AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ! ಅದ್ಭುತ ಪ್ರತಿಭೆಗೆ ಪ್ರಶಂಸೆ

ಅದ್ಭುತ ಪ್ರತಿಭೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. 41 ಸೆಕೆಂಡುಗಳ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ 8 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ.

Viral video: ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ! ಅದ್ಭುತ ಪ್ರತಿಭೆಗೆ ಪ್ರಶಂಸೆ
ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ!
TV9 Web
| Edited By: |

Updated on: Jun 17, 2021 | 3:19 PM

Share

ಎಂಥಹುದೇ ಕಠಿಣ ಗುರಿಯಾಗಿರಲಿ ಸತತ ಪ್ರಯತ್ನ ಮತ್ತು ಅಭ್ಯಾಸ ಹೊಂದಿದ್ದಾಗ ಸಾಧನೆಯ ಮೆಟ್ಟಿಲೇರಬಹುದು. ಅಂತಹುದೇ ಓರ್ವ ಮಹಿಳೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ಮಹಿಳೆಯೋರ್ವಳು ನೀರಿನ ಮೇಲೆ ಬೈಕ್​ ಓಡಿಸುವ ದೃಶ್ಯ ಜನರನ್ನು ದಿಗ್ಭ್ರಮೆಗೊಳಿಸುವಂತೆ ಮಾಡಿದೆ. ಮಹಿಳೆಯ ಪರಿಶ್ರಮಕ್ಕೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಡಾಕ್ಟರ್​ ಅಜಯಿತಾ ಎಂಬ ಟ್ವಿಟರ್​ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಮಹಿಳೆಯ ಅದ್ಭುತ ಪ್ರತಿಭೆಯನ್ನು ಶ್ಲಾಘಿಸಿದ್ದಾರೆ. ಮಹಿಳೆಯೋರ್ವಳು ನೀರಿನ ಮೇಲೆ ಬೈಕ್​ ಸವಾರಿ ಮಾಡುತ್ತಿರುವುದು ಕಂಡು ಬರುತ್ತದೆ. ಕೇವಲ ಬೈಕ್​ ಓಡಿಸುವುದೊಂದೇ ಅಲ್ಲ! ಪಾತ್ರೆ ತುಂಬಿದ ಬುಟ್ಟಿಯನ್ನು ತಲೆಯ ಮೇಲೆ ಇಟ್ಟುಕೊಂಡು ತನ್ನ ಎರಡೂ ಕೈಗಳಲ್ಲಿ ಬಕೆಟ್​ ಸಿಕ್ಕಿಸಿಕೊಂಡು ಬೈಕ್​ ಹ್ಯಾಂಡಲ್​ ಹಿಡಿದು ನೀರಿನ ಮೇಲೆ ಬೈಕ್​ ಓಡಿಸಿದ್ದಾಳೆ.

ಅದ್ಭುತ ಪ್ರತಿಭೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. 41 ಸೆಕೆಂಡುಗಳ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ 8 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಮಹಿಳೆ ಮನಸ್ಸು ಮಾಡಿದರೆ ಏನನ್ನೂ ಬೇಕಾದರೂ ಸಾಧಿಸುತ್ತಾಳೆ ಎಂಬುದಕ್ಕೆ ಇದೊಂದು ಉದಾಹರಣೆ ಎಂದು ಇನ್ನೋರ್ವರು ಪ್ರತಿಕ್ರಿಯೆ ನೀಡಿದ್ದಾರೆ. ಅವಳು ‘ವಂಡರ್​ ವುಮೆನ್​’ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Video: ಭರ್ಜರಿ ಭೋಜನ ಸವಿಯುತ್ತಿರುವ ಯುವತಿ! ಕ್ಯಾಮರಾ ಬಂದ ತಕ್ಷಣ ರಿಯಾಕ್ಷನ್ ಹೇಗಿದೆ ನೋಡಿ

Viral Video : ಅಜ್ಜಿ ಡ್ಯಾನ್ಸ್ ನೋಡಿ ಎಲ್ಲರೂ ಫಿದಾ ಆದ್ರು, ಮೊಮ್ಮಕ್ಕಳು ಹೆಜ್ಜೆ ಹಾಕಿದ್ರು

Follow Us
TV9 Web
TV9 Web

TV9 Kannada

Read More
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ