Viral News: ಮನೆಯ ಹಿಂಭಾಗದಲ್ಲಿ 90ಕ್ಕೂ ಹೆಚ್ಚು ಹಾವಿನ ಮರಿಗಳನ್ನು ಕಂಡು ಬೆಚ್ಚಿಬಿದ್ದ ಮಹಿಳೆ!

ಮನೆಯ ಹಿಂಭಾಗದಲ್ಲಿ ಸುಮಾರು 90 ಕ್ಕೂ ಹೆಚ್ಚಿನ ಹಾವಿನ ಮರಿಗಳು ರಾಶಿ ಬಿದ್ದಿರುವುದನ್ನು ಕಂಡು ಮಹಿಳೆ ಬೆಚ್ಚಿಬಿದ್ದಿದ್ದಾರೆ. ಈ ಕುರಿತಂತೆ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

Viral News: ಮನೆಯ ಹಿಂಭಾಗದಲ್ಲಿ 90ಕ್ಕೂ ಹೆಚ್ಚು ಹಾವಿನ ಮರಿಗಳನ್ನು ಕಂಡು ಬೆಚ್ಚಿಬಿದ್ದ ಮಹಿಳೆ!
ಮನೆಯ ಹಿಂಭಾಗದಲ್ಲಿ 90ಕ್ಕೂ ಹೆಚ್ಚು ಹಾವಿನ ಮರಿಗಳನ್ನು ಕಂಡು ಬೆಚ್ಚಿಬಿದ್ದ ಮಹಿಳೆ!
Follow us
TV9 Web
| Updated By: shruti hegde

Updated on: Oct 18, 2021 | 11:35 AM

ಉತ್ತರ ಕ್ಯಾಲಿಫೋರ್ನಿಯಾದ ಮಹಿಳೆಯೊಬ್ಬಳು ತನ್ನ ಮನೆಯ ಹಿಂಭಾಗದಲ್ಲಿ ರಾಶಿ ಬಿದ್ದ ಹಾವಿನ ಮರಿಗಳನ್ನು ಕಂಡು ಬೆಚ್ಚಿಬಿದ್ದಿದ್ದಾಳೆ. ವರದಿಗಳ ಪ್ರಕಾರ, ಆಕೆಯ ನಿವಾಸದ ಹಿಂಭಾಗದಲ್ಲಿ ಸುಮಾರು 92 ಹಾವಿನ ಮರಿಗಳು ಪತ್ತೆಯಾಗಿವೆ. ತಕ್ಷಣವೇ ಹಾವು ರಕ್ಷಣಾ ಕೇಂದ್ರಕ್ಕೆ ಕರೆ ಮಾಡಿ ರಕ್ಷಾಣ ಸಿಬ್ಬಂದಿಯಿಂದ ಹಾವುಗಳನ್ನು ರಕ್ಷಿಸಲಾಗಿದೆ.

ಈ ಕುರಿತಾಗಿ ಫೇಸ್ಬುಕ್​ನಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಜತೆಗೆ ಕೆಲವು ಚಿತ್ರಗಳನ್ನು ಪೋಸ್ಟ್ ಮಾಡಲಾಗಿದೆ. ರಕ್ಷಣಾ ಸಿಬ್ಬಂದಿ ಹೇಳಿರುವ ಪ್ರಕಾರ, ಮನೆಯ ಹಿಂಭಾಗದಲ್ಲಿ ಹಾವುಗಳು ಪತ್ತೆಯಾಗಿವೆ ಎಂಬುದಾಗಿ ನಮಗೆ ಕರೆ ಬಂತು. ತಕ್ಷಣವೇ ಅವರು ಹೇಳಿರುವ ವಿಳಾಸಕ್ಕೆ ಹೋದೆವು, ಅಲ್ಲಿ 59 ಚಿಕ್ಕ ಹಾವಿನ ಮರಿಗಳು ಮತ್ತು 22 ಹಾವುಗಳು ಪತ್ತೆಯಾಗಿವೆ ಎಂದು ಹೇಳಿದ್ದಾರೆ.

ರಕ್ಷಣಾ ಕೇಂದ್ರದ ನಿರ್ದೇಶಕರಾದ ವುಲ್ಫ್ ಮಾತನಾಡಿ, ಮನೆಯ ಕೆಳಗೆ ಹೋಗುತ್ತಿದ್ದಂತೆಯೇ ಹಾವು ಕಂಡಿದೆ. ಸುರಕ್ಷತಾ ಕೈಗವಸು ಮತ್ತು ಬೇಕಾದ ಸಲಕರಣೆಗಳನ್ನು ಹಿಡಿದು ಮನೆಯ ಕೆಳಕ್ಕೆ ಹೋದೆ, ಸುಮಾರು 4 ಗಂಟೆಗಳ ಕಾಲ ಹಾವುಗಳನ್ನು ಹುಡುಕುತ್ತಲೇ ಇದ್ದೆ. ಅಲ್ಲಿ ಜೇಡರ ಬಲೆಗಳು, ಕೊಳಕು ಜಾಗವಿದೆ. ಜಾಗ ಗಬ್ಬು ನಾರುತ್ತಿದೆ ಹಾಗಾಗಿ ಹಾವುಗಳ ರಾಶಿ ವಾಸಿಸುತ್ತಿವೆ ಎಂದ ಮಾಹಿತಿ ತಿಳಿಸಿದ್ದಾರೆ.

ಕ್ಯಾಲಿಫೋರ್ನಿಯಾದ ಅತ್ಯಂತ ಮಾರಕ ಹಾವುಗಳಿವು. ಇವು ಬೆಚ್ಚಗಿನ ಸ್ಥಳಗಳನ್ನು ಹುಡುಕುತ್ತವೆ. ಅವುಗಳು ವಾಸಿಸಲು ಈ ಜಾಗ ಹೇಳಿಮಾಡಿಸಿದಂತಿತ್ತು. ಹಾಗಾಗಿ ಹಾವು ಇಲ್ಲಿ ವಾಸಿಸುತ್ತಿವೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತಾಗಿ ವರದಿಗಳಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

Viral Video: ಮಿಸ್ಟರ್ ಬೀನ್ ಥರಾನೇ ಕಾಣ್ತಾರೆ; ನಟನೆ ಕೂಡ ಸೂಪರ್! ವಿಡಿಯೋ ನೋಡಿ

Viral Video: ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ವ್ಯಕ್ತಿ! ನೆಟ್ಟಿಗರ ಮನಗೆದ್ದ ವಿಡಿಯೋ ನೋಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ