Sign In

By signing in or creating an account, you agree with Associated Broadcasting Company's Terms & Conditions and Privacy Policy.

World Water Day 2025: ವಿಶ್ವ ಜಲ ದಿನವನ್ನು ಯಾಕೆ ಆಚರಿಸಲಾಗುತ್ತದೆ ಎಂಬುದು ತಿಳಿದಿದೆಯೇ?

ವರ್ಷದಿಂದ ವರ್ಷಕ್ಕೆ ಶುದ್ಧ ಕುಡಿಯುವ ನೀರಿಗಾಗಿ ಜನ ಪರಿತಪಿಸುವಂತಾಗಿರುವುದು ಸುಳ್ಳಲ್ಲ. ಬೆಳೆಯುತ್ತಿರುವ ಜನಸಂಖ್ಯೆ, ಜಾಗತಿಕ ತಾಪಮಾನ, ಪರಿಸರ ಮಾಲಿನ್ಯ, ಕೈಗಾರಿಕರಣ, ಅರಣ್ಯನಾಶ ಇನ್ನಿತರ ಕಾರಣಗಳಿಂದ ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಇದರಿಂದ ಕೆಲವು ಭಾಗಗಳಲ್ಲಿ ನೀರಿನ ಕೊರತೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ನೀರಿನ ಮಹತ್ವ ಹಾಗೂ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಸಂಸ್ಥೆ ಶ್ರಮಿಸುತ್ತಿದ್ದು ಪ್ರತಿ ವರ್ಷ ಮಾರ್ಚ್‌ 22ರಂದು ವಿಶ್ವ ಜಲ ದಿನವನ್ನು ಭಾರತ ಸೇರಿದಂತೆ ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಹಾಗಾದರೆ ಈ ದಿನದ ಇತಿಹಾಸವೇನು? ಮಹತ್ವದ ಬಗ್ಗೆ ತಿಳಿದುಕೊಳ್ಳಿ.

World Water Day 2025: ವಿಶ್ವ ಜಲ ದಿನವನ್ನು ಯಾಕೆ ಆಚರಿಸಲಾಗುತ್ತದೆ ಎಂಬುದು ತಿಳಿದಿದೆಯೇ?
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 22, 2025 | 4:08 PM

ವಿಶ್ವದ ಸಕಲ ಜೀವರಾಶಿಗಳಿಗೆ ನೀರು ಜೀವನಾಧಾರ. ಜಲವೇ ಸಂಜೀವಿನಿ. ನಮ್ಮ ಭಾರತದಲ್ಲಿ ನೀರಿಗೆ ದೈವೀ ಸ್ಥಾನವನ್ನು ನೀಡಲಾಗಿದೆ. ಆದರೆ ವರ್ಷದಿಂದ ವರ್ಷಕ್ಕೆ ಶುದ್ಧ ಕುಡಿಯುವ ನೀರಿಗಾಗಿ ಜನ ಪರಿತಪಿಸುವಂತಾಗಿರುವುದು ಸುಳ್ಳಲ್ಲ. ಬೆಳೆಯುತ್ತಿರುವ ಜನಸಂಖ್ಯೆ, ಜಾಗತಿಕ ತಾಪಮಾನ, ಪರಿಸರ ಮಾಲಿನ್ಯ, ಕೈಗಾರಿಕರಣ, ಅರಣ್ಯನಾಶ ಇನ್ನಿತರ ಕಾರಣಗಳಿಂದ ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಇದರಿಂದ ಕೆಲವು ಭಾಗಗಳಲ್ಲಿ ನೀರಿನ ಕೊರತೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ನೀರಿನ ಮಹತ್ವ ಹಾಗೂ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಸಂಸ್ಥೆ ಶ್ರಮಿಸುತ್ತಿದ್ದು ಪ್ರತಿ ವರ್ಷ ಮಾರ್ಚ್‌ 22ರಂದು ವಿಶ್ವ ಜಲ ದಿನವನ್ನು (World Water Day ) ಭಾರತ ಸೇರಿದಂತೆ ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಹಾಗಾದರೆ ಈ ದಿನದ ಇತಿಹಾಸವೇನು? ಮಹತ್ವದ ಬಗ್ಗೆ ತಿಳಿದುಕೊಳ್ಳಿ.

ವಿಶ್ವ ಜಲ ದಿನದ ಇತಿಹಾಸವೇನು?

1993ರಲ್ಲಿ ಬ್ರೆಜಿಲ್‌ನ ರಿಯೋದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿ ಸಮಾವೇಶದಲ್ಲಿ ಜಲ ಸಂರಕ್ಷಣೆಯ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಯಿತು ಹಾಗೂ ಪ್ರತಿ ವರ್ಷ ಮಾರ್ಚ್‌ 22 ರಂದು ವಿಶ್ವ ಜಲ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಯಿತು. ಅಂದಿನಿಂದ ಪ್ರತಿವರ್ಷ ವಿಶ್ವ ಜಲ ದಿನವನ್ನು ಭಾರತ ಸೇರಿದಂತೆ ವಿಶ್ವದಾದ್ಯಂತ ಆಚರಿಸಲಾಗುತ್ತದೆ.

ಈ ದಿನದ ಮಹತ್ವವೇನು?

ಜಗತ್ತಿನಲ್ಲಿ ಅಂತರ್ಜಲದ ಸಂರಕ್ಷಣೆ, ಸುಸ್ಥಿರ ಬಳಕೆ ಹಾಗೂ ಅಂತರ್ಜಲ ಪ್ರಮಾಣ ಹೆಚ್ಚಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಜಾಗೃತಿ ಮೂಡಿಸುವುದು ಅತ್ಯಗತ್ಯ. ಹಾಗಾಗಿ ನೀರಿನ ಅಭಾವ, ಕಲುಷಿತಗೊಳಿಸುವಿಕೆ, ಹವಾಮಾನದ ಮೇಲಿನ ಪರಿಣಾಮ ಹೀಗೆ ಒಟ್ಟಾರೆಯಾಗಿ ನೀರಿನ ಕುರಿತು ಜನರಲ್ಲಿ ತಿಳಿವಳಿಕೆ ನೀಡುವುದು ಹಾಗೂ 2030ರ ವೇಳೆಗೆ ಜಗತ್ತಿನಾದ್ಯಂತ ಪ್ರತಿಯೊಬ್ಬರಿಗೂ ಸ್ವಚ್ಛ ಕುಡಿಯುವ ನೀರೊದಗಿಸುವುದು, ನೈರ್ಮಲ್ಯ ಕಾಪಾಡುವುದು ಜಲ ದಿನಾಚರಣೆಯ ಮುಖ್ಯ ಗುರಿಯಾಗಿದೆ.

ಇದನ್ನೂ ಓದಿ
Image
ಸುನಿತಾ ವಿಲಿಯಮ್ಸ್ ನಂತೆ ವಿಜ್ಞಾನಿಯಾಗಲು ಬಯಸುವಿರಾ? ಸಿದ್ದತೆ ಹೇಗಿರಬೇಕು?
Image
AI ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಹಲವು ಅವಕಾಶಗಳಿವೆ!
Image
9 ವಿವಿ ಮುಚ್ಚಲ್ಲ: ಬಿಎಸ್​​ವೈ ಮೊಮ್ಮಗನ ಉದಾಹರಣೆಯೊಂದಿಗೆ ಡಿಕೆಶಿ ಸ್ಪಷ್ಟನೆ
Image
SSLC ಪ್ರಶ್ನೆ ಪತ್ರಿಕೆ ಲೀಕ್: ಯೂಟ್ಯೂಬ್, ಇನ್​ಸ್ಟಾದಲ್ಲಿ ವೈರಲ್​!

ಇದನ್ನೂ ಓದಿ: ಬರಿಗಾಲಿನಲ್ಲಿ ನಡೆಯುವುದು ಒಳ್ಳೆಯದೇ? ಈ ಮುನ್ನೆಚ್ಚರಿಕೆ ಬೇಕು

ನಿಮಗಿದು ಗೊತ್ತೆ?

*2040ರ ವೇಳೆಗೆ ಜಗತ್ತಿನಲ್ಲಿ ನೀರಿನ ಬೇಡಿಕೆ ಈಗಿರುವುದಕ್ಕಿಂತ ಶೇ.50ರಷ್ಟು ಹೆಚ್ಚಾಗಲಿದೆ.

*ಮಕ್ಕಳಲ್ಲಿ ಅತಿಸಾರ ಮತ್ತಿತರ ಕಾಯಿಲೆಗಳು ಹೆಚ್ಚುತ್ತಿರುವುದಕ್ಕೆ ನೈರ್ಮಲ್ಯ ಕೊರತೆ ಹಾಗೂ ಅಸುರಕ್ಷಿತ ಕುಡಿಯುವ ನೀರಿನ ಸೇವನೆಯೇ ಪ್ರಮುಖ ಕಾರಣವಾಗಿದೆ.

*ಅಶುದ್ಧ ನೀರಿನ ಸೇವನೆಯಿಂದ ವಿಶ್ವಾದ್ಯಂತ ವಾರ್ಷಿಕ 3 ಲಕ್ಷಕ್ಕೂ ಹೆಚ್ಚು ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

*ಪ್ರಸ್ತುತ ಮೂರರಲ್ಲಿ ಒಬ್ಬರಿಗೆ ಕುಡಿಯಲು ಶುದ್ಧ ನೀರು ದೊರಕುತ್ತಿಲ್ಲ.

ನೀರಿನ ಮಿತ ಬಳಕೆಯ ಅನುಸರಿಸುವ ಜತೆಗೆ ಪೋಲು ತಪ್ಪಿಸುವುದು ಪ್ರತಿಯೊಬ್ಬರ ಧ್ಯೇಯವಾಗಬೇಕು. ಮಣ್ಣನ್ನು ಭೂಮಿಗೆ ಇಂಗಿಸಲು ಹಾಗೂ ನೀರಿನ ಪುನರ್ಬಳಕೆಗೆ ಆದ್ಯತೆ ನೀಡಬೇಕು. ಜೊತೆಗೆ ನಮ್ಮ ಮನೆ ಮತ್ತು ಸುತ್ತಮುತ್ತಲು ಸಸಿಗಳನ್ನು ನೆಡುವುದು, ಜಲ ಮೂಲಗಳನ್ನು ಸಂರಕ್ಷಿಸುವುದು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಾಗಾಗಿ ನೀರಿನ್ನು ಅತಿಯಾಗಿ ಬಳಸದೆಯೇ ನೀರನ್ನು ಉಳಿಸುವ ಪ್ರಯತ್ನ ಮಾಡೋಣ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 am, Sat, 22 March 25