55ರ ಹರೆಯದಲ್ಲೂ ರಿಕ್ಷಾ ಓಡಿಸಿ ಸ್ವಾವಲಂಬಿ ಜೀವನ ನಡೆಸುತ್ತಿರುವ ಮಹಿಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸಾಮಾನ್ಯವಾಗಿ ಹಗಲಿನಲ್ಲಿ ಕೆಲವು ಮಹಿಳೆಯರು ಕ್ಯಾಬ್ ಅಥವಾ ಇ-ರಿಕ್ಷಾಗಳನ್ನು ಓಡಿಸುವುದನ್ನು ನೀವು ನೋಡಿರಬಹುದು. ಆದರೆ ಇವರು ರಾತ್ರಿಯಲ್ಲೂ ರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. 55ರ ಹರೆಯದಲ್ಲೂ ಈ ಮಹಿಳೆ ಆಟೋ ಓಡಿಸಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಭಿಕ್ಷೆ ಬೇಡುವುದಕ್ಕಿಂತ ದುಡಿದು ಹಣ ಸಂಪಾದಿಸಿ ಗೌರವಯುತವಾಗಿ ಬದುಕಲು ಪ್ರಯತ್ನಿಸುತ್ತಿರುವೆ ಎಂದು ಮಹಿಳೆ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಹೃದಯಸ್ಪರ್ಶಿ ವೀಡಿಯೊವನ್ನು @Gulzar_sahab ಹೆಸರಿನ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಕೇವಲ 58 ಸೆಕೆಂಡುಗಳ ಈ ವಿಡಿಯೋ ನೆಟ್ಟಿಗರಿಂದ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
मजबूरी है साहब ❤️🩹😭 pic.twitter.com/DTbh8lSROz
— ज़िन्दगी गुलज़ार है ! (@Gulzar_sahab) July 5, 2024
ಇದನ್ನೂ ಓದಿ: ಹಾಡು ಹಗಲೇ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಿತ್ತು ಪರಾರಿಯಾದ ಖದೀಮರು
ಜುಲೈ 05ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ ಎರಡು ದಿನಗಳಲ್ಲಿ 70 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಮೂರು ಸಾವಿರಕ್ಕೂ ಅಧಿಕ ಜನರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 55ರ ಹರೆಯದಲ್ಲೂ ಮಹಿಳೆ ಸ್ವಾವಲಂಬಿ ಜೀವನ ಕಂಡು ಸಾಕಷ್ಟು ಜನರು ಕಾಮೆಂಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ