AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಂದರ್ಯ ಹೆಚ್ಚಿಸಲು 6 ಲಕ್ಷ ರೂ. ಖರ್ಚು ಮಾಡಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು

ಮಹಿಳೆ ಬಟ್ ಲಿಫ್ಟ್ ಹಾಗೂ ಸ್ತನದ ಆಕಾರವನ್ನು ಹೆಚ್ಚಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಆರೋಗ್ಯವಾಗಿದ್ದ ಕೇಡೆಲ್ ಏಕಾಏಕಿ ಸಾವನ್ನಪ್ಪಿರುವುದು ವೈದ್ಯರ ನಿರ್ಲಕ್ಷ್ಯದಿಂದಲೇ ಎಂದು ಕುಟುಂಬಸ್ಥರು ಆರೋಪಿಸಿರುವುದಾಗಿ ದಿ ಸ್ಟ್ಯಾಂಡರ್ಡ್ ವರದಿ ಮಾಡಿದೆ.

ಸೌಂದರ್ಯ ಹೆಚ್ಚಿಸಲು 6 ಲಕ್ಷ ರೂ. ಖರ್ಚು ಮಾಡಿ  ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು
ಅಕ್ಷತಾ ವರ್ಕಾಡಿ
|

Updated on: Aug 21, 2024 | 3:30 PM

Share

ಬ್ರಿಟನ್‌ನ ಮಹಿಳೆಯೊಬ್ಬರು ಕಾಸ್ಮೆಟಿಕ್ ಸರ್ಜರಿಯ ವೇಳೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕೇಡೆಲ್ ಬ್ರೌನ್(38) ಮೃತ ಮಹಿಳೆ. ಈಕೆ 5,400 ಪೌಂಡ್‌ ಅಂದರೆ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ಬಟ್ ಲಿಫ್ಟ್, ಹೊಟ್ಟೆ ಹಾಗೂ ಸ್ತನದ ಆಕಾರವನ್ನು ಹೆಚ್ಚಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಇದೀಗಾ ಆರೋಗ್ಯವಾಗಿದ್ದ ಕೇಡೆಲ್ ಏಕಾಏಕಿ ಸಾವನ್ನಪ್ಪಿರುವುದು ವೈದ್ಯರ ನಿರ್ಲಕ್ಷ್ಯದಿಂದಲೇ ಎಂದು ಕುಟುಂಬಸ್ಥರು ಆರೋಪಿಸಿರುವುದಾಗಿ ದಿ ಸ್ಟ್ಯಾಂಡರ್ಡ್ ವರದಿ ಮಾಡಿದೆ.

ಶಸ್ತ್ರಚಿಕಿತ್ಸೆಯಾದ ಕೇವಲ 10 ಗಂಟೆಗಳ ನಂತರ, ಕೇಡೆಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೆಲ ಗಂಟೆಗಳ ಬಳಿಕ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆದರೆ ಮೃತದೇಹವನ್ನು ನೋಡಲು ಅನುಮತಿ ನೀಡಲಿಲ್ಲ ಮತ್ತು ಮರುದಿನ ವಿಮಾನ ನಿಲ್ದಾಣಕ್ಕೆ ಕಳುಹಿಸಲಾಯಿತು ಎಂದು ಕೇಡೆಲ್ ಸಹೋದರಿ ಲೀನ್ನೆ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಪ್ರಯಾಣಿಕರ ಮುಂದೆಯೇ ಮೆಟ್ರೋದಲ್ಲಿ ಕಿಸ್ ಮಾಡ್ಕೊಂಡು ಪ್ರಯಾಣಿಸಿದ ಜೋಡಿ

ಕೇಡೆಲ್ ಅವರ ದೇಹವನ್ನು ಅಂತಿಮವಾಗಿ ಯುಕೆಗೆ ಹಿಂದಿರುಗಿಸಿದಾಗ, ಆಕೆಯ ಮೆದುಳು, ಶ್ವಾಸಕೋಶಗಳು ಮತ್ತು ಹೃದಯ ಮೃತದೇಹದಿಂದ ನಾಪತ್ತೆಯಾಗಿದ್ದವು ಎಂದು ಆಕೆಯ ಸಹೋದರಿ ಆರೋಪಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಸದ್ಯ ತನಿಖೆ ಮುಂದುವರಿದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ