Viral Video: 55ರ ಹರೆಯದಲ್ಲೂ ರಿಕ್ಷಾ ಓಡಿಸಿ ಸ್ವಾವಲಂಬಿ ಜೀವನ ನಡೆಸುತ್ತಿರುವ ಮಹಿಳೆ

55ರ ಹರೆಯದಲ್ಲೂಮಹಿಳೆ ಆಟೋ ಓಡಿಸಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಭಿಕ್ಷೆ ಬೇಡುವುದಕ್ಕಿಂತ ದುಡಿದು ಹಣ ಸಂಪಾದಿಸಿ ಗೌರವಯುತವಾಗಿ ಬದುಕಲು ಪ್ರಯತ್ನಿಸುತ್ತಿರುವೆ ಎಂದು ಮಹಿಳೆ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Viral Video: 55ರ ಹರೆಯದಲ್ಲೂ  ರಿಕ್ಷಾ ಓಡಿಸಿ ಸ್ವಾವಲಂಬಿ ಜೀವನ ನಡೆಸುತ್ತಿರುವ ಮಹಿಳೆ
Follow us
ಅಕ್ಷತಾ ವರ್ಕಾಡಿ
|

Updated on: Jul 07, 2024 | 5:30 PM

55ರ ಹರೆಯದಲ್ಲೂ ರಿಕ್ಷಾ ಓಡಿಸಿ ಸ್ವಾವಲಂಬಿ ಜೀವನ ನಡೆಸುತ್ತಿರುವ ಮಹಿಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸಾಮಾನ್ಯವಾಗಿ ಹಗಲಿನಲ್ಲಿ ಕೆಲವು ಮಹಿಳೆಯರು ಕ್ಯಾಬ್ ಅಥವಾ ಇ-ರಿಕ್ಷಾಗಳನ್ನು ಓಡಿಸುವುದನ್ನು ನೀವು ನೋಡಿರಬಹುದು. ಆದರೆ ಇವರು ರಾತ್ರಿಯಲ್ಲೂ ರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. 55ರ ಹರೆಯದಲ್ಲೂ ಈ ಮಹಿಳೆ ಆಟೋ ಓಡಿಸಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಭಿಕ್ಷೆ ಬೇಡುವುದಕ್ಕಿಂತ ದುಡಿದು ಹಣ ಸಂಪಾದಿಸಿ ಗೌರವಯುತವಾಗಿ ಬದುಕಲು ಪ್ರಯತ್ನಿಸುತ್ತಿರುವೆ ಎಂದು ಮಹಿಳೆ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಹೃದಯಸ್ಪರ್ಶಿ ವೀಡಿಯೊವನ್ನು @Gulzar_sahab ಹೆಸರಿನ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಕೇವಲ 58 ಸೆಕೆಂಡುಗಳ ಈ ವಿಡಿಯೋ ನೆಟ್ಟಿಗರಿಂದ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹಾಡು ಹಗಲೇ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಿತ್ತು ಪರಾರಿಯಾದ ಖದೀಮರು

ಜುಲೈ 05ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ ಎರಡು ದಿನಗಳಲ್ಲಿ 70 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಮೂರು ಸಾವಿರಕ್ಕೂ ಅಧಿಕ ಜನರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 55ರ ಹರೆಯದಲ್ಲೂ ಮಹಿಳೆ ಸ್ವಾವಲಂಬಿ ಜೀವನ ಕಂಡು ಸಾಕಷ್ಟು ಜನರು ಕಾಮೆಂಟ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್