Viral Video: ಗಂಡ ಬೈದಿದ್ದಕ್ಕೆ ಮೂರನೇ ಮಹಡಿಯಿಂದ ಜಿಗಿದು ಪತ್ನಿ ಆತ್ಮಹತ್ಯೆ; ವಿಡಿಯೋ ವೈರಲ್
ಗಂಡ ಬೈದಿದ್ದಕ್ಕೆ ಪತ್ನಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಹಿಳೆ ಮೂರನೇ ಮಹಡಿಯಿಂದ ಜಿಗಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇಂದೋರ್: ಗಂಡ- ಹೆಂಡತಿ ನಡುವೆ ಯಾವುದೋ ವಿಚಾರಕ್ಕೆ ಜಗಳ ಪ್ರಾರಂಭವಾಗಿ, ತಾರಕ್ಕಕ್ಕೇರುತ್ತಿದ್ದಂತೆ ಹೆಂಡತಿ ಮೂರನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. 30 ವರ್ಷದ ಮಹಿಳೆಯೊಬ್ಬರು ತನ್ನ ಪತಿಯೊಂದಿಗೆ ಜಗಳವಾಡಿದ ನಂತರ ಮನೆಯ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ಸಂಜೆ ನಡೆದ ಈ ಘಟನೆಯನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ಫೋನ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆ ಮೂರನೇ ಮಹಡಿಯಿಂದ ಜಿಗಿದಿರುವುದು ಸೆರೆಯಾಗಿದೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
#WATCH | Indore: 27-Year-Old Woman Jumps Off Third Floor After Fight With Husband At Singapore Township#MPNews #MadhyaPradesh pic.twitter.com/5nWoUF7WNf
— Free Press Madhya Pradesh (@FreePressMP) August 5, 2024
ಎರಡು ಮಕ್ಕಳ ತಾಯಿಯಾಗಿರುವ ಅಂಗೂರಿ ತನ್ನ ಪತಿ ರಾಹುಲ್ ಜೊತೆ ಜಗಳವಾಡಿದ ನಂತರ ಲಾಸುಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಾಪುರ ಟೌನ್‌ಶಿಪ್‌ನಲ್ಲಿರುವ ಮನೆಯ ಮೂರನೇ ಮಹಡಿಯಲ್ಲಿರುವ ನೀರಿನ ಟ್ಯಾಂಕ್ ಮೇಲೆ ಏರಿದ್ದಾಳೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಅಮರೇಂದ್ರ ಸಿಂಗ್ ತಿಳಿಸಿದ್ದಾರೆ.
ಇದನ್ನೂ ಓದಿ: ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ಪಕ್ಕದ ಮನೆಯ ವೃದ್ದನನ್ನೇ ಕೊಂದ ವ್ಯಕ್ತಿ
“ಅಂಗೂರಿ ಅವರ ಪತಿ ಮತ್ತು ನೆರೆಹೊರೆಯವರು ಕೆಳಗಿಳಿದು ಬರುವಂತೆ ಎಷ್ಟೇ ಮನವೊಲಿಸಲು ಪ್ರಯತ್ನಿಸಿದರೂ ಕೂಡ ಪ್ರಯೋಜನವಾಗಿಲ್ಲ. ಮಹಿಳೆಯ ಪತಿ ಮತ್ತು ನೆರೆಹೊರೆಯವರೊಂದಿಗೆ ವಿಚಾರಣೆ ನಡೆಸಿದ ನಂತರ ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:19 pm, Tue, 6 August 24