Om shaped Temple: ವಿಶ್ವದ ಮೊದಲ ‘ಓಂ’ ಆಕಾರದ ದೇವಾಲಯ ಎಲ್ಲಿದೆ ಗೊತ್ತಾ?

ವಿಶ್ವದ ಮೊದಲ 'ಓಂ' ಆಕಾರದ ದೇವಾಲಯ ಇದೀಗಾ ಭಾರೀ ಸುದ್ದಿಯಲ್ಲಿದೆ. ದೇವಾಲಯದ ನಿರ್ಮಾಣದ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಈ ವರ್ಷ 2024 ಮುಗಿಯುವುದರೊಳಗೆ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ವರದಿಯಾಗಿದೆ.

Om shaped Temple: ವಿಶ್ವದ ಮೊದಲ 'ಓಂ' ಆಕಾರದ ದೇವಾಲಯ ಎಲ್ಲಿದೆ ಗೊತ್ತಾ?
World's first Om Shaped Shiva Temple
Follow us
ಅಕ್ಷತಾ ವರ್ಕಾಡಿ
|

Updated on: May 23, 2024 | 6:15 PM

ರಾಜಸ್ಥಾನದ ಪಾಲಿ ಜಿಲ್ಲೆಯ ಜಡಾನ್ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ‘ಓಂ’ ಆಕಾರದ ದೇವಾಲಯ(Om shaped Temple) ವು ಇದೀಗಾ ವಿಶ್ವದೆಲ್ಲಡೆ ಭಾರೀ ಸುದ್ದಿಯಲ್ಲಿದೆ. ಪ್ರಪಂಚದಲ್ಲೇ ಓಂ ಆಕಾರದಲ್ಲಿ ನಿರ್ಮಿಸಲಾದ ಮೊದಲ ದೇವಾಲಯ ಇದಾಗಿದೆ. 1995ರಲ್ಲಿ ಈ ಮಹಾ ದೇವಾಲಯದ ಶಂಕುಸ್ಥಾಪನೆ ನಡೆದಿದ್ದು, ಈ ದೇವಾಲಯದ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಈ ವರ್ಷ 2024 ಮುಗಿಯುವುದರೊಳಗೆ ದೇವಾಲಯದ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ವರದಿಯಾಗಿದೆ.

250 ಎಕರೆ ಜಾಗದಲ್ಲಿ ಓಂ ಆಕಾರದ ಈ ಶಿವ ದೇವಾಲಯ ನಿರ್ಮಾಣವಾಗುತ್ತಿದೆ. ಈ ದೇವಾಲಯದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಫೆಬ್ರವರಿ 10-19 ರ ನಡುವೆ ನಡೆಯಲಿದೆ ಎಂದು ವರದಿಯಾಗಿದೆ. ಈ ಶಿವ ದೇವಾಲಯದಲ್ಲಿ 1008 ವಿವಿಧ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದ್ದು,ಈ ಓಂ ಆಕಾರದ ದೇವಾಲಯದ ಆವರಣದಲ್ಲಿ 108 ಕೊಠಡಿಗಳಿವೆ. ಇದರ ಗೋಪುರವು 135 ಅಡಿ ಎತ್ತರವಾಗಿದೆ ಮತ್ತು ದೇವಾಲಯದ ಮಧ್ಯಭಾಗದಲ್ಲಿ ಗುರು ಮಹಾರಾಜ್ ಸ್ವಾಮಿ ಮಾಧವಾನಂದರ ಸಮಾಧಿ ಇದೆ. ಮೇಲ್ಭಾಗದಲ್ಲಿ ಶಿವಲಿಂಗವನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ: ಭಾರತದ ಈ ದೇವಾಲಯಗಳಿಗೆ ಪುರುಷರಿಗೆ ಪ್ರವೇಶವಿಲ್ಲ

ಈ ದೇವಾಲಯದ ಶಂಕುಸ್ಥಾಪನೆ 1995 ರಲ್ಲಿ ನಡೆದಿದ್ದು, ಕಳೆದ 25 ವರ್ಷಗಳಿಂದ ಈ ದೇವಾಲಯದ ನಿರ್ಮಾಣ ಕಾರ್ಯ ನಡೆಯುತ್ತಿದೆ. ಓಂ ಆಶ್ರಮವನ್ನು ಉತ್ತರ ಭಾರತದ ವಾಸ್ತುಶಿಲ್ಪದ ಆಧಾರದ ಮೇಲೆ ಜದನ್ ಪಾಲಿ ನಾಗರ ಶೈಲಿಯಲ್ಲಿ ನಿರ್ಮಿಸಲಾಗುತ್ತಿದೆ. ಓಂ ಆಕಾರವು ಸುಮಾರು ಅರ್ಧ ಕಿಲೋಮೀಟರ್ ತ್ರಿಜ್ಯದಲ್ಲಿ ಹರಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ