AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಹಿಳೆಯ ಹೊಟ್ಟೆಯಲ್ಲಿ 18 ಮಕ್ಕಳು! ವಿಡಿಯೋ ಕಂಡು ಶಾಕ್​ ಆದ ನೆಟ್ಟಿಗರು

ಮಹಿಳೆಯ ಹೊಟ್ಟೆ ಬಲೂನಿನಂತೆ ಊದಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದು, ವಿಡಿಯೋದಲ್ಲಿ ಪ್ರೆಗ್ನೆನ್ಸಿ ಬಗ್ಗೆ ಹೇಳಿರುವ ಸುದ್ದಿ ಸಂಪೂರ್ಣ ಸುಳ್ಳು. ಆಕೆ ಗರ್ಭಿಣಿಯಲ್ಲ, ಬದಲಾಗಿ ಹೊಟ್ಟೆಯೊಳಗೆ ದೊಡ್ಡ ಗಡ್ಡೆ ಬೆಳೆದಿದೆ ಎಂದು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

Viral Video: ಮಹಿಳೆಯ ಹೊಟ್ಟೆಯಲ್ಲಿ 18 ಮಕ್ಕಳು! ವಿಡಿಯೋ ಕಂಡು ಶಾಕ್​ ಆದ ನೆಟ್ಟಿಗರು
ಅಕ್ಷತಾ ವರ್ಕಾಡಿ
|

Updated on: Sep 20, 2024 | 10:49 AM

Share

ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯ ಹೊಟ್ಟೆ ಬಲೂನಿನಂತೆ ಊದಿಕೊಂಡಿರುವುದನ್ನು ಕಾಣಬಹುದು. ಇದಲ್ಲದೇ ವಿಡಿಯೋದಲ್ಲಿ ಮಹಿಳೆಯ ಏಕಕಾಲದಲ್ಲಿ 18 ಮಕ್ಕಳಿಗೆ ಜನ್ಮ ನೀಡಲಿದ್ದಾಳೆ ಎಂದು ಬರೆಯಲಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

@larus.world ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಸೆಪ್ಟೆಂಬರ್​​​ 4ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 1.5 ಮಿಲಿಯನ್​ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​​​ನಲ್ಲಿ ಬಗೆಬಗೆಯಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ತಡವಾಗಿ ಬಂದಿದ್ದಕ್ಕೆ ಬಾಯಿಗೆ ಬಂದಂತೆ ಬೈದ ಮಹಿಳೆ, ಮನನೊಂದು ಆತ್ಮಹತ್ಯೆಗೆ ಶರಣಾದ ಡೆಲಿವರಿ ಬಾಯ್‌

ಈ ವಿಡಿಯೋ ಪ್ರಕಾರ ಈ ಮಹಿಳೆ ಅಮೆರಿಕದ ಟೆಕ್ಸಾಸ್ ನಿವಾಸಿ ಹಾಗೂ 18 ಮಕ್ಕಳಿಗೆ ಜನ್ಮ ನೀಡಲಿದ್ದಾಳೆ ಎಂದು ಬರೆಯಲಾಗಿದೆ. ಆದರೆ ಈ ವಿಡಿಯೋಗೆ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದು, ವಿಡಿಯೋದಲ್ಲಿ ಪ್ರೆಗ್ನೆನ್ಸಿ ಬಗ್ಗೆ ಬಂದಿರುವ ಸುದ್ದಿ ಸಂಪೂರ್ಣ ಸುಳ್ಳು. ಆಕೆ ಗರ್ಭಿಣಿಯಲ್ಲ, ಬದಲಾಗಿ ಹೊಟ್ಟೆಯೊಳಗೆ ದೊಡ್ಡ ಗಡ್ಡೆ ಹೊಂದಿದ್ದಾಳೆ ಎಂದು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ. ಮತ್ತೊಬ್ಬರು ಪ್ರತಿಕ್ರಿಯಿಸಿದ್ದು, ಈ ವೀಡಿಯೋ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More