Shocking News: ಅತ್ಯಾಚಾರವೆಸಗಲು ಬಂದ ಮಾಲೀಕನ ಮರ್ಮಾಂಗವನ್ನು ಕತ್ತರಿಸಿದ ಮಹಿಳೆ; ಮರುಜೋಡಣೆಗಾಗಿ ಆಸ್ಪತ್ರೆಗೆ ಓಡಿದ ಮಾಲೀಕ

ಘಟನೆಯ ನಂತರ ಹಲ್ಲೆಗೊಳಗಾದ ಬಾರ್​ ಮಾಲೀಕ ತುಂಡರಿಸಲ್ಪಟ್ಟ ಮರ್ಮಾಂಗದೊಂದಿಗೆ ಆಸ್ಪತ್ರೆಗೆ ಧಾವಿಸಿದ್ದು, ಅದನ್ನು ಮರುಜೋಡಿಸಲು ವೈದ್ಯರು ಪ್ರಯತ್ನಿಸಿದ್ದಾರೆ. ಆದರೆ, ಶಸ್ತ್ರಚಿಕಿತ್ಸೆಯ ಫಲಿತಾಂಶದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Shocking News: ಅತ್ಯಾಚಾರವೆಸಗಲು ಬಂದ ಮಾಲೀಕನ ಮರ್ಮಾಂಗವನ್ನು ಕತ್ತರಿಸಿದ ಮಹಿಳೆ; ಮರುಜೋಡಣೆಗಾಗಿ ಆಸ್ಪತ್ರೆಗೆ ಓಡಿದ ಮಾಲೀಕ
ಸಾಂಕೇತಿಕ ಚಿತ್ರ
Follow us
TV9 Web
| Updated By: Digi Tech Desk

Updated on:Jun 07, 2021 | 4:44 PM

ಕೆಲವೊಂದು ಬಾರಿ ಉದ್ದೇಶಪೂರ್ವಕವಾಗಿ ತಪ್ಪು ಮಾಡಲು ಹೋದವರು ಅದನ್ನು ಕಾರ್ಯಗತಗೊಳಿಸುವ ಮೊದಲೇ ಶಿಕ್ಷೆ ಅನುಭವಿಸಿ ಪರಿಸ್ಥಿತಿಯೇ ಅದಲುಬದಲಾಗಿ ಬಿಡುತ್ತದೆ. ಅಲ್ಲಿ ಸಂತ್ರಸ್ತರಾಗಬೇಕಾಗಿದ್ದವರು ತಪ್ಪಿತಸ್ಥರೂ, ತಪ್ಪಿತಸ್ಥರಾಗಬೇಕಾಗಿದ್ದವರು ಸಂತ್ರಸ್ಥರೂ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿ ಬಿಡುತ್ತದೆ. ಸ್ಪೇನ್​ನಲ್ಲಿ ಇಂಥದ್ದೇ ಒಂದು ಘಟನೆ ನಡೆದಿದ್ದು ವ್ಯಕ್ತಿಯ ಮರ್ಮಾಂಗವನ್ನು ಕತ್ತರಿಸಿದ್ದಕ್ಕಾಗಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಮಹಿಳೆ ಹೇಳುವ ಪ್ರಕಾರ ಆ ವ್ಯಕ್ತಿ ಅತ್ಯಾಚಾರಕ್ಕಾಗಿ ಪ್ರಯತ್ನಿಸಿದ ಸಂದರ್ಭದಲ್ಲಿ ಅನಿವಾರ್ಯವಾಗಿ ಈಕೆ ಚಾಕುವಿನಿಂದ ದಾಳಿ ಮಾಡಿದ್ದು, ಅದು ಆತ್ಮ ರಕ್ಷಣೆಯ ಪ್ರಯತ್ನ ಎನ್ನಲಾಗಿದೆ.

ಅಲ್ಲಿನ ಮಾಧ್ಯಮಗಳ ವರದಿ ಪ್ರಕಾರ ಬಾರ್​ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆ 30 ವರ್ಷದ ಆಸುಪಾಸಿನವರಾಗಿದ್ದು, ಬಾಂಗ್ಲಾದೇಶದ ಮೂಲದವರು ಎಂದು ತಿಳಿದುಬಂದಿದೆ. ಬಾರ್​ ಮಾಲೀಕ ಬಹಳ ಸಮಯದಿಂದ ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ದೈಹಿಕ ಸಂಪರ್ಕಕ್ಕಾಗಿ ಒತ್ತಾಯಿಸುತ್ತಿದ್ದ ಎಂದು ಹೇಳಲಾಗಿದೆ. ಅಲ್ಲದೇ ಆಕೆ ಸ್ಪಷ್ಟವಾಗಿ ನಿರಾಕರಿಸಿದ ನಂತರವೂ ಪದೇ ಪದೇ ದೌರ್ಜನ್ಯ ನಡೆಸುತ್ತಿದ್ದರಿಂದ ಅನಿವಾರ್ಯವಾಗಿ ಮಹಿಳೆ ಹಲ್ಲೆ ನಡೆಸುವಂತಾಗಿದೆ. ಒಂದು ವಾರದ ಕೆಳಗೆ ನಡೆದ ಈ ಘಟನೆಯಲ್ಲಿ ಬಾರ್​ ಮಾಲೀಕ ಅತ್ಯಾಚಾರ ಯತ್ನ ನಡೆಸಿದಾಗ ಆಕೆ ಚಾಕುವಿನಿಂದ ಮರ್ಮಾಂಗವನ್ನು ಕತ್ತರಿಸಿರುವುದಾಗಿ ತಿಳಿಸಲಾಗಿದೆ.

ಘಟನೆಯ ನಂತರ ಹಲ್ಲೆಗೊಳಗಾದ ಬಾರ್​ ಮಾಲೀಕ ತುಂಡರಿಸಲ್ಪಟ್ಟ ಮರ್ಮಾಂಗದೊಂದಿಗೆ ಆಸ್ಪತ್ರೆಗೆ ಧಾವಿಸಿದ್ದು, ಅದನ್ನು ಮರುಜೋಡಿಸಲು ವೈದ್ಯರು ಪ್ರಯತ್ನಿಸಿದ್ದಾರೆ. ಆದರೆ, ಶಸ್ತ್ರಚಿಕಿತ್ಸೆಯ ಫಲಿತಾಂಶದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ ಆ ವ್ಯಕ್ತಿಯನ್ನೂ ಬಾಂಗ್ಲಾದೇಶ ಅಥವಾ ಪಾಕಿಸ್ತಾನ ಮೂಲದವನೆಂದು ಹೇಳಲಾಗುತ್ತಿದ್ದು, ಆಸ್ಪತ್ರೆಯಿಂದ ಸಂಪೂರ್ಣ ಚೇತರಿಸಿಕೊಂಡು ಹೊರಬಂದ ನಂತರ ತನಿಖೆಗೆ ಒಳಪಡಿಸುವ ಸಾಧ್ಯತೆ ಇದೆ.

ಘಟನೆಯ ಬಗ್ಗೆ ಮಹಿಳೆ ತಾನಾಗಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಮಾಲೀಕ ಅನೇಕ ದಿನಗಳಿಂದ ದೈಹಿಕ ಸಂಪರ್ಕಕ್ಕಾಗಿ ಪೀಡಿಸುತ್ತಿದ್ದ. ಜತೆಗೆ, ದೌರ್ಜನ್ಯವನ್ನೂ ಎಸಗಿದ್ದಾನೆ. ಹೀಗಾಗಿ ಎಲ್ಲಾ ರೀತಿಯಿಂದ ತಪ್ಪಿಸಿಕೊಳ್ಳಲೆತ್ನಿಸಿದ ಮೇಲೂ ಆತ ಅತ್ಯಾಚಾರಕ್ಕೆ ಪ್ರಯತ್ನಿಸಿದಾಗ ಚಾಕುವಿನಿಂದ ಇರಿಯುವ ನಿರ್ಧಾರ ತೆಗೆದುಕೊಳ್ಳಬೇಕಾಯಿತು. ಇದು ನನ್ನ ಆತ್ಮ ರಕ್ಷಣೆಗೆ ಅನಿವಾರ್ಯವಾಗಿತ್ತು ಎಂದು ತಿಳಿಸಿದ್ದಾರೆ. ಸದ್ಯ ಪೊಲೀಸರು ಮಹಿಳೆಯ ಮೇಲೆ ನಿಗಾ ವಹಿಸಿದ್ದು, ವ್ಯಕ್ತಿ ಚೇತರಿಸಿಕೊಂಡ ನಂತರ ತನಿಖೆಯನ್ನು ತೀವ್ರಗೊಳಿಸಲು ಕಾಯುತ್ತಿದ್ದಾರೆ.

ಇದನ್ನೂ ಓದಿ: ಅತ್ಯಾಚಾರಕ್ಕೆ ಯತ್ನಿಸಿದವನೊಂದಿಗೆ 20 ನಿಮಿಷ ಕಾದಾಡಿ, ನಂತರ ಆತನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ 

ಬಾಲಕನ ಮರ್ಮಾಂಗ ಕತ್ತರಿಸಿ, ಚಿತ್ರಹಿಂಸೆ ನೀಡಿ ಕೊಲೆ: ಭೀಮಾ ನದಿಯ ದಡದಲ್ಲಿ ವಿದ್ಯಾರ್ಥಿ ಶವ ಪತ್ತೆ

Published On - 2:36 pm, Mon, 7 June 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ