Viral: ಲಿಫ್ಟ್‌ನಲ್ಲಿ ಮೈ ಮುಟ್ಟಿ ಕಿರುಕುಳ ಕೊಟ್ಟವನ ಗ್ರಹಚಾರ ಬಿಡಿಸಿದ ಮಹಿಳೆ

ಕೆಲವರು ಬಸ್‌, ಟ್ರೈನ್‌ ಇತ್ಯಾದಿ ಸ್ಥಳಗಳಲ್ಲಿ ಹೆಣ್ಣು ಮಕ್ಕಳ ಮೈ ಮುಟ್ಟಿ ಅಸಭ್ಯ ವರ್ತನೆಯನ್ನು ತೋರುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಲಿಫ್ಟ್‌ನಲ್ಲಿ ಒಂಟಿ ಮಹಿಳೆಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಕೋಪಗೊಂಡ ಆ ಮಹಿಳೆ ಆತನ ಖಾಸಗಿ ಅಂಗಕ್ಕೆ ಒದ್ದು ಸರಿಯಾಗಿ ಬುದ್ಧಿ ಕಲಿಸಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಮಹಿಳೆಯ ಈ ದಿಟ್ಟ ನಡೆಗೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 09, 2024 | 12:34 PM

ಹೆಚ್ಚಾಗಿ ಜನಜಂಗುಳಿ ಸ್ಥಳಗಳಲ್ಲಿ, ಬಸ್‌, ಟ್ರೈನ್‌ಗಳಲ್ಲಿ ಕೆಲ ಕಾಮುಕರು ಬೇಕು ಬೇಕಂತಲೇ ಹೆಣ್ಣು ಮಕ್ಕಳ ಮೈ ಮುಟ್ಟಿ ಅನುಚಿತವಾಗಿ ವರ್ತಿಸುತ್ತಿರುತ್ತಾರೆ. ಪ್ರತಿನಿತ್ಯ ಇಂತಹ ಸಾಕಷ್ಟು ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಲಿಫ್ಟ್‌ನಲ್ಲಿದ್ದ ಒಂಟಿ ಮಹಿಳೆಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಕೋಪಗೊಂಡ ಆ ದಿಟ್ಟ ಹೆಣ್ಣು ಆತನ ಖಾಸಗಿ ಅಂಗಕ್ಕೆ ಜಾಡಿಸಿ ಒದ್ದು ತಕ್ಕ ಶಾಸ್ತಿ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಆ ಮಹಿಳೆಯ ಈ ದಿಟ್ಟ ನಡೆಗೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಈ ಕುರಿತ ವಿಡಿಯೋವನ್ನು TheFigen_ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ತುಂಬಾ ಪರಿಪೂರ್ಣವಾದ ಕಿಕ್‌! ಮಹಿಳೆಯರೆಲ್ಲರೂ ಇದೇ ರೀತಿ ತಮ್ಮ ಸ್ವ-ರಕ್ಷಣೆಯನ್ನು ಮಾಡಿಕೊಳ್ಳಬೇಕು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಲಿಫ್ಟ್‌ ಒಳಗೆ ಪ್ರವೇಶಿಸಿದ ಒಂಟಿ ಮಹಿಳೆಯ ಮೈ ಮುಟ್ಟಿ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸುತ್ತಿರುವ ದೃಶ್ಯವನ್ನು ಕಾಣಬಹುದು. ಈತತನ್ನು ಹೀಗೆ ಬಿಟ್ರೆ ಹೆಣ್ಣು ಮಕ್ಕಳಿಗೆ ರಕ್ಷಣೆ ಇರಲಾರದು ಎನ್ನುತ್ತಾ, ಆ ದಿಟ್ಟ ಮಹಿಳೆ, ಆತ ಇನ್ನೊಂದು ಬಾರಿ ಮೈ ಮುಟ್ಟಲು ಯತ್ನಿಸಿದಾಗ ಆತನ ಕಪಾಳಕ್ಕೆ ಬಾರಿಸಿ, ಖಾಸಗಿ ಅಂಗಕ್ಕೆ ಸರಿಯಾಗಿ ಒದ್ದು ಬುದ್ಧಿ ಕಲಿಸಿದ್ದಾಳೆ.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ನ್ಯೂಯಾರ್ಕ್‌ ಟೈಮ್‌ ಸ್ಕ್ವೇರ್‌ ಬಳಿ ಅದ್ಧೂರಿ ದುರ್ಗಾ ಪೂಜೆ ಆಚರಿಸಿದ ಭಾರತೀಯರು

ಅಕ್ಟೋಬರ್‌ 07 ರಂದು ಹಂಚಿಕೊಳ್ಳಲಾದ ಈ ವಿಡಿಯೋ 26.2 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಪ್ರತಿಯೊಬ್ಬ ಮಹಿಳೆಯೂ ಇದೇ ರೀತಿ ಸ್ವ-ರಕ್ಷಣೆಯನ್ನು ಮಾಡಿಕೊಳ್ಳುವುದನ್ನು ಕಲಿಯಬೇಕುʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಸ್ವ-ರಕ್ಷಣೆಯ ಕಲಿಕೆ ವಿಶೇಷವಾಗಿ ಇಂತಹ ಸಂದರ್ಭದಲ್ಲಿ ತುಂಬಾನೇ ಉಪಯೋಗಕ್ಕೆ ಬರುತ್ತದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಆ ಮಹಿಳೆ ಸರಿಯಾಗಿ ಮಾಡಿದ್ದಾಳೆʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ
Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ
Daily horoscope: ವೃಷಭ ರಾಶಿಯವರಿಗೆ ಇಂದು ಧನಯೋಗ
Daily horoscope: ವೃಷಭ ರಾಶಿಯವರಿಗೆ ಇಂದು ಧನಯೋಗ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್