Sign In

By signing in or creating an account, you agree with Associated Broadcasting Company's Terms & Conditions and Privacy Policy.

Miss AI Beauty Contest :ವಿಶ್ವದಲ್ಲೇ ಪ್ರಥಮ ಬಾರಿಗೆ ಮಿಸ್ AI ಸ್ಪರ್ಧೆ; ಇಲ್ಲಿ ಎಲ್ಲವೂ ಕೃತಕ!

ವರ್ಲ್ಡ್​​​ AI ಕ್ರಿಯೇಟರ್​​​​ ಅವಾರ್ಡ್ಸ್​​​​​​ (WAICAs) ವಿಶ್ವದಲ್ಲೇ ಪ್ರಥಮ ಬಾರಿಗೆ ಮಿಸ್ AI ಸ್ಪರ್ಧೆ ಆಯೋಜಿಸುತ್ತಿದೆ. ಈ ಸೌಂದರ್ಯ ಸ್ಪರ್ಧೆಯನ್ನು ಟೆಕ್​​ ಪ್ರಪಂಚದ 'ಆಸ್ಕರ್​​​​' ಎಂದು ಕರೆಯಲಾಗುತ್ತಿದೆ. ಸ್ಪೇನ್ ದೇಶದ ಮೊದಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ ಮಾಡೆಲ್ ಐಟಾನಾ ಲೋಪೆಜ್​ ಮತ್ತು ಮತ್ತೊಂದು ಪ್ರಭಾವಿ ಎಐ ಮಾಡೆಲ್​​ ಎಮಿಲಿ ಪೆಲ್ಲೆಗ್ರಿನಿ ಈ ಸೌಂದರ್ಯ ಸ್ಪರ್ಧೆಯ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ.

Miss AI Beauty Contest :ವಿಶ್ವದಲ್ಲೇ ಪ್ರಥಮ ಬಾರಿಗೆ ಮಿಸ್ AI ಸ್ಪರ್ಧೆ; ಇಲ್ಲಿ ಎಲ್ಲವೂ ಕೃತಕ!
ವಿಶ್ವದಲ್ಲೇ ಪ್ರಥಮ ಬಾರಿಗೆ ಮಿಸ್ AI ಸ್ಪರ್ಧೆ
Follow us
ಅಕ್ಷತಾ ವರ್ಕಾಡಿ
|

Updated on: Apr 18, 2024 | 3:16 PM

ಎಐ (AI) ವಿಶ್ವದಾದ್ಯಂತ ವ್ಯಾಪಕವಾಗಿ ಬಳಕೆ ಆಗುತ್ತಿದ್ದು, ಈ ಮೂಲಕ ತಂತ್ರಜ್ಞಾನ ವಿಭಾಗದಲ್ಲಿ ಹೊಸ ಕ್ರಾಂತಿಯೇ ಸೃಷ್ಟಿಮಾಡಿದೆ. ತಾಂತ್ರಿಕ ಕ್ಷೇತ್ರದಿಂದ ಹಿಡಿದು ಶಿಕ್ಷಣ ಕ್ಷೇತ್ರದವರೆಗೆ ಹಲವಾರು ಉದ್ಯೋಗಿಗಳ ಕೆಲಸವನ್ನೂ ಕಸಿದುಕೊಂಡಿದೆ ಈ ಕೃತಕ ಬುದ್ಧಿಮತ್ತೆ(AI).  ಇಷ್ಟೆಲ್ಲದುರ ನಡುವೆ ಈ AI ಇದೀಗ ಸೌಂದರ್ಯ ಸ್ಪರ್ಧೆಯಲ್ಲೂ ತನ್ನನ್ನು ತೊಡಗಿಸಿಕೊಳ್ಳಲು ಮುಂದಾಗಿದೆ. ಸಾಮಾನ್ಯವಾಗಿ ಮಿಸ್ ಇಂಡಿಯಾ, ಮಿಸ್ ವರ್ಲ್ಡ್, ಮಿಸ್ ಯೂನಿವರ್ಸ್ ಮುಂತಾದ ಸೌಂದರ್ಯ ಸ್ಪರ್ಧೆಗಳ ಬಗ್ಗೆ ನೀವು ಕೇಳಿರುತ್ತೀರಿ. ಆದರೆ ಎಂದಾದರೂ ಮಿಸ್ AI ಸ್ಪರ್ಧೆ ಕೇಳಿದ್ದೀರಾ? ಇದೀಗ ವಿಶ್ವದಲ್ಲೇ ಪ್ರಥಮ ಬಾರಿಗೆ ಮಿಸ್ AI ಸ್ಪರ್ಧೆಯನ್ನೂ ಕೂಡ ಆಯೋಜಿಸಲಾಗಿದೆ.

ಮಿಸ್ ಇಂಡಿಯಾ, ಮಿಸ್ ವರ್ಲ್ಡ್, ಮಿಸ್ ಯೂನಿವರ್ಸ್ ಸ್ಪರ್ಧೆಗಳಂತೆ ಇಲ್ಲಿಯೂ ಕೌಶಲ್ಯ, ಪ್ರತಿಭೆ, ಹಾವಭಾವ ಮುಂತಾದ ಕೆಲವು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಕಂಪ್ಯೂಟರ್ ರಚಿತ ಸುಂದರಿಯರು ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ.

ಇದನ್ನೂ ಓದಿ: ಸಿಂಗಲ್​​​ ಬಾಯ್ಸ್​​​ ​​​​ ನಿಮ್ಮ ಒಂಟಿತನವನ್ನು ಹೋಗಲಾಡಿಸಲು ಬಂದಿದ್ದಾಳೆ AI ಗೆಳತಿ

ವರ್ಲ್ಡ್​​​ AI ಕ್ರಿಯೇಟರ್​​​​ ಅವಾರ್ಡ್ಸ್​​​​​​ (WAICAs) ಆಯೋಜಿಸುತ್ತಿರುವ ಈ ಸೌಂದರ್ಯ ಸ್ಪರ್ಧೆಯನ್ನು ಟೆಕ್​​ ಪ್ರಪಂಚದ ‘ಆಸ್ಕರ್​​​​’ ಎಂದು ಕರೆಯಲಾಗುತ್ತಿದೆ. ಸ್ಪೇನ್ ದೇಶದ ಮೊದಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ ಮಾಡೆಲ್ ಐಟಾನಾ ಲೋಪೆಜ್​ ಮತ್ತು ಮತ್ತೊಂದು ಪ್ರಭಾವಿ ಎಐ ಮಾಡೆಲ್​​ ಎಮಿಲಿ ಪೆಲ್ಲೆಗ್ರಿನಿ ಈ ಸೌಂದರ್ಯ ಸ್ಪರ್ಧೆಯ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ. ಇದಲ್ಲದೇ ಇಬ್ಬರು ಮನುಷ್ಯರು ಕೂಡ ಈ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಇರುತ್ತಾರೆ.

ಈ ಮಿಸ್ AI ಸ್ಪರ್ಧೆಯಲ್ಲಿ ಗೆದ್ದ ಕೃತಕ ಬುದ್ಧಿಮತ್ತೆಯ ಸುಂದರಿಗೆ 15 ಲಕ್ಷ ಬಹುಮಾನವೂ ಸಿಗಲಿದೆ. ಏಪ್ರಿಲ್ 21 ರಿಂದ ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ ಸುಂದರಿಯರ ಅರ್ಜಿ ಆಹ್ವಾನಿಸಲಾಗುತ್ತಿದ್ದು, ಮೇ 10 ರಂದು ವಿಜೇತರನ್ನು ಘೋಷಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು