Viral Video: ಬೆಂಕಿ ಇಲ್ಲದೆ ನಡು ರಸ್ತೆಯಲ್ಲಿಯೇ ಆಮ್ಲೆಟ್ ಮಾಡಿದ ಮಹಿಳೆ; ವೈರಲ್ ಆಯ್ತು ವಿಡಿಯೋ

ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಹಾಸ್ಯಮಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದೇ ರೀತಿ ಇಲ್ಲೊಂದು ವಿಡಿಯೋ ವೈರಲ್ ಆಗಿದ್ದು, ಮಹಿಳೆಯೊಬ್ಬರು ಗ್ಯಾಸ್ ಏಕೆ ಸುಮ್ನೆ ವೇಸ್ಟ್ ಮಾಡೋದು ಎಂದು ರಣ ಬಿಸಿಲಿಗೆ ನಡು ರಸ್ತೆಯಲ್ಲಿಯೇ ಆಮ್ಲೆಟ್ ಮಾಡಿ ತಿಂದಿದ್ದಾರೆ. 

Viral Video: ಬೆಂಕಿ ಇಲ್ಲದೆ ನಡು ರಸ್ತೆಯಲ್ಲಿಯೇ ಆಮ್ಲೆಟ್ ಮಾಡಿದ ಮಹಿಳೆ; ವೈರಲ್ ಆಯ್ತು ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: May 23, 2024 | 6:30 PM

ಈ ಬಾರಿಯ  ಬಿಸಿಲಿನ ಝಳಕ್ಕೆ ಮನುಷ್ಯರು ಮಾತ್ರವಲ್ಲದೆ ಪ್ರಾಣಿ ಪಕ್ಷಿಗಳೂ ಕೂಡಾ ಬಸವಳಿದೆ. ಹೌದು ಕಳೆದ ವರ್ಷಕ್ಕಿಂತ ಈ ಬಾರಿ ಬಿಸಿಲಿನ ತಾಪ ಏರಿಕೆಯಾಗಿದ್ದು,  ಇಳೆಗೆ ಮಳೆ ಬಿದ್ದರೆ ಸಾಕು ಎಂದು ಜನರು ಕಾಯುತ್ತಿದ್ದಾರೆ. ಈ ನಡುವೆ ಇಲ್ಲೊಬ್ಬರು ಮಹಿಳೆ ಅಲ್ಲಾ ಇಷ್ಟೊಂದು ಬಿಸಿಲಿದೆಯಲ್ವಾ, ಸುಮ್ನೆ ಮನೆಯ ಗ್ಯಾಸ್ ಏನಕ್ಕೆ ವೇಸ್ಟ್ ಮಾಡೋದು ಅಂತ ಹೇಳಿ ರಣ ಬಿಸಿಲಿಗೆ ನಡುರಸ್ತೆಯಲ್ಲಿ ಆಮ್ಲೆಟ್ ಮಾಡಿ ತಿಂದಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಮಹಿಳೆಯ ಅವತಾರವನ್ನು ಕಂಡು ನೆಟ್ಟಿಗರು ದಂಗಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಉರಿ ಬಿಸಿಲಿಗೆ ಗ್ಯಾಸ್ ಇಲ್ಲದೆ ಅಡುಗೆ ಮಾಡಿದ್ರೆ ಹೇಗೆ ಅಂತ ಪ್ಲಾನ್ ಮಾಡಿ ರಸ್ತೆಯ ಬಳಿ ಬಂದು  ರಸ್ತೆಗೆ ಚೆನ್ನಾಗಿ ನೀರು ಹಾಕಿ ಕ್ಲೀನ್ ಮಾಡಿ ಬಳಿಕ ಅದಕ್ಕೆ  ಎಣ್ಣೆ ಸುರಿದು, ಆ ರಸ್ತೆಯಲ್ಲಿಯೇ ಎರಡು ಮೊಟ್ಟೆಗಳ ಆಮ್ಲೆಟ್ ತಯಾರಿಸುತ್ತಿರುವಂತಹ ಹಾಸ್ಯಮಯ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ತಾಳಿ ಕಟ್ಟುವಾಗ ವಧುವಿಗೆ ಮುತ್ತಿಟ್ಟ ವರ; ರಣರಂಗವಾದ ಕಲ್ಯಾಣ ಮಂಟಪ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by modi tejal (@tejalmodi454)

@tajalmodi454 ಎಂಬ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ 10 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು  ಪಡೆದುಕೊಂಡಿದೆ. ಕೆಲವರು ದಯವಿಟ್ಟು ವಿಡಿಯೋ ಮಾಡುವ ಸಲುವಾಗಿ ಫುಡ್ ವೇಸ್ಟ್ ಮಾಡದಿರಿ ಎಂದು ಸಲಹೆ ನೀಡಿದ್ದಾರೆ. ಇನ್ನೂ ಕೆಲವರು ಈ ಕಣ್ಣಲ್ಲಿ ಇನ್ನೂ ಏನೇನೂ ನೋಡೋದಿದೆಯೋ ಎಂದು ಕಾಮೆಂಟ್ಸ್ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ