AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ ನಿಂತು ಕಚ್ಚಾ ಬಾದಾಮ್​ ಹಾಡಿಗೆ ಡ್ಯಾನ್ಸ್​ ಮಾಡಿದ ಮಹಿಳೆ: 8 ಮಿಲಿಯನ್​​ಗೂ ಅಧಿಕ ವೀಕ್ಷಣೆ ಪಡೆದ ವಿಡಿಯೋ

ಮಹಿಳೆಯೊಬ್ಬರು ರಸ್ತೆ ಬದಿ ನಿಂತು ಕಚ್ಚಾ ಬಾದಾಮ್​ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ್ದಾರೆ. ಸದ್ಯ ಈ ವಿಡಿಯೋ 8 ಮಿಲಿಯನ್​ಗೂ ಅಧಿಕ ವೀಕ್ಷಣೆ ಪಡೆದಿದೆ.

ರಸ್ತೆ ಬದಿ ನಿಂತು ಕಚ್ಚಾ ಬಾದಾಮ್​ ಹಾಡಿಗೆ ಡ್ಯಾನ್ಸ್​ ಮಾಡಿದ ಮಹಿಳೆ: 8 ಮಿಲಿಯನ್​​ಗೂ ಅಧಿಕ ವೀಕ್ಷಣೆ ಪಡೆದ ವಿಡಿಯೋ
ಡ್ಯಾನ್ಸ್​ ಮಾಡಿದ ಮಹಿಳೆ
Follow us
TV9 Web
| Updated By: Pavitra Bhat Jigalemane

Updated on: Mar 16, 2022 | 1:23 PM

ಸಾಮಾಜಿಕ ಜಾಲತಾಣದಲ್ಲಿ ಕಚ್ಚಾ ಬಾದಾಮ್ (Kacha Badam) ​ ಹಾಡಿನ ಕ್ರೇಜ್​ ಮುಂದುವರೆಯುತ್ತಲೇ ಇದೆ.  ಸಾಕಷ್ಟು ಸೆಲೆಬ್ರಿಟಿಗಳು ಹಾಡಿಗೆ ಹೆಜ್ಜೆಹಾಕಿ ಮುಗಿದಿದೆ. ಕಚ್ಚಾ ಬಾದಾಮ್​ ಹಾಡನ್ನು ಹಾಡಿದ ಬುಬನ್​ ಬಡ್ಯಾಕರ್​ ಕೂಡ ಎಲ್ಲರಿಗೂ ಪರಿಚಿತರಾಗಿದ್ದಾರೆ. ಹೀಗಿದ್ದಾಗಲೂ ಕಚ್ಚಾ ಬಾದಾಮ್​ ಹಾಡಿಗೆ ಡ್ಯಾನ್ಸ್​ ಮಾಡುವ ಹುರುಪು ನೆಟ್ಟಿಗರಲ್ಲಿ ಹಾಗೆಯೇ ಉಳಿದಿದೆ. ಇದೀಗ ,ಮಹಿಳೆಯೊಬ್ಬರು ರಸ್ತೆ ಬದಿ ನಿಂತು ಕಚ್ಚಾ ಬಾದಾಮ್​ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ್ದಾರೆ. ಸದ್ಯ ಈ ವಿಡಿಯೋ 8 ಮಿಲಿಯನ್​ಗೂ ಅಧಿಕ ವೀಕ್ಷಣೆ ಪಡೆದಿದೆ.

ವಿಡಿಯೋದಲ್ಲಿರುವ ಮಹಿಳೆಯನ್ನು ಭಾರತಿ ಹೆಗಡೆ ಎಂದು ಗುರುತಿಸಲಾಗಿದೆ. ಯೋಗ ಶಿಕ್ಷಕಿ ಆಗಿರುವ ಇವರು ಕಚ್ಚಾ ಬಾದಾಮ್ ಹಾಡಿಗೆ ಡ್ಯಾನ್ಸ್​ ಮಾಡಿದ್ದಾರೆ.  ವಿಡಿಯೋದಲ್ಲಿ ಕಾರನ್ನು ತಮ್ಮ ಹಿಂದೆ ನಿಲ್ಲಿಸಿ ರಸ್ತೆಯ ಬದಿಯಲ್ಲಿ ನೃತ್ಯ ಮಾಡುವುದನ್ನು ಕಾಣಬಹುದು. ಅವಳು ಸಾಧಕಿಯಂತೆ ಹೆಜ್ಜೆಗಳನ್ನು ಹಾಕುವುದನ್ನು ಕಾಣಬಹುದು. ಅವರು ಜನವರಿಯಲ್ಲಿ ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಈ ವರೆಗೆ ವಿಡಿಯೋ 8.2 ಮಿಲಿಯನ್​ ವೀಕ್ಷಣೆ ಪಡೆದಿದೆ.

ಈ ಹಿಂದೆ ಲೆಕ್ಕವಿರದಷ್ಟು ಇನ್ಸ್ಟಾಗ್ರಾಮ್​ ರೀಲ್ಸ್​ಗಳು ಕಚ್ಚಾ ಬಾದಾಮ್​ ಹಾಡಿನಲ್ಲಿ ಮೂಡಿಬಂದಿವೆ. ಕಚ್ಚಾ ಬಾದಮ್ ಅನ್ನು ಬಂಗಾಳದ ಬಿರ್ಭೂಮ್‌ನ ಕಡಲೆಕಾಯಿ ಮಾರಾಟಗಾರ ಭುವನ್ ಬಡ್ಯಾಕರ್​ ಎನ್ನುವವರು ಹಾಡಿದ್ದಾರೆ. ಹಾಡು ವೈರಲ್ ಆದ ನಂತರ ಅವರು ರಾತ್ರೋರಾತ್ರಿ ಸೆನ್ಸೇಷನ್ ಸೃಷ್ಟಿಸಿದ್ದರು. ಇತ್ತೀಚೆಗೆ ಬುಬನ್​ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಒಂದೆರಡು ದಿನಗಳ ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದ ಮೇಲೆ ಆಕ್ಸಿಡೆಂಟ್​ ಮೇಲೆಯೂ ಹಾಡನ್ನು ತಯಾರಿಸಿ ಸಾಮಾಜಿಕ ಜಾಲಾತಾಣದಲ್ಲಿ ಹರಿಬಿಟ್ಟಿದ್ದರು.

ಇದನ್ನೂ ಓದಿ: 

ಫ್ರೆಂಚ್ ವರ್ಣಚಿತ್ರಗಾರ್ತಿ ರೋಸಾ ಬೊನ್‌ಹೂರ್ 200 ನೇ ಜನ್ಮದಿನ: ವಿಶೇಷ ಡೂಡಲ್​ ರಚಿಸಿದ ಗೂಗಲ್​

ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?