ಮಹಾಕುಂಭ ಮೇಳದಲ್ಲಿ ಮಹಿಳಾ ಭಕ್ತರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಿಸಿದ ಮಹಿಳೆ, ವಿಡಿಯೋ ವೈರಲ್
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳವು ನಾನಾ ವಿಚಾರಗಳಿಂದ ಸುದ್ದಿಯಾಗುತ್ತಿದೆ. ಇದೀಗ ಇಲ್ಲಿ ಮಹಿಳೆಯೊಬ್ಬರು ಉಚಿತವಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ಹಂಚುತ್ತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಅವರ ಈ ಕೆಲಸಕ್ಕೆ ಎಲ್ಲರಿಂದ ಪ್ರಶಂಸೆ ವ್ಯಕ್ತವಾಗಿದೆ. ಈ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜಗತ್ತಿನ ಅತೀ ದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾಕುಂಭ ಮೇಳ ನಡೆಯುತ್ತಿದೆ. ಸದ್ಯಕ್ಕಂತೂ ಕುಂಭ ಮೇಳಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಲೇ ಇದೆ. ಇದೀಗ ಈ ಬಾರಿಯ ಕುಂಭಮೇಳದಲ್ಲಿ ಮಹಿಳಾ ಭಕ್ತರಿಗೆರಿಗೆ ಮಹಿಳೆಯೊಬ್ಬರು ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸುತ್ತಿದ್ದು, ಈ ವಿಡಿಯೋವೊಂದು ವೈರಲ್ ಆಗುತ್ತಿದ್ದು, ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ.
Shethepeopletv ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಕುಂಭ ಮೇಳದಲ್ಲಿ ಮಹಿಳೆಯೊಬ್ಬರು ಸ್ಯಾನಿಟರಿ ಪ್ಯಾಡ್ ಗಳನ್ನು ಹಂಚಿದರು ಎಂದು ಶೀರ್ಷಿಕೆಯನ್ನು ಬರೆಯಲಾಗಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಸ್ಯಾನಿಟರಿ ಪ್ಯಾಡ್ ಗಳನ್ನು ಹಂಚುವುದನ್ನು ನೋಡಬಹುದು. ಕಿತ್ತಳೆ ಬಣ್ಣದ ಪ್ಯಾಕ್ ನಲ್ಲಿ ಪ್ಯಾಡ್ ಗಳಿದ್ದು ಕೆಲವರು ಹೆಚ್ಚುವರಿ ಪ್ಯಾಡ್ ಗಳನ್ನು ಪಡೆಯುತ್ತಿರುವುದನ್ನು ಕಾಣಬಹುದು.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
View this post on Instagram
ಈ ವಿಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಕಾಮೆಂಟ್ ಗಳ ಸುರಿಮಳೆ ಗೈದಿದ್ದಾರೆ. ಬಳಕೆದಾರರೊಬ್ಬರು, ಇದೊಂದು ಉತ್ತಮವಾದ ಕೆಲಸ ಎಂದಿದ್ದಾರೆ. ಮತ್ತೊಬ್ಬರು, ‘ಮಹಾಕುಂಭಮೇಳಕ್ಕೆ ಗ್ರಾಮೀಣ ಭಾಗದಿಂದಲೂ ಸಾಕಷ್ಟು ಮಹಿಳೆಯರು ಬರುತ್ತಿದ್ದಾರೆ. ಈ ರೀತಿಯ ಕೆಲಸವು ನಿಜಕ್ಕೂ ಮೆಚ್ಚುಗೆಗೆ ಪಾತ್ರವಾಗಿದೆ’ ಎಂದು ಕಾಮೆಂಟ್ ಮಾಡಿದ್ದಾರೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:17 am, Mon, 3 February 25