Viral: ನನ್ನ ಗರ್ಲ್‌ಫ್ರೆಂಡನ್ನು ಕರ್ಕೊಂಡು ಬರ್ಬೋದಾ? ಅನುಷ್ಕಾ ಬಗ್ಗೆ ಕೊಹ್ಲಿ ಮಾಡಿದ್ದ ಮನವಿ ಹಂಚಿಕೊಂಡ ರವಿಶಾಸ್ತ್ರಿ

ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯುತ್ತಿರುವ ಬಾರ್ಡರ್‌ ಗವಾಸ್ಕರ್‌ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸ್ಫೋಟಕ ಶತಕ ಸಿಡಿಸುವ ಮೂಲಕ ಹಲವು ದಾಖಲೆಗಳನ್ನು ಉಡೀಸ್‌ ಮಾಡಿದ್ದಾರೆ. ಈ ನಡುವೆ ಭಾರತ ಕ್ರಿಕೆಟ್‌ ತಂಡದ ಮಾಜಿ ಕೋಚ್‌ ರವಿ ಶಾಸ್ತ್ರಿ ಅವರು ಅಂದು 2015 ರಲ್ಲಿ ವಿರಾಟ್‌ ಕೊಹ್ಲಿ ಗೆಳತಿ ಅನುಷ್ಕಾ ಶರ್ಮಾ ಸಲುವಾಗಿ ಆಸ್ಟ್ರೇಲಿಯಾ ಪ್ರವಾಸ ಸಂದರ್ಭದಲ್ಲಿ ಮಾಡಿದ್ದಂತಹ ಒಂದು ಮನವಿಯ ಸ್ವಾರಸ್ಯಕರ ಸಂಗತಿಯನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ನನ್ನ ಗರ್ಲ್‌ಫ್ರೆಂಡನ್ನು ಕರ್ಕೊಂಡು ಬರ್ಬೋದಾ? ಅನುಷ್ಕಾ ಬಗ್ಗೆ ಕೊಹ್ಲಿ ಮಾಡಿದ್ದ ಮನವಿ ಹಂಚಿಕೊಂಡ ರವಿಶಾಸ್ತ್ರಿ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಡಾ. ಭಾಸ್ಕರ ಹೆಗಡೆ

Updated on:Nov 25, 2024 | 5:42 PM

ಆಸ್ಟ್ರೇಲಿಯಾದ ವಿರುದ್ಧದ ಬಾರ್ಡರ್ ಗವಾಸ್ಕರ್‌ ಟೆಸ್ಟ್‌ ಸರಣಿಯ ಮೊದಲು ಮ್ಯಾಚ್‌ನಲ್ಲಿ ಭಾರತದ ತಂಡವು ಭರ್ಜರಿ ಗೆಲುವು ಸಾಧಿಸಿದೆ. ಇದಲ್ಲದೆ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ದಿಗ್ಗಜ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ ಆಸ್ಟ್ರೇಲಿಯಾದ ವಿರುದ್ಧ ಶತಕ ಸಿಡಿಸುವ ಮೂಲಕ ನಿನ್ನೆ ಇತಿಹಾಸವನ್ನೇ ಸೃಷ್ಟಿಸಿದ್ದರು. ಈ ವಿಶೇಷ ಸಂದರ್ಭದಲ್ಲಿಯೇ ಭಾರತ ಕ್ರಿಕೆಟ್‌ ತಂಡದ ಮಾಜಿ ಕೋಚ್‌ ರವಿ ಶಾಸ್ತ್ರಿ ಅವರು 2015 ರಲ್ಲಿ ವಿರಾಟ್‌ ಕೊಹ್ಲಿ ಗೆಳತಿ ಅನುಷ್ಕಾ ಶರ್ಮಾ ಸಲುವಾಗಿ ಆಸ್ಟ್ರೇಲಿಯಾ ಪ್ರವಾಸ ಸಂದರ್ಭದಲ್ಲಿ ಮಾಡಿದ್ದಂತಹ ಒಂದು ಮನವಿಯ ಸ್ವಾರಸ್ಯಕರ ಸಂಗತಿಯನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ಕೋಚ್‌ ರವಿಶಾಸ್ತ್ರಿ ಅವರು ಇತ್ತೀಚಿಗೆ ಆಸ್ಟ್ರೇಲಿಯಾದಲ್ಲಿ ಫಾಕ್ಸ್‌ ಕ್ರಿಕೆಟ್‌ ಕುರಿತ ಚರ್ಚೆಯ ಸಂದರ್ಭದಲ್ಲಿ ವಿರಾಟ್‌ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾರಿಗೆ ಸಂಬಂಧಿಸಿದ ಸ್ವಾರಸ್ಯಕರ ಸಂಗತಿಯನ್ನು ಹೇಳಿಕೊಂಡಿದ್ದಾರೆ. ಅಂದು 2015 ರಲ್ಲಿ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಡೇಟಿಂಡ್‌ ಮಾಡುತ್ತಿದ್ದಂತಹ ಸಂದರ್ಭದಲ್ಲಿ ಆಸ್ಟ್ರೇಲಿಯಾ ಪ್ರವಾಸಕ್ಕೆ ನನ್ನ ಗರ್ಲ್‌ಫ್ರೆಂಡನ್ನು ಕೂಡಾ ಕರ್ಕೊಂಡು ಬರ್ಬೋದಾ ಎಂದು ರವಿ ಶಾಸ್ತ್ರಿ ಅವರ ಬಳಿ ಕೊಹ್ಲಿ ಕೇಳಿದ್ದರಂತೆ. ಆ ಸಮಯದಲ್ಲಿ ಬಿಸಿಸಿಐ ವಿದೇಶಿ ಪ್ರವಾಸಗಳಲ್ಲಿ ಕೇವಲ ಆಟಗಾರರ ಪತ್ನಿಯರು ಮಾತ್ರ ಬರಬಹುದು ಎಂಬ ರೂಲ್ಸ್‌ ತಂದಿತ್ತು. ಇದೇ ಕಾರಣಕ್ಕೆ ಕೊಹ್ಲಿ ರವಿಶಾಸ್ತ್ರಿಯವರ ಬಳಿ ಮನವಿ ಮಾಡಿದ್ದರಂತೆ. ನಂತರ ಅವರು ಬಿಸಿಸಿಐಗೆ ಕರೆ ಮಾಡಿ ಅನುಷ್ಕಾ ಶರ್ಮಾ ಕೂಡಾ ಬರುವಂತೆ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದರಂತೆ.

ವೈರಲ್​​ ವಿಡಿಯೋ

Breathekohli ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ 2015 ರಲ್ಲಿ ಕೊಹ್ಲಿ ಮಾಡಿದ್ದಂತಹ ಒಂದು ಮನವಿಯ ಸ್ವಾರಸ್ಯಕರ ಕಥೆಯನ್ನು ರವಿಶಾಸ್ತ್ರಿಯವರು ವಿವರಿಸುತ್ತಿರುವ ದೃಶ್ಯವನ್ನು ಕಾಣಬಹುದು. ಇವರು ಕೋಚ್‌ ಆಗಿದ್ದಂತಹ ಸಂದರ್ಭದಲ್ಲಿ ವಿರಾಟ್‌ ಕೊಹ್ಲಿ ಅವರು ನನ್ನ ಗರ್ಲ್‌ಫ್ರೆಂಡ್‌ ಅನುಷ್ಕಾಳನ್ನು ವಿದೇಶಿ ಪ್ರವಾಸಕ್ಕೆ ಕರೆದುಕೊಂಡು ಬರಲೇ ಎಂದು ಕೇಳಿದ್ದಕ್ಕೆ ಬಿಸಿಸಿಐ ಜೊತೆ ಮಾತನಾಡಿ ಇದಕ್ಕೆ ಅನುಮತಿ ಮಾಡಿಕೊಟ್ಟಿದ್ದೆ. ಇಂದಿಗೂ ಕೊಹ್ಲಿಯ ದೊಡ್ಡ ಸಪೋರ್ಟ್‌ ಎಂದರೇ ಅನುಷ್ಕಾ ಶರ್ಮಾ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹುಲಿ ಘರ್ಜನೆ ಕೇಳಿ ಮರವೇರಿ ಕುಳಿತ ಫಾರೆಸ್ಟ್‌ ಗಾರ್ಡ್; ಮುಂದೇನಾಯ್ತು ನೋಡಿ…

ಇಂದು ಮಧ್ಯಾಹ್ನ ಹಂಚಿಕೊಳ್ಳಲಾದ ಈ ವಿಡಿಯೋ 67 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಸ್ವಾರಸ್ಯಕರ ಕಥೆಯನ್ನು ಕೇಳಿ ವಿರುಷ್ಕಾ ಫ್ಯಾನ್ಸ್‌ ಫುಲ್‌ ಖುಷಿಯಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:21 pm, Mon, 25 November 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ