AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಡ್ರೈವರ್ ಸೀಟ್​ ಬಿಟ್ಟು ಕೊಡಲು ಒಪ್ಪದ ಮಹಿಳೆ, ಬೇರೆ ಸೀಟ್​ನಲ್ಲಿ ಕೂತು ಬಸ್​ ಓಡಿಸುವಂತೆ ಚಾಲಕನಿಗೆ ಸೂಚನೆ

ಡ್ರೈವರ್ ಸೀಟ್​ ಬಿಟ್ಟು ಕೊಡದೇ ಬೇರೆ ಸೀಟಿನಲ್ಲಿ ಕುಳಿತುಕೊಂಡು ಬಸ್​ ಓಡಿಸುವಂತೆ ಚಾಲಕನಿಗೆ ಓರ್ವ ಮಹಿಳೆ ಎಚ್ಚರಿಕೆ ನೀಡಿರುವಂತಹ ತಮಾಷೆಯ ಘಟನೆ ಉತ್ತರ ಭಾರತದಲ್ಲಿ ನಡೆದಿದೆ.

Viral Video: ಡ್ರೈವರ್ ಸೀಟ್​ ಬಿಟ್ಟು ಕೊಡಲು ಒಪ್ಪದ ಮಹಿಳೆ, ಬೇರೆ ಸೀಟ್​ನಲ್ಲಿ ಕೂತು ಬಸ್​ ಓಡಿಸುವಂತೆ ಚಾಲಕನಿಗೆ ಸೂಚನೆ
ಸೀಟ್​ ಬಿಡಿದ ಮಹಿಳೆ Image Credit source: cartoq.com
ಗಂಗಾಧರ​ ಬ. ಸಾಬೋಜಿ
|

Updated on:Mar 15, 2023 | 11:20 PM

Share

ಡ್ರೈವರ್ ಸೀಟ್​ ಬಿಟ್ಟು ಕೊಡದೇ ಬೇರೆ ಸೀಟಿನಲ್ಲಿ (drivers seat) ಕುಳಿತುಕೊಂಡು ಬಸ್​ ಓಡಿಸುವಂತೆ ಚಾಲಕನಿಗೆ ಓರ್ವ ಮಹಿಳೆ ಎಚ್ಚರಿಕೆ ನೀಡಿರುವಂತಹ ತಮಾಷೆಯ ಘಟನೆ ಉತ್ತರ ಭಾರತದಲ್ಲಿ ನಡೆದಿದೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಶಿರೀಶ್ ಥೋರತ್ ಎನ್ನುವವರು ಅಪ್ಲೋಡ್ ಮಾಡಿದ್ದಾರೆ. ಆಸನದ ವಿಚಾರವಾಗಿ ಮಹಿಳೆ ಮತ್ತು ಬಸ್​ ಚಾಲಕನ ಮಧ್ಯೆ ವಾಗ್ವಾದ ಉಂಟಾಗಿದೆ. ಈ ವೇಳೆ ಅಲ್ಲೇ ಇದ್ದ ಇತರೆ ಪ್ರಯಾಣಿಕರು ವಿಡಿಯೋ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ ಬಸ್ಸಿನ ಚಾಲಕ ಸೀಟಿನಲ್ಲಿ ಮಹಿಳೆ ಕುಳಿತುಕೊಂಡಿರುವುದನ್ನು ನಾವು ನೋಡಬಹುದು. ಬಸ್​ನ್ನು ಟರ್ಮಿನಲ್​ ಬಳಿ ಚಾಲಕ ನಿಲ್ಲಿಸಿ ಹೋಗಿದ್ದಾನೆ. ಚಾಲಕ ಹಿಂತಿರುಗಿ ಬರುವುದರೊಳಗೆ ಮಹಿಳೆ ತನ್ನ ಸೀಟಿನಲ್ಲಿ ಕುಳಿತಿರುವುದನ್ನು ನೋಡಿ ಸೀಟ್​​ ಬಿಡುವಂತೆ ಹೇಳಿದ್ದಾನೆ. ಇದಕ್ಕೆ ಒಪ್ಪದ ಮಹಿಳೆ ಚಾಲಕನೊಂದಿಗೆ ವಾದಿಸಲು ಆರಂಭಿಸುತ್ತಾಳೆ.

ಇನ್ನು ಬಸ್​ನಲ್ಲಿ ಮಹಿಳೆಯೊಂದಿಗೆ ಅತ್ತೆ ಕೂಡ ಪ್ರಯಾಣಿಸುತ್ತಿದ್ದಾರೆ. ಅತ್ತೆಗೆ ಹಿಂದಿನ ಬದಿಯಲ್ಲಿ ಸೀಟ್ ಸಿಕ್ಕಿದ್ದು, ಮಹಿಳೆ ಡ್ರೈವರ್ ಸೀಟಿನಲ್ಲಿ ಕುಳಿತುಕೊಂಡಿದ್ದಾಳೆ. ಬಸ್​ ಚಾಲಕ ಮಹಿಳೆಗೆ ಸೀಟ್​ ಬಿಟ್ಟುಕೊಡುವಂತೆ ಎಷ್ಟೇ ಹೇಳಿದರು ಕೇಳುವುದಿಲ್ಲ. ಬದಲಿಗೆ ಯಾಕೆ ಈ ಸೀಟ್​ನಲ್ಲಿ ಕುಳಿತುಕೊಳ್ಳಬಾರದು ಎಂದು ವಾದಿಸಿದ್ದಾಳೆ. ಸ್ವಲ್ಪ ಸಮಯದ ನಂತರ ಅತ್ತೆ ಕೂಡ ವಾಗ್ವಾದಕ್ಕೆ ಇಳಿಯುತ್ತಾಳೆ. ಎರಡನೇ ಸೀಟಿನಲ್ಲಿ ಕುಳಿತಿರುವ ಅತ್ತೆ ಮತ್ತೊಂದು ಸೀಟಿನಿಂದ ಬಸ್ ಓಡಿಸುವಂತೆ ಚಾಲಕನಿಗೆ ಹೇಳುವುದನ್ನು ಕೇಳಬಹುದಾಗಿದೆ.

ಇದನ್ನೂ ಓದಿ: ಟಿಕೆಟ್ ​​ಕೊಡುವಂತೆ ಕಿರುಕುಳ ನೀಡಿದ ಆರೋಪದಡಿ ಟಿಟಿಇ ಅಮಾನತು

ಇದನ್ನೂ ಓದಿ: Viral News: ಜೈಲಿನಲ್ಲಿ ಮೂರು ಹೊತ್ತು ಊಟ ಸಿಗುತ್ತೇ ಎಂದು ಈತ ಮಾಡಿದ ಕೆಲಸ ಏನು ಗೊತ್ತಾ?

ಇಡೀ ಬಸ್ ಖಾಲಿ ಇದೆ. ಆದರೆ ಮಹಿಳೆ ಮಾತ್ರ ಚಾಕನ ಸೀಟ್​ನಲ್ಲಿ ಕುಳಿತುಕೊಳ್ಳಲು ಬಯಸುತ್ತಿರುವುದು ಯಾಕೆ ಎಂದು ತಿಳಿಯುತ್ತಿಲ್ಲ ಎಂದು ಕಾಮೆಂಟ್​ ಮಾಡಿದ್ದಾರೆ. ಇಲ್ಲಿ ನಿಜವಾಗಿಯೂ ಏನು ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿಲ್ಲ. ಇದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿ ಪಡೆಯಲು ಹೀಗೆ ಮಾಡಲಾಗುತ್ತಿದೆ ಎಂದು ಕೆಲವರು ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇಂತಹ ವಿಡಿಯೋ ವೈರಲ್​ ಆಗಿರುವುದು ಬಹುಶಃ ಇದೇ ಮೊದಲಿರಬೇಕು ಎಂದು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:19 pm, Wed, 15 March 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್