ಕಾವ್ಯಾತ್ಮಕ ಶೈಲಿಯಲ್ಲಿ ಪ್ರಯಾಣಿಕರನ್ನು ಸ್ವಾಗತಿಸಿದ ಪೈಲಟ್ ವಿಡಿಯೊ ವೈರಲ್

Viral Video of Pilot : ಸೌಂದರ್ಯವೂ ಬುದ್ಧಿಯೂ ಇಲ್ಲಿ ಮೇಳೈಸಿದೆ. ಯಾಕೆ ಬಾಲಿವುಡ್​ಗೆ ಬರಬಾರದು ಎನ್ನುತ್ತಿದ್ದಾರೆ ನೆಟ್ಟಿಗರು. ಈ ವಿಡಿಯೋ ನೋಡಿದ ನೀವೇನಂತೀರಿ?

ಕಾವ್ಯಾತ್ಮಕ ಶೈಲಿಯಲ್ಲಿ ಪ್ರಯಾಣಿಕರನ್ನು ಸ್ವಾಗತಿಸಿದ ಪೈಲಟ್ ವಿಡಿಯೊ ವೈರಲ್
ಸ್ಪೈಸ್​ಜೆಟ್​ ಪೈಲಟ್​ ಕಾವ್ಯಾತ್ಮಕ ಶೈಲಿಯಲ್ಲಿ ಪ್ರಯಾಣಿಕರನ್ನು ಸ್ವಾಗತಿಸುತ್ತಿರುವುದು
Follow us
| Updated By: ಶ್ರೀದೇವಿ ಕಳಸದ

Updated on:Dec 31, 2022 | 11:41 AM

Viral Video : ವಿಮಾನ ಪ್ರಯಾಣಕ್ಕೆ ಸಂಬಂಧಿಸಿದಂತೆ ದಿನಕ್ಕೆ ಒಂದಿಲ್ಲಾ ಒಂದು ವಿಡಿಯೋ ವೈರಲ್ ಆಗುತ್ತಲೇ ಇರುತ್ತವೆ. ಈ ದಿನ ವೈರಲ್ ಆಗುತ್ತಿರುವ ವಿಡಿಯೋ ವಿಭಿನ್ನವಾಗಿದೆ. ವಾರಾಂತ್ಯದ ಜೊತೆಗೆ ವರ್ಷಾಂತ್ಯದ ಮೂಡ್​ನಲ್ಲಿರುವ ನಿಮಗೆ ಈ ವಿಡಿಯೋ ಖಂಡಿತ ಮನಸ್ಸನ್ನು ಉಲ್ಲಸಿತಗೊಳಿಸುತ್ತದೆ. ಪೈಲಟ್​ ತನ್ನ ಪ್ರಯಾಣಿಕರನ್ನು ವಿಮಾನಪ್ರಯಾಣಕ್ಕೆ ಸ್ವಾಗತಿಸುವ ಪರಿಯನ್ನು ಗಮನಿಸಿ. ಕಾವ್ಯಾತ್ಮಕ ಶೈಲಿಯಲ್ಲಿ ಘೋಷಣೆಯನ್ನು ಪ್ರಸ್ತಾಪಿಸುತ್ತಾನೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸ್ಪೈಸ್ ಜೆಟ್ ಪೈಲಟ್ ಮೋಹಿತ್ ಕುಮಾರ್ ತಮ್ಮ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಅವರು ಪ್ರಯಾಣಿಕರನ್ನು ಹಿಂದಿಯಲ್ಲಿ ಕವಿತಾ ಶೈಲಿಯಲ್ಲಿ ಸ್ವಾಗತಿಸಿ ತಮ್ಮ ಸಹ ಪೈಲಟ್ ಮತ್ತು ವಿಮಾನ ಸಿಬ್ಬಂದಿಯ ಬಗ್ಗೆ ತಿಳಿಸುತ್ತಾ ಇವರೆಲ್ಲರು ನಿಮ್ಮ ಸಹಾಯ ಮತ್ತು ಕಾಳಜಿ ತೆಗೆದುಕೊಳ್ಳಲು ಸಿದ್ಧರಾಗಿದ್ದಾರೆ ಎಂದು ಹೇಳುತ್ತಾರೆ.

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ಅನ್ನು ಈತನಕ ಒಂದು ಲಕ್ಷಕಕ್ಕೂ ಹೆಚ್ಚು ಜನರು ನೋಡಿದ್ಧಾರೆ. 10,000ಕ್ಕೂ ಹೆಚ್ಚು ಜನರು ಮೆಚ್ಚಿದ್ದಾರೆ. ನೂರಾರು ಜನರು ಇವರ ಕಾವ್ಯಾತ್ಮಕ ಶೈಲಿಯ ಘೋಷಣೆಯನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ : Viral Video: ಮೊದಲ ಬಾರಿ ಅಮ್ಮನ ಪಕ್ಕ ಕುಳಿತು ವಿಮಾನ ಹಾರಿಸಿದ ಮಗ; ಪೈಲಟ್ ವಿಡಿಯೋ ವೈರಲ್

ನೀವು ಬಾಲಿವುಡ್​ಗೆ ಯಾಕೆ ಸೇರಬಾರದು ನಿಮಗೆ ಕಲೆಯ ಬಗ್ಗೆ ಒಂದು ಅಂದಾಜಿದೆ ನೋಡಲು ಸುಂದರವಾಗಿದ್ದೀರಿ ಎಂದಿದ್ದಾರೆ ಒಬ್ಬರು. ನೀವು ನೋಡಲೂ ಬಹಳ ಮುದ್ಧಾಗಿದ್ದೀರಿ ಹಾಗೆಯೇ ನಿಮ್ಮ ಧ್ವನಿಯೂ ಎಂದಿದ್ದಾರೆ ಮತ್ತೊಬ್ಬರು. ಸೌಂದರ್ಯ ಮತ್ತು ಬುದ್ಧಿವಂತಿಕೆಯ ಸಮಾಗಮ ಎಂದಿದ್ದಾರೆ ಮಗದೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:35 am, Sat, 31 December 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ