AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೋರ್ಸ್ ಕೇಳಿದ್ದ ಪತ್ನಿ ಮುಂದೆ ಹಾಡು ಹಾಡಿ ಆಕೆಯ ಮನವೊಲಿಸಿದ ಪತಿರಾಯ, ವಿಡಿಯೋ ವೈರಲ್

ಇತ್ತೀಚೆಗಿನ ದಿನಗಳಲ್ಲಿ ಡಿವೋರ್ಸ್ ಪ್ರಕರಣಗಳು ಹೆಚ್ಚುತ್ತಿದೆ. ಹೌದು ಸಣ್ಣ ಪುಟ್ಟ ವಿಷಯಕ್ಕೆ ಗಂಡ ಹೆಂಡಿರ ನಡುವೆ ಶುರುವಾದ ಜಗಳವು ಡಿವೋರ್ಸ್ ಹಂತಕ್ಕೆ ತಲುಪುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಡಿವೋರ್ಸ್ ಕೇಳಿದ್ದ ಪತ್ನಿ ಮುಂದೆ ಹಾಡು ಹೇಳಿ ಆಕೆಯ ಮನವನ್ನು ಪತಿಯು ಒಲಿಸಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಡಿವೋರ್ಸ್ ಕೇಳಿದ್ದ ಪತ್ನಿ ಮುಂದೆ ಹಾಡು ಹಾಡಿ ಆಕೆಯ ಮನವೊಲಿಸಿದ ಪತಿರಾಯ, ವಿಡಿಯೋ ವೈರಲ್
ವೈರಲ್ ವಿಡಿಯೋ Image Credit source: Twitter
ಸಾಯಿನಂದಾ
|

Updated on: May 09, 2025 | 2:39 PM

Share

ಗಂಡ ಹೆಂಡತಿ ಜಗಳ (husband wife fight) ಉಂಡು ಮಲಗುವ ತನಕ ಎನ್ನುವ ಮಾತಿದೆ. ಆದರೆ ಈಗ ಕಾಲ ಬದಲಾಗಿದೆ. ಉಂಡು ಮಲಗಿದ ಮೇಲೆ ಶುರುವಾದ ಜಗಳವು ಡಿವೋರ್ಸ್ (divorce) ಹಂತಕ್ಕೆ ತಲುಪಿದೆ. ಹೀಗಾಗಿ ಸಣ್ಣ ಪುಟ್ಟ ವಿಷಯಕ್ಕೆ ಡಿವೋರ್ಸ್ ತೆಗೆದುಕೊಳ್ಳುವವರ ಸಂಖ್ಯೆಯೂ ಹೆಚ್ಚುತ್ತಿದೆ. ಕೆಲವರು ಕೊನೆಯ ಹಂತದಲ್ಲಿ ತಮ್ಮ ನಿರ್ಧಾರವನ್ನು ಬದಲಾಯಿಸುವ ಮೂಲಕ ಡಿವೋರ್ಸ್ ಯಿಂದ ಹಿಂದೆ ಸರಿಯುವುದನ್ನು ನೋಡಬಹುದು. ಆದರೆ ಇಲ್ಲೊಬ್ಬ ಪತಿರಾಯ ಡಿವೋರ್ಸ್ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ಪತ್ನಿಯನ್ನು ಮನವೊಲಿಸಲು ಒಂದೊಳ್ಳೆ ಪ್ಲ್ಯಾನ್ ಮಾಡಿಕೊಂಡಿದ್ದಾನೆ. ಪತ್ನಿ ಮುಂದೆ ಹಾಡು (song) ಹಾಡಿ ಆಕೆಯ ಮತ್ತೆ ಪ್ರೀತಿಯಲ್ಲಿ ಬೀಳುವಂತೆ ಮಾಡಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

@Vishalmalvi ಹೆಸರಿನ ಖಾತೆ ಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ ದಂಪತಿಗಳಿಬ್ಬರೂ ಡಿವೋರ್ಸ್ ಪಡೆಯಲು ಕೋರ್ಟ್ ಮೆಟ್ಟಿಲೇರಿರುವುದು ನೋಡಬಹುದು. ಈ ವಿಡಿಯೋದಲ್ಲಿ ದಂಪತಿಗಳಿಬ್ಬರೂ ನಿಂತಿರುವುದನ್ನು ಕಾಣಬಹುದು. ಆದರೆ ಪತಿ ಮುಖದಲ್ಲಿ ಬೇಸರವಿದ್ದು , ಈ ವೇಳೆಯಲ್ಲಿ ಪತಿಯೂ ನಾ ಸಿಖಾ ತೇರೆ ಬಿನ್ ಜೀನಾ ಹಿಂದಿ ಹಾಡನ್ನು ಹಾಡುತ್ತಿರುವುದನ್ನು ಕಾಣಬಹುದು. ಹಾಡು ಕೇಳಿ ಪತ್ನಿಯೂ ಭಾವುಕಳಾಗಿದ್ದು, ಪತಿಯನ್ನು ತಬ್ಬಿಕೊಂಡಿರುವುದನ್ನು ಕಾಣಬಹುದು.

ಇದನ್ನೂ ಓದಿ
Image
ನಿದ್ದೆಯಲ್ಲಿದ್ದಾಗಲೇ ಪತ್ನಿ ಮೂಗನ್ನೇ ಕಚ್ಚಿ ತಿಂದ ಪತಿ
Image
ತುಂಬು ಗರ್ಭಿಣಿ ಮಹಿಳೆಯ ಜಬರ್ದಸ್ತ್ ಡಾನ್ಸ್ ನೋಡಿ ಬೆರಗಾದ ನೆಟ್ಟಿಗರು
Image
ಪಾಕ್ ಜನರಿಗೆ ನಕ್ಷತ್ರ ನೋಡಿದ್ರು ಭಾರತ ಕ್ಷಿಪಣಿಯಂತೆ ಕಾಣುತ್ತಿದೆ
Image
ಸುದ್ದಿ ನಿರೂಪಕಿ ಕೇಳಿದ ಪ್ರಶ್ನೆಗೆ ತಬ್ಬಿಬಾದ ಪಾಕ್ ರಕ್ಷಣಾ ಸಚಿವ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ದಂಪತಿಗಳಿಬ್ಬರೂ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದು ವಿಚಾರಣೆಯಲ್ಲಿ ಭಾಗಿಯಾಗಿದ್ದಾರೆ. ಆದರೆ ಈ ವಿಚಾರಣೆಯ ಬಳಿಕ ಪತಿಯ ಹಾಡು ಕೇಳಿ ತನ್ನ ನಿರ್ಧಾರವನ್ನು ಬದಲಾಯಿಸಿದ್ದು, ಜೊತೆಗೆ ಬದುಕಲು ಮುಂದಾಗಿದ್ದಾಳೆ. ಈ ವಿಡಿಯೋವೊಂದು 1.4 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದ್ದು ನೆಟ್ಟಿಗರು ತರಹೇವಾರಿ ಕಾಮೆಂಟ್ ಗಳನ್ನು ಮಾಡಿದ್ದಾರೆ. ಬಳಕೆದಾರರೊಬ್ಬರು, ಈ ರೀತಿ ಹಾಡು ಹಾಡಿ ಹೆಂಡತಿಯ ಮನವೊಲಿಸಬಹುದೆಂದು ಈ ವಿಡಿಯೋ ನೋಡಿದ ಬಳಿಕ ವಷ್ಟೇ ತಿಳಿಯಿತು ಎಂದಿದ್ದಾರೆ.

ಇದನ್ನೂ ಓದಿ : ಊಟಕ್ಕೆ ಇಷ್ಟೊಂದು ದುಬಾರಿಯಾ? ಎಂದು ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ ರೈಲ್ವೆ ನಿರ್ವಹಣಾ ಸಿಬ್ಬಂದಿ

ಇನ್ನೊಬ್ಬರು, ಇದು ಒಳ್ಳೆಯ ಐಡಿಯಾ, ಆದರೆ ನಾನು ಹಾಡಿಗೆ ಹೆಂಡತಿ ಮನವೊಲಿಯುವುದಲ್ಲ, ಕೋಪ ನೆತ್ತಿಗೇರುತ್ತದೆ ಎಂದು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ನೀವು ಹಾಡು ಹಾಡುವುದನ್ನು ಕಲಿತರೆ ಹಣ ಮಾತ್ರವಲ್ಲ, ದಾಂಪತ್ಯ ಕೂಡ ಉಳಿಸಿಕೊಳ್ಳಬಹುದು ಎಂದಿದ್ದಾರೆ. ಕೆಲವರು, ಹೆಂಡತಿ ಮುನಿಸಿಕೊಂಡಾಗಲೇ ಹಾಡು ಹಾಡಿದ್ದರೆ ಕೋರ್ಟ್ ಮೆಟ್ಟಿಲೇರುವ ಪ್ರಸಂಗವೆ ಬರ್ತಾ ಇರ್ಲಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ