Viral: ತನ್ನ ಸೋದರಸಂಬಂಧಿಯನ್ನೇ ಪ್ರೀತಿಸಿ ಮದುವೆಯಾದ ಯುವತಿ

ಆರು ತಿಂಗಳ ಡೇಟಿಂಗ್ ನಂತರ ಡಿಎನ್‌ಎ ಪರೀಕ್ಷೆಯ ಮೂಲಕ ಇಬ್ಬರೂ ಸೋದರಸಂಬಂಧಿಗಳು ಎಂದು ತಿಳಿಯಿತು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾಳೆ. ಜೊತೆಗೆ ಆತನನ್ನು ತಬ್ಬಿಕೊಂಡು ಚುಂಬಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ನೆಟ್ಟಿಗರನ್ನು ದಿಗ್ಭ್ರಮೆಗೊಳಿಸಿದೆ.

Viral: ತನ್ನ ಸೋದರಸಂಬಂಧಿಯನ್ನೇ ಪ್ರೀತಿಸಿ ಮದುವೆಯಾದ ಯುವತಿ
ಸಾಂದರ್ಭಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
| Updated By: Ganapathi Sharma

Updated on:Nov 25, 2023 | 7:02 PM

ಮದುವೆಗೆ ಸಂಬಂಧಿಸಿದಂತೆ ಪ್ರಪಂಚದಾದ್ಯಂತ ವಿಭಿನ್ನ ಸಂಪ್ರದಾಯಗಳು ಇವೆ. ಅವುಗಳಲ್ಲಿ ಸಾಮಾನ್ಯವಾದ ಒಂದು ವಿಷಯವೆಂದರೆ ಬಾಳಸಂಗಾತಿಯನ್ನು ಆಯ್ಕೆ ಮಾಡುವಂತಹ ಸಂದರ್ಭದಲ್ಲಿ ಅವರಿಬ್ಬರ ನಡುವೆ ಯಾವುದೇ ರಕ್ತ ಸಂಬಂಧ ಇರಬಾರದು. ಆದರೆ ಅಮೇರಿಕದ ಯುವತಿಯೊಬ್ಬಳಿಗೆ 6 ತಿಂಗಳ ಡೇಟಿಂಗ್​​ ನಂತರ ತನ್ನ ಪ್ರಿಯಕರ ಸೋದರಸಂಬಂಧಿ ಎಂದು ತಿಳಿದುಬಂದಿದೆ. ಅದರೂ ಕೂಡ ಸಂಬಂಧದಿಂದ ಹೊರಬರದೇ ಮದುವೆಯಾಗಲು ನಿರ್ಧರಿಸಿದ್ದಾರೆ. ಸ್ವತಃ ಈ ವಿಷಯವನ್ನು ಮಹಿಳೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋ ಇದೀಗಾ ಭಾರೀ ಟೀಕೆಗೆ ಕಾರಣವಾಗಿದೆ.

ಈ ವಿಚಿತ್ರ ಪ್ರಕರಣ ಅಮೆರಿಕದ ಉತಾಹ್‌ನಲ್ಲಿ ನಡೆದಿದ್ದು, ಕೆನಾ(20) ಎಂಬ ಯುವತಿ ವೀಡಿಯೊವನ್ನು ಹಂಚಿಕೊಂಡಿದ್ದು, ತನ್ನ ಸಂಗಾತಿಯಾಗಿ ತಾನು ಆಯ್ಕೆ ಮಾಡಿರುವ ವ್ಯಕ್ತಿ ಬೇರೆ ಯಾರೂ ಅಲ್ಲ ತನ್ನ ಸೋದರಸಂಬಂಧಿ ಎಂದು ಬಹಿರಂಗಪಡಿಸಿದ್ದಾಳೆ. ಆರು ತಿಂಗಳ ಡೇಟಿಂಗ್ ನಂತರ ಡಿಎನ್‌ಎ ಪರೀಕ್ಷೆಯ ಮೂಲಕ ಇಬ್ಬರೂ ಸೋದರಸಂಬಂಧಿಗಳು ಎಂದು ತಿಳಿಯಿತು ಎಂದು ಹೇಳಿಕೊಂಡಿದ್ದಾಳೆ. ಜೊತೆಗೆ ಆತನನ್ನು ತಬ್ಬಿಕೊಂಡು ಚುಂಬಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ನೆಟ್ಟಿಗರನ್ನು ದಿಗ್ಭ್ರಮೆಗೊಳಿಸಿದೆ.‘

ಇದನ್ನೂ ಓದಿ: ಪುಟ್ಟ ಬಾಲಕಿಯರಿಬ್ಬರ ಪ್ರಾಣ ತೆಗೆದ ಕಣ್ಣಾಮುಚ್ಚಾಲೆ ಆಟ ; ಏನಿದು ಘಟನೆ?

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಸಾಕಷ್ಟು ಟೀಕೆಗೆ ಕಾರಣವಾಗಿದೆ. ಈ ಸಂಬಂಧ ಕಾನೂನುಬಾಹಿರ ಮಾತ್ರವಲ್ಲ, ಅಂತಹ ಸಂಬಂಧದಿಂದ ಹುಟ್ಟುವ ಮಗುವಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ನೆಟ್ಟಿಗರು ಬರೆದುಕೊಂಡಿದ್ದಾರೆ. ಸೋದರಸಂಬಂಧಿಗಳ ನಡುವಿನ ವಿವಾಹಗಳನ್ನು ನಿಷೇಧಿಸಲಾಗಿರುವ ಅಮೆರಿಕದ 24 ರಾಜ್ಯಗಳಲ್ಲಿ ಉತಾಹ್ ಕೂಡ ಒಂದಾಗಿದೆ . ಆದರೆ ನ್ಯೂಯಾರ್ಕ್ ಮತ್ತು ಫ್ಲೋರಿಡಾ ಸೇರಿದಂತೆ 19 ಇತರ ಸ್ಥಳಗಳಲ್ಲಿ ಇಂತಹ ಮದುವೆಗಳನ್ನು ಅನುಮತಿಸಲಾಗಿದೆ. ಅದಕ್ಕಾಗಿಯೇ ಮೂಲತಃ ಉತಾಹ್ ಮೂಲದವರಾಗಿದ್ದರೂ, ಕೆನ್ನಾ ಮತ್ತು ಆಕೆಯ ಪತಿ ಈಗ ಸನ್ಶೈನ್ ರಾಜ್ಯದಲ್ಲಿ ವಾಸಿಸುತ್ತಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:53 pm, Sat, 25 November 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ