ಸ್ಯಾಂಡಲ್ಸ್​ನಲ್ಲಿ ರೂ. 4.9 ಕೋಟಿ ಮೌಲ್ಯದ ಕೊಕೇನ್​ ಬಚ್ಚಿಟ್ಟುಕೊಂಡಿದ್ದ ಮಹಿಳೆ ಬಂಧನ

Cocaine : ತನ್ನ ಸ್ಯಾಂಡಲ್ಸ್​ನೊಳಗೆ 490 ಗ್ರಾಂ ಕೊಕೇನ್​ ಅನ್ನು ಅಡಗಿಸಿಟ್ಟುಕೊಂಡಿದ್ದ ಮಹಿಳೆಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ.

ಸ್ಯಾಂಡಲ್ಸ್​ನಲ್ಲಿ ರೂ. 4.9 ಕೋಟಿ ಮೌಲ್ಯದ ಕೊಕೇನ್​ ಬಚ್ಚಿಟ್ಟುಕೊಂಡಿದ್ದ ಮಹಿಳೆ ಬಂಧನ
ಮಹಿಳೆಯ ಸ್ಯಾಂಡಲ್ಸ್​ ಸೀಳಿ ಕೊಕೇನ್​ ಹೊರತೆಗೆಯುತ್ತಿರುವುದು
Follow us
ಶ್ರೀದೇವಿ ಕಳಸದ
|

Updated on: Oct 01, 2022 | 5:21 PM

Viral : ಮಾದಕ ವಸ್ತುಗಳನ್ನು, ಚಿನ್ನದ ಬಿಸ್ಕತ್ತುಗಳನ್ನು ಬಚ್ಚಿಟ್ಟಿಕೊಂಡು ಪ್ರಯಾಣಿಸುವುದು ಮತ್ತು ಪೊಲೀಸರ ಕೈಗೆ ಸಿಕ್ಕುಹಾಕಿಕೊಳ್ಳುವುದು ಹೊಸ ವಿಷಯವೇನಲ್ಲ. ಮೇಲಿಂದ ಮೇಲೆ ಇಂಥ ಪ್ರಸಂಗಗಳು ನಡೆಯುತ್ತಲೇ ಇರುವುದರಿಂದ ಈ ಕೃತ್ಯಗಳಿಗೆ ಅಂತ್ಯವೇ ಇಲ್ಲವೇ? ಎಂಬ ಬೇಸರ ಮಾತ್ರ ಮುಗಿಯದ್ದು. ಇದೀಗ 4.9 ಕೋಟಿ ಮೌಲ್ಯದ ಕೊಕೇನ್ ಅನ್ನು ತನ್ನ ಸ್ಯಾಂಡಲ್‌ನೊಳಗೆ ಬಚ್ಚಿಟ್ಟುಕೊಂಡಿದ್ದ ಮಹಿಳೆಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಆರೋಪಿಯು ತನ್ನ ಸ್ಯಾಂಡಲ್ಸ್​ನೊಳಗೆ ರೂಪಿಸಾಗಿದ್ದ ರಹಸ್ಯ ಜಾಗದಲ್ಲಿ ಕೊಕೇನ್​ ಅನ್ನು ಬಚ್ಚಿಟ್ಟುಕೊಂಡಿದ್ದಳು. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ. 4.9 ಕೋಟಿ ಮೌಲ್ಯದ 490 ಗ್ರಾಂ ಕೊಕೇನ್ ಅನ್ನು ಮುಂಬೈ ಏರ್‌ಪೋರ್ಟ್ ಕಸ್ಟಮ್ಸ್ ವಶಪಡಿಸಿಕೊಂಡಿದೆ. ಸೆಪ್ಟೆಂಬರ್ 29 ರಂದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ANI ಸುದ್ದಿ ಸಂಸ್ಥೆಯು ಟ್ವೀಟ್ ಮಾಡಿದ ವಿಡಿಯೋದಲ್ಲಿ, ಕಸ್ಟಮ್ಸ್​ ಅಧಿಕಾರಿಗಳು ಚಿರತೆ ಪ್ರಿಂಟ್​ ಇರುವ ಸ್ಯಾಂಡಲ್ಸ್​ಗಳನ್ನು ಕತ್ತರಿಸಿ ಕೊಕೇನ್​ ಅನ್ನು ಹೊರತೆಗೆದಿರುವುದನ್ನು ತೋರಿಸಲಾಗಿದೆ. ಈ ವಿಡಿಯೋ 18,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡು ವೈರಲ್ ಆಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ