AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Expensive House: 100 ಕೊಠಡಿಗಳಿರುವ ವಿಶ್ವದ ಅತ್ಯಂತ ದುಬಾರಿ ಮನೆ ಹೇಗಿದೆ ನೋಡಿ

ಮಾರಾಟಕ್ಕೆ ಸಿದ್ಧವಾಗಿರುವ ವಿಶ್ವದ ಅತ್ಯಂತ ದುಬಾರಿ ಮನೆಯ ಬೆಲೆ ಕೇಳಿ ಕೋಟ್ಯಾಧಿಪತಿಗಳು ಕೂಡ ಅದನ್ನು ಖರೀದಿಸುವ ಮೊದಲು 10 ಬಾರಿ ಯೋಚಿಸುತ್ತಾರೆ. ಮಾರುಕಟ್ಟೆಯಲ್ಲಿ ಇದರ ಬೆಲೆ 363 ಮಿಲಿಯನ್ ಪೌಂಡ್ ಅಂದರೆ ರೂ. 3743 ಕೋಟಿ ರೂ.ಗಿಂತ ಹೆಚ್ಚು ಎಂದು ಅಂದಾಜಿಸಲಾಗಿದೆ.

Expensive House: 100 ಕೊಠಡಿಗಳಿರುವ ವಿಶ್ವದ ಅತ್ಯಂತ ದುಬಾರಿ ಮನೆ ಹೇಗಿದೆ ನೋಡಿ
World’s most expensive house
ಅಕ್ಷತಾ ವರ್ಕಾಡಿ
|

Updated on:Apr 22, 2024 | 10:01 AM

Share

ಫ್ರಾನ್ಸ್ ರಾಜಧಾನಿ ಪ್ಯಾರಿಸ್ ಬಳಿ ಇರುವ ವಿಶ್ವದ ಅತ್ಯಂತ ದುಬಾರಿ ಮನೆ ಇದೀಗ ಭಾರೀ ಸುದ್ದಿಯಲ್ಲಿದೆ. ಯಾಕೆಂದರೆ ಈ ಭವ್ಯ ಅರಮನೆ ಇದೀಗ ಮಾರಾಟಕ್ಕೆ ಸಿದ್ಧವಾಗಿದೆ. ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಾಣವಾಗಿರುವ ಈ ಮನೆ 100 ಕೊಠಡಿಗಳನ್ನು ಹೊಂದಿದೆ. ಒಂದು ಕಾಲದಲ್ಲಿ ರಾಜಮನೆತನದ ಆಸ್ತಿಯಾಗಿದ್ದ ಈ ಮನೆ ಎಲ್ಲ ರೀತಿಯ ಐಷಾರಾಮಿ ಸೌಲಭ್ಯಗಳನ್ನು ಒಳಗೊಂಡಿದೆ. ಸದ್ಯ ಈ ಮನೆಯ ಬೆಲೆ ಕೇಳಿ ಕೋಟ್ಯಾಧಿಪತಿಗಳು ಕೂಡ ಅದನ್ನು ಖರೀದಿಸುವ ಮೊದಲು 10 ಬಾರಿ ಯೋಚಿಸುತ್ತಾರೆ. ಮಾರುಕಟ್ಟೆಯಲ್ಲಿ ಇದರ ಬೆಲೆ 363 ಮಿಲಿಯನ್ ಪೌಂಡ್ ಅಂದರೆ ರೂ. 3743 ಕೋಟಿ ರೂ.ಗಿಂತ ಹೆಚ್ಚು ಎಂದು ಅಂದಾಜಿಸಲಾಗಿದೆ.

ಪ್ಯಾರಿಸ್ ಬಳಿಯ ಸೀನ್-ಎಟ್-ಮಾರ್ನೆಯಲ್ಲಿ ನೆಲೆಗೊಂಡಿರುವ ಈ ಮನೆಯನ್ನು ‘ಚಟೌ ಡಿ’ಅರ್ಮೆನ್ವಿಲಿಯರ್ಸ್’ ಎಂದು ಕರೆಯಲಾಗುತ್ತದೆ. ಇದು ವಿಶ್ವದ ಅತ್ಯಂತ ದುಬಾರಿ ಮನೆ ಎಂದು ಪರಿಗಣಿಸಲಾಗಿದೆ. ಈ ಭವ್ಯ ಕಟ್ಟಡವನ್ನು 12 ನೇ ಶತಮಾನದ ಅರಮನೆಯ ಅಡಿಪಾಯದ ಮೇಲೆ ನಿರ್ಮಿಸಲಾಗಿದೆ. 19 ನೇ ಶತಮಾನದ ಉತ್ತರಾರ್ಧದಲ್ಲಿ ರಾಥ್‌ಸ್ಚೈಲ್ಡ್ ಬ್ಯಾಂಕಿಂಗ್ ಸಾಮ್ರಾಜ್ಯದಿಂದ ಖರೀದಿಸಲಾದ ಈ ಅರಮನೆಯನ್ನು 1980 ರ ದಶಕದಲ್ಲಿ ಮೊರಾಕೊದ ಕಿಂಗ್ ಹಸನ್ II ​​ಖರೀದಿಸಿದ್ದರು.

ಮತ್ತಷ್ಟು ಓದಿ: Viral News: ಶ್ರೀಕೃಷ್ಣನ ಮೂರ್ತಿಯನ್ನೇ ಮದುವೆಯಾದ 23ರ ಯುವತಿ

ನಂತರ 2008 ರಲ್ಲಿ ಅವರು ಈ ಬೃಹತ್ ಆಸ್ತಿಯನ್ನು ಅಪರಿಚಿತ ಖರೀದಿದಾರರಿಗೆ ಮಾರಾಟ ಮಾಡಲಾಯಿತು. ಆಗ ಇದರ ಬೆಲೆ 170 ಮಿಲಿಯನ್ ಪೌಂಡ್ ಆಗಿತ್ತು ಆದರೆ ಈಗ ಈ ಮನೆಯ ಬೆಲೆ ಸುಮಾರು 425 ಮಿಲಿಯನ್ ಪೌಂಡ್ ಆಗಿರಬಹುದು ಎಂದು ಕೆಲವು ರಿಯಲ್ ಎಸ್ಟೇಟ್ ಏಜೆಂಟರು ಮತ್ತು ತಜ್ಞರು ತಿಳಿಸಿರುವುದು ವರದಿಯಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:01 am, Mon, 22 April 24

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು