AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 12 ಕೋಟಿ ರೂ, ಮನೆ, ಬಿಎಂಡಬ್ಲ್ಯೂ ಕಾರು ಗಂಡನಿಂದ ಜೀವನಾಂಶಕ್ಕಾಗಿ ಬೇಡಿಕೆಯಿಟ್ಟ ಪತ್ನಿ, ನೀವೇ ದುಡಿದು ಸಂಪಾದಿಸಿ ಎಂದ ಸುಪ್ರೀಂ ಕೋರ್ಟ್

ಇತ್ತೀಚೆಗಿನ ದಿನಗಳಲ್ಲಿ ವಿಚ್ಛೇದನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇದೆ. ದಂಪತಿಗಳು ಸಣ್ಣ ಸಣ್ಣ ವಿಷಯಕ್ಕೂ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಮಹಿಳೆಯೊಬ್ಬರು ಜೀವನಾಂಶಕ್ಕಾಗಿ ಕೋಟಿಗಟ್ಟಲೇ ಹಣ , ಮನೆ ಹಾಗೂ ಐಷಾರಾಮಿ ಕಾರು ಹೀಗೆ ಭಾರಿ ಬೇಡಿಕೆ ಇಟ್ಟಿದ್ದಾಳೆ. ಈ ಮಹಿಳೆಯಯ ಬೇಡಿಕೆ ನೋಡಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶಾಕ್ ಆಗಿದ್ದು, ಈ ಮಹಿಳೆಯ ವಿರುದ್ಧ ಚಾಟಿ ಬೀಸಿದ್ದಾರೆ. ಅಷ್ಟಕ್ಕೂ ಈ ಮಹಿಳೆಯ ದುಬಾರಿ ಬೇಡಿಕೆಗೆ ಮುಖ್ಯ ನ್ಯಾಯಮೂರ್ತಿ ಏನು ಹೇಳಿದ್ರು ಗೊತ್ತಾ? ಈ ಕುರಿತಾದ ಮಾಹಿತಿ ಇಲ್ಲಿದೆ.

Viral: 12 ಕೋಟಿ ರೂ, ಮನೆ, ಬಿಎಂಡಬ್ಲ್ಯೂ ಕಾರು ಗಂಡನಿಂದ ಜೀವನಾಂಶಕ್ಕಾಗಿ ಬೇಡಿಕೆಯಿಟ್ಟ ಪತ್ನಿ, ನೀವೇ ದುಡಿದು ಸಂಪಾದಿಸಿ ಎಂದ ಸುಪ್ರೀಂ ಕೋರ್ಟ್
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on:Jul 24, 2025 | 11:22 AM

Share

ಇತ್ತೀಚೆಗಿನ ದಿನಗಳಲ್ಲಿ ದಾಂಪತ್ಯ ಜೀವನದಲ್ಲಿ ಸಣ್ಣ ಸಣ್ಣ ವಿಷಯಕ್ಕೂ ಮನಸ್ತಾಪ, ಜಗಳಗಳು ಡಿವೋರ್ಸ್ (divorce) ಪಡೆಯುವ ಹಂತಕ್ಕೆ ಹೋಗಿ ತಲುಪುತ್ತಿದೆ. ಹೀಗೆ ಪತಿ ಪತ್ನಿಯರ ನಡುವೆ ಡಿವೋರ್ಸ್‌ ಆದ್ರೆ ಪತಿಯಾದವನು ಮಾಜಿ ಪತ್ನಿಗೆ ಇಂತಿಷ್ಟು ಜೀವನಾಂಶ ನೀಡಬೇಕು ಎಂಬುದು ಕಾನೂನು ಇದೆ. ಕೆಲವರು ಇದನ್ನೇ ಬಂಡವಾಳವಾಗಿಟ್ಟುಕೊಂಡು ಜೀವನಾಂಶಕ್ಕೆ ಭಾರಿ ಬೇಡಿಕೆ ಇಟ್ಟಿರುವ ಘಟನೆಗಳು ಈ ಹಿಂದೆ ನಡೆದಿದೆ. ಇದೀಗ ಮಹಿಳೆಯೊಬ್ಬರು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿ ಪತಿಯ ಬಳಿ 12 ಕೋಟಿ ರೂ, ಮುಂಬೈನಲ್ಲಿ ಮನೆ ಹಾಗೂ ಬಿಎಂಡಬ್ಲ್ಯೂ ಕಾರು ಬೇಕೆಂದು ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಾಳೆ. ಈ ಮಹಿಳೆಯ ಬೇಡಿಕೆ ನೋಡಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ (Supreme Court Chief Justice BR Gawai) ಆಕೆಯನ್ನು ತರಾಟೆಗೆ ತೆಗೆದುಕೊಂಡು ನೀವು ಕೆಲಸಕ್ಕೆ ಹೋಗಿ ಸಂಪಾದಿಸಿ ಎಂದು ಖಡಕ್ ಆಗಿ ಹೇಳಿದ್ದಾರೆ.

ಹೌದು, 18 ತಿಂಗಳ ದಾಂಪತ್ಯದ ಬಳಿಕ ವಿಚ್ಛೇದನ ಪಡೆದಿದ್ದ ಮಹಿಳೆಯೊಬ್ಬರು ಪತಿಯಿಂದ ವಿಶೇಷ ಬೇಡಿಕೆಯಿಟ್ಟಿದ್ದು, ಈ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ನೀವು ಐಟಿ ವೃತ್ತಿಪರರು, ಎಂಬಿಎ ಪದವೀಧರಾಗಿದ್ದೀರಿ. ಮದುವೆಗೂ ಮೊದಲು ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೀರಾ. ನಿಮ್ಮ ಸ್ವ ಇಚ್ಛೆಯಿಂದ ಮದುವೆಯ ಬಳಿಕ ಕೆಲಸ ಮಾಡುವುದಿಲ್ಲ ಎನ್ನುವ ನಿರ್ಧಾರ ತೆಗೆದುಕೊಂಡಿದ್ದೀರಿ.

ನಿಮ್ಮಲ್ಲಿರುವ ಕೆಲಸದ ಅನುಭವಕ್ಕೆ ಬೆಂಗಳೂರು, ಹೈದರಾಬಾದ್ ನಲ್ಲಿ ಕೈತುಂಬಾ ಸಂಬಳ ಇರುವ ಕೆಲಸ ಸಿಗುತ್ತದೆ. ಆದರೆ ನೀವು ಜೀವನಾಂಶಕ್ಕೆ ಬೇಡಿಕೆ ಇಡುತ್ತಿದ್ದೀರಾ ಎಂದು ಕೇಳಿದ್ದಾರೆ. ಅಷ್ಟೇ ಅಲ್ಲದೇ ಈಗಾಗಲೇ ನಿಮಗೆ ನೀಡಲು ಒಪ್ಪಿರುವಂತಹ 4 ಕೋಟಿ ರೂ. ಜೀವನಾಂಶ ಹಾಗೂ ಫ್ಲ್ಯಾಟ್‌ ಪಡೆದು ನಿಮ್ಮ ಜೀವನ ನಿರ್ವಹಣೆ ಮಾಡಿಕೊಳ್ಳಬಹುದು. ನೀವು ವಿದ್ಯಾವಂತರಾಗಿದ್ದೀರಿ, ಹೀಗಾಗಿ ನೀವು ನಿಮಗಾಗಿ ಭಿಕ್ಷೆ ಬೇಡಬಾರದು. ನೀವು ನಿಮಗಾಗಿ ಸಂಪಾದಿಸಿ ತಿನ್ನಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
ಶ್ವಾನ ಪ್ರಿಯರೇ ಹುಷಾರ್! ಸಾಕು ನಾಯಿ ನೆಕ್ಕಿದ್ದಕ್ಕೆ ಮಹಿಳೆ ಸಾವು
Image
ಈಕೆ ನನಗೆ ಸಿಕ್ಕ ವರ : ಈ ವೃದ್ಧ ದಂಪತಿಯ ಶುದ್ಧ ಪ್ರೀತಿ ನೋಡಿ
Image
ಹೊಸ ವಾಹನದ ಕೆಳಗೆ ನಿಂಬೆ ಹಣ್ಣು ಇಡೋದು ಯಾಕೆ ಗೊತ್ತಾ? ಇದೆ ನೋಡಿ ಕಾರಣ
Image
ಮೊಬೈಲ್‌ ನೋಡುತ್ತಾ ಕುಳಿತು ಮೈ ಮರೆತ್ರೆ ಏನಾಗುತ್ತೆ ಅನ್ನೋದನ್ನು ನೋಡಿ

ಇದನ್ನೂ ಓದಿ: Video: ವಿಚ್ಛೇದಿತ ಮಹಿಳೆಯರಿಗೆ ರಿಲ್ಯಾಕ್ಸ್ ನೀಡುವ ವಿಶೇಷ ಡಿವೋರ್ಸ್ ಕ್ಯಾಂಪ್

ಮಹಿಳೆಯು ತನ್ನನ್ನು ಸಮರ್ಥಿಸಿಕೊಳ್ಳುವ ಮೂಲಕ ತನ್ನ ಪತಿ ತುಂಬಾ ಶ್ರೀಮಂತ ವ್ಯಕ್ತಿ ಎಂದು ಹೇಳಿದ್ದಾರೆ. ಅದಲ್ಲದೇ, ನಾನು ಸ್ಕಿಜೋಫ್ರೇನಿಯಾದಿಂದ ಬಳಲುತ್ತಿದ್ದೇನೆ ಎಂದು ಆರೋಪಿಸಿ ಮದುವೆಯನ್ನು ರದ್ದುಗೊಳಿಸಲು ಮುಂದಾಗಿದ್ದಾರೆ. ನಾನು ನಿಮಗೆ ಸ್ಕಿಜೋಫ್ರೇನಿಯಾದಂತೆ ಕಾಣುತ್ತೇನೆಯೇ? ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್ ಗವಾಯಿ ಆದರೆ ನೀವು ಗಂಡ ನೀಡುವ ಜೀವನಾಂಶವನ್ನು ಅವಲಂಬಿಸಿರುವುದು ಸರಿಯಲ್ಲ, ನೀವು ಸ್ವಾವಲಂಬಿಯಾಗಿ ಹಾಗೂ ನಿಮ್ಮ ಘನತೆ ಗೌರವವನ್ನು ನೀವೇ ಕಾಪಾಡಿಕೊಳ್ಳಿ ಎಂದು ತಿಳಿಸಿದ್ದಾರೆ. ಇದೀಗ ಈ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:21 am, Thu, 24 July 25

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ