್ಷಣೆ ಮಾಡುವ, ಕಳ್ಳತನ ನಡೆದಾಗ ತಕ್ಷಣ ಸ್ಥಳಕ್ಕೆ ಬಂದು, ಕಳ್ಳನನ್ನು ಹಿಡಿಯುವ ಪೊಲೀರಸರೇ ಕಳ್ಳತನ ಮಾಡಿದ್ರೆ ಹೇಗೆ. ಇಂತಹದೇ ಒಂದು ನಾಚಿಕೆಗೇಡಿನ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಸಿಕಂದರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾನ್‌ಸ್ಟೆಬಲ್ ಒಬ್ಬರು ಲೈಟ್ ಬಲ್ಬ್ ಕದಿಯುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಳ್ಳರನ್ನು ಹಿಡಿಯುವ ಪೊಲೀಸರೇ ಕಳ್ಳತನ ಮಾಡಿದ್ರೆ ಹೇಗೆ? ಬಲ್ಬ್ ಕದ್ದ ಕಾನ್‌ಸ್ಟೆಬಲ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 25, 2024 | 12:51 PM

ಕಳ್ಳರನ್ನು ಹಿಡಿಯುವ ಪೊಲೀಸರೇ ಕಳ್ಳತನ ಮಾಡಿದ್ರೆ ಏನು ಅರ್ಥ, ಇಂತಹದೇ ಒಂದು ನಾಚಿಕೆಗೇಡಿನ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಸಿಕಂದರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾನ್‌ಸ್ಟೆಬಲ್ ಒಬ್ಬರು ಲೈಟ್ ಬಲ್ಬ್ ಕದಿಯುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯ ವಿಡಿಯೋ ಬುಧವಾರ (ಏಪ್ರಿಲ್ 24) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ಈ ಘಟನೆ ಏಪ್ರಿಲ್ 20 ರಂದು ನಡೆದಿದೆ ಎಂದು ಹೇಳಲಾಗಿದೆ. ಈ ಘಟನೆ ಯುಪಿ ಪೊಲೀಸರ ಮುಜುಗರ ಉಂಟು ಮಾಡಿದೆ.

ಈ ವಿಡಿಯೋದಲ್ಲಿ ಕಾನ್‌ಸ್ಟೆಬಲ್ ಕಳ್ಳತನ ಮಾಡಿದ ಪ್ರದೇಶದಲ್ಲಿ ಸ್ವಲ್ಪ ಹೊತ್ತು ಅಲ್ಲೇ ಓಡಾಡುತ್ತಾರೆ. ನಂತರ ಲೈಟ್ ಬಲ್ಬ್ ಕದಿಯಲು ಕುರ್ಚಿಯ ಮೇಲೆ ಹತ್ತಿ ಬಲ್ಬ್ ತೆಗೆಯುತ್ತಾನೆ. ಇದರ ಜತೆಗೆ ಕಾನ್‌ಸ್ಟೆಬಲ್ ಈ ಸಂದರ್ಭದಲ್ಲಿ ಯಾರೊಂದಿಗೋ ಮಾತನಾಡುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು.

ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಹಾಗೂ ಚರ್ಚೆಯು ಆಗುತ್ತಿದೆ. ಬಲ್ಬ್​​​​​ನ್ನು ಕದ್ದು ಅದನ್ನು ನಿಧಾನವಾಗಿ ತನ್ನ ಜೇಬಿನಲ್ಲಿ ಇರಿಸಿಕೊಳ್ಳುತ್ತಾರೆ. ಅವರ ವರ್ತನೆ ಕೂಡ ಆಗಿತ್ತು. , ಇಲ್ಲಿ ಏನು ನಡೆದಿಲ್ಲ. ನನಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಇದ್ದಾರೆ. ಮೊದಲು ಈ ವಿಡಿಯೋ ನೋಡಿದಾಗ, ಬಲ್ಬ್ ಸರಿ ಇಲ್ಲ ಅದನ್ನು ರಿಪೇರಿ ಮಾಡಲು ಬಂದಿದ್ದಾರೆ ಎಂದುಕೊಳ್ಳಬೇಕು. ಈ ವಿಡಿಯೋವನ್ನು ಸರಿಯಾಗಿ ನೋಡಿದ್ರೆ ಕಾನ್‌ಸ್ಟೆಬಲ್ ಬಲ್ಬ್ ಕದಿಯುವುದು ಸ್ವಷ್ಟವಾಗುತ್ತದೆ.

ಇದನ್ನೂ ಓದಿ: ಅಬ್ಬಬ್ಬಾ! ಏನ್ ಎನರ್ಜಿ ಗುರು ಈ ಅಜ್ಜಿಗೆ, ಈ ಇಳಿವಯಸ್ಸಲ್ಲೂ ಭರ್ಜರಿ ಸ್ಟೆಪ್ಸ್‌

ಈ ಇಡಿ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಒಬ್ಬ ಸಾರ್ವಜನಿಕ ಕರ್ತವ್ಯದಲ್ಲಿರುವ ವ್ಯಕ್ತಿ ಬಲ್ಬ್ ಕದಿಯುತ್ತಿದ್ದುದನ್ನು ನೋಡಿದ ಜನರು ಬೆಚ್ಚಿಬಿದ್ದಿದ್ದಾರೆ. ಈ ರೀತಿ ವರ್ತಿಸಲು ಕಾರಣವೇನು ಎಂದು ಅನೇಕರು ಪ್ರಶ್ನಿಸಿದ್ದಾರೆ. ಕಾನ್‌ಸ್ಟೆಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ. ಪೊಲೀಸ್​​​ ಇಲಾಖೆ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡದ್ದು, ಕಾನ್‌ಸ್ಟೆಬಲ್​​ನ್ನು ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:45 pm, Thu, 25 April 24

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ