Viral Video: ಬಾಲ್ಯದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಡ್ರೈವರ್​​ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಯುವತಿ

ಕೆಲವೊಮ್ಮೆ ನಾವು ಮಾಡುವಂತಹ ಸಣ್ಣ ಸಹಾಯ ಅಥವಾ ಕೆಲಸವು ಇನ್ನೊಬ್ಬರ ಮುಖದಲ್ಲಿ ಸಂತೋಷವನ್ನು ಮೂಡಿಸುತ್ತದೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವತಿಯೊಬ್ಬಳು ಆಟೋ ಚಾಲಕರೊಬ್ಬರಿಗೆ ನೀರಿನ ಬಾಟಲಿಯನ್ನು ಉಡುಗೊರೆ ರೂಪದಲ್ಲಿ ನೀಡಿದ್ದಾಳೆ. ಈ ಸರ್ಪ್ರೈಸ್ ಗಿಫ್ಟ್ ಕಂಡು ಆ ವ್ಯಕ್ತಿ ಭಾವುಕರಾಗಿದ್ದಾರೆ.

Viral Video: ಬಾಲ್ಯದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಡ್ರೈವರ್​​ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಯುವತಿ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: May 08, 2024 | 12:40 PM

ನಮ್ಮ ಜಗತ್ತು ಎಷ್ಟೇ ಮುಂದುವರೆದಿದ್ದರೂ ಮನುಷ್ಯರಲ್ಲಿ ದಯಾ ಮನೋಭಾವವೊಂದು ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ಈ ದಯಾಗುಣ ಹಾಗೂ ಮಾನವೀಯತೆಯೇ ಮನುಷ್ಯ ಸಂಬಂಧಗಳನ್ನು ಪರಸ್ಪರ ಬೆಸೆಯುತ್ತದೆ. ಹೀಗೆ ತಮ್ಮ ಕೈಲಾದಷ್ಟು ಸಹಾಯ ಮಾಡಿ ಮನುಕುಲಕ್ಕೆ ಒಳಿತು ಮಾಡಬೇಕೆಂದು ಬಯಸುವ ಹಲವು ಜನರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಅದೇ ರೀತಿ ಇಲ್ಲೊಬ್ಬ ಯುವತಿ ದಿನವಿಡೀ ಕಷ್ಟ ಪಟ್ಟು ಆಟೋ ಓಡಿಸಿ ಜೀವನ ಸಾಗಿಸುವ ಆಟೋ ಚಾಲಕರೊಬ್ಬರಿಗೆ ನೀರಿನ ಬಾಟಲಿಯೊಂದನ್ನು ಉಡುಗೊರೆ ನೀಡಿದ್ದಾಳೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಈ ವಿಡಿಯೋವನ್ನು @cheerfullbong ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದೆ.

View this post on Instagram

A post shared by JOY + EE (@cheerfulbong)

ವೈರಲ್ ವಿಡಿಯೋದಲ್ಲಿ ಯುವತಿಯೊಬ್ಬಳು ತನ್ನನ್ನು ಸಣ್ಣ ವಯಸ್ಸಿನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಡ್ರೈವರ್ ಒಬ್ಬರಿಗೆ ನೀರಿನ ಬಾಟಲಿಯನ್ನು ಉಡುಗೊರೆಯಾಗಿ ನೀಡಿರುವ ದೃಶ್ಯವನ್ನು ಕಾಣಬಹುದು. ದಿನವಿಡೀ ಕಷ್ಟಪಟ್ಟು ಕೆಲಸ ಮಾಡುವ ಆಟೋ ಡ್ರೈವರ್ ಕುಡಿಯುವ ನೀರಿಗೆ ಅಷ್ಟೇನೂ ಸ್ವಚ್ಛವಾಗಿರದ ಪ್ಲಾಸ್ಟಿಕ್ ಬಾಟಲಿಯನ್ನು ಬಳಸುತ್ತಿರುವುದನ್ನು ಗಮನಿಸಿದ ಆ ಯುವತಿ, ಇವರಿಗೆ ಒಂದೊಳ್ಳೆ ಗುಣಮಟ್ಟದ ನೀರಿನ ಬಾಟಲಿಯನ್ನು ಕೊಡಬೇಕು ಎಂದು ಯೋಜಿಸಿ, ಕಾರ್ಮಿಕರ ದಿನದಂದು ಬಾಟಲಿಯನ್ನು ಉಡುಗೊರೆಯಾಗಿ ನೀಡುತ್ತಾಳೆ. ಈ ಸರ್ಪ್ರೈಸ್ ಉಡುಗೊರೆಯನ್ನು ಕಂಡು ಆಟೋಚಾಲಕ ಭಾವುಕರಾಗಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗೆ ಪರೀಕ್ಷೆಯಲ್ಲಿ 200ಕ್ಕೆ 212 ಅಂಕ, ಇದು ಹೇಗೆ ಸಾಧ್ಯ?

ಒಂದು ವಾರದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.1 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆಟೋ ಚಾಲಕನ ಮುಖದಲ್ಲಿ ನಗು ತರಿಸಿದ್ದಕ್ಕಾಗಿ ನಿಮಗೆ ಧನ್ಯವಾದಗಳು ಎಂದು ನೆಟ್ಟಿಗರು ಯುವತಿಯ ಸತ್ಕಾರ್ಯವನ್ನು ಶ್ಲಾಘಿಸಿದ್ದಾರೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ