AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಕ್ಕಾಗಿ ಮಹಿಳೆಯನ್ನು ಅಮಾನುಷವಾಗಿ ನಡುರಸ್ತೆಯಲ್ಲಿ ಥಳಿಸಿದ ಪತಿ ಕುಟುಂಬಸ್ಥರು

ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಕ್ಕಾಗಿ ಮಹಿಳೆಯೊಬ್ಬರಿಗೆ, ಇಬ್ಬರು ಮಹಿಳೆಯರು ಅಮಾನುಶವಾಗಿ ನಡುರಸ್ತೆಯಲ್ಲಿ ಹೊಡೆದು, ಕಾಲಿನಿಂದ ಒದ್ದು ಚಿತ್ರಹಿಂಸೆ ನೀಡಿರುವ ವಿಡಿಯೋ ವೈರಲ್ ಆಗಿದೆ.

Viral Video: ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಕ್ಕಾಗಿ ಮಹಿಳೆಯನ್ನು ಅಮಾನುಷವಾಗಿ ನಡುರಸ್ತೆಯಲ್ಲಿ ಥಳಿಸಿದ ಪತಿ ಕುಟುಂಬಸ್ಥರು
ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕಾ ಮಹಿಳೆ ಮೇಲೆ ಹತ್ಯೆ
TV9 Web
| Edited By: |

Updated on:Jun 04, 2022 | 5:03 PM

Share

ಉತ್ತರ ಪ್ರದೇಶದ (Uttara Pradesh) ಮಹೋಬಾ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಕ್ಕಾಗಿ ಮಹಿಳೆಯೊಬ್ಬರಿಗೆ, ಇಬ್ಬರು ಮಹಿಳೆಯರು ಅಮಾನುಶವಾಗಿ ನಡುರಸ್ತೆಯಲ್ಲಿ ಹೊಡೆದು, ಕಾಲಿನಿಂದ ಒದ್ದು ಚಿತ್ರಹಿಂಸೆ ನೀಡಿರುವ ವಿಡಿಯೋ ವೈರಲ್ ಆಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪ್ರಕರಣ ಸಂಬಂಧ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಮಹಿಳೆ ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಕ್ಕಾಗಿ ಈ ಇಬ್ಬರು ಮಹಿಳೆಯರು ಥಳಿಸಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ತನಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಗಂಡು ಮಗು ಬೇಕೆಂದು ಪತಿ ಮತ್ತು ಅತ್ತೆಯಂದಿರು ಪದೇ ಪದೇ ಕಿರುಕುಳ ಮತ್ತು ಹಲ್ಲೆ ನಡೆಸುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಇದನ್ನು ಓದಿ: ‘ಅಮೃತಧಾರೆ’ಯ ನಂತರ ಎಷ್ಟು ಸಿನೆಮಾ ಹಾಡು ಹಾಡಿದಿರಿ’ ಎಸ್​ಪಿಬಿ ಸುಪ್ರಿಯಾಗೆ ಕೇಳಿದಾಗ

ಗಂಡ ಮತ್ತು ಅತ್ತೆ-ಮಾವಂದಿರು ನನಗೆ ಗಂಡು ಮಗುವಾಗಲಿಲ್ಲ ಎಂದು ಚಿತ್ರಹಿಂಸೆ ನೀಡುತ್ತಿದ್ದರು. ಎರಡನೇ ಮಗಳು ಹುಟ್ಟಿದ ನಂತರ ಕಿರುಕುಳ ಹೆಚ್ಚಾಯಿತು’ ಎಂದು ಮಹಿಳೆ ಹೇಳಿದ್ದಾರೆ. ಘಟನೆಯ ವೀಡಿಯೋ ಇಬ್ಬರು ಮಹಿಳೆಯರು ಆಕೆಯನ್ನು ನಿಂದಿಸುವುದನ್ನು, ಒದೆಯುವುದು ಮತ್ತು ಹೊಡೆಯುವುದನ್ನು ತೋರಿಸುತ್ತದೆ ಮತ್ತು ಅವಳು ಅಳುತ್ತಾಳೆ ಮತ್ತು ನಿಲ್ಲಿಸುವಂತೆ ಬೇಡಿಕೊಂಡಿದ್ದಾಳೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ಕುಸಿದು ಬಿದ್ದ ನಾಯಿಗೆ ಮರುಜೀವ ತುಂಬಿದ ಆಪತ್ಭಾಂದವ, ವಿಡಿಯೋ ನೋಡಿ

ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾವು ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ ಮತ್ತು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಹೋಬಾದ ಪೊಲೀಸ್ ವರಿಷ್ಠಾಧಿಕಾರಿ ಸುಧಾ ಸಿಂಗ್ ಹೇಳಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Sat, 4 June 22

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ